ರಾಮಣ್ಣ ಶೆಟ್ಟಿ
ಭದ್ರಾವತಿ, ಏ. ೭ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ, ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರಾಮಣ್ಣ ಶೆಟ್ಟಿ(೭೨) ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದರು. ರಾಮಣ್ಣ ಶೆಟ್ಟಿ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಇವರು ಕ್ರೀಡಾಪಟುಗಳಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಹುತ್ತಾ ಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರು, ಕ್ರೀಡಾಪಟುಗಳು, ತಾಲೂಕು ಬಿಜೆಪಿ ಮಂಡಲ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.