ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘದ ಪ್ರಸಕ್ತ ಸಾಲಿನ ನೂತನ ಕಾರ್ಯಕಾರಿ ಮಂಡಳಿ ಮೊದಲನೇ ವಾರ್ಷಿಕ ಮಹಾಸಭೆ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆಯಿತು.
ಭದ್ರಾವತಿ, ಜೂ. ೧೮: ತಾಲೂಕು ಛಾಯಾಗ್ರಾಹಕರ ಸಂಘದ ಪ್ರಸಕ್ತ ಸಾಲಿನ ನೂತನ ಕಾರ್ಯಕಾರಿ ಮಂಡಳಿ ಮೊದಲನೇ ವಾರ್ಷಿಕ ಮಹಾಸಭೆ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆಯಿತು.
ಸಂಘದ ಬೈಲಾ ತಿದ್ದುಪಡಿ ಹಾಗು ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಸದಸ್ಯರಿಗೆ ಗುರುತಿನ ವಿತರಣೆ ನಡೆಯಿತು. ಆರಂಭದಲ್ಲಿ ನಿಧನ ಹೊಂದಿರುವ ಸಂಘದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಟಿ ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಂಜೀವರಾವ್ ಸಿಂಧ್ಯಾ ಸ್ವಾಗತಿಸಿದರು. ಚಲುವರಾಜ್ ಪ್ರಾರ್ಥಿಸಿದರು.