ಸೋಮವಾರ, ಜುಲೈ 10, 2023
ಮಣಿಪುರ, ಜು. ೧೦ : ಶಾಂತಿ ಮರುಸ್ಥಾಪನೆಗೆ ಪ್ರಧಾನಿ ಮಧ್ಯ ಪ್ರವೇಶಿಸಲು ಒತ್ತಾಯ
ಅಡಕೆ ತೋಟ ಅಕ್ರಮ ಖಾತೆ
ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಸಂಬಂಧವಿಲ್ಲದ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜು. 10: ಸಂಬಂಧವಿಲ್ಲದ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ಹೊಳೆಹೊನ್ನೂರು ಹೋಬಳಿ, ಮಲ್ಲಿಗೇನಹಳ್ಳಿ ಗ್ರಾಮದ ಸ.ನಂ.31 ರಲ್ಲಿ ರೈತ ಲೋಕೇಶಪ್ಪ ಅವರ ಕುಟುಂಬಕ್ಕೆ ಸೇರಿದ ಸುಮಾರು 1-09 ಎಕರೆ ಅಡಕೆ ತೋಟವನ್ನು ಅಕ್ರಮವಾಗಿ ಸಂಬಂಧವಿಲ್ಲದ ವ್ಯಕ್ತಿಗೆ ಖಾತೆ ಮಾಡಿರುವ ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಸೇರಿದಂತೆ ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಸಂಘದ ಅಧ್ಯಕ್ಷ ಎಚ್.ಪಿ.ಹಿರಿಯಣ್ಣಯ್ಯ, ಪ್ರಧಾನ ಕಾರ್ಯದರ್ಶಿ ರಾಮಚಂದ್ರರಾವ್ ಘೋರ್ಪಡೆ, ಪ್ರಮುಖರಾದ ಡಿ.ವಿ ವೀರೇಶ್, ಶರತ್ಚಂದ್ರ, ಚಂದ್ರಶೇಖರ್, ಮಂಜುನಾಥ್, ಕರಿಬಸಪ್ಪ, ಶಿವಣ್ಣ ಸೇರಿದಂತೆ ಉಪಸ್ಥಿತರಿದ್ದರು.
ಜೈನ ಮುನಿ ಹತ್ಯೆಗೆ ಖಂಡನೆ : ಮೌನ ಮೆರವಣಿಗೆ
ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜೈನ ಧರ್ಮದ ಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡಿಸಿ ಸೋಮವಾರ ಭದ್ರಾವತಿ ಹಳೆನಗರದ ಜೈನ ಮಂದಿರದಿಂದ ಬೆಳಗ್ಗೆ ಜೈನ ಸಮುದಾಯದವರು ಮೌನ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಭದ್ರಾವತಿ, ಜು. 10: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜೈನ ಧರ್ಮದ ಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡಿಸಿ ಸೋಮವಾರ ಹಳೆ ನಗರದ ಜೈನ ಮಂದಿರದಿಂದ ಬೆಳಗ್ಗೆ ಜೈನ ಸಮುದಾಯದವರು ಮೌನ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತ ಮೂಲಕ ತಹಸೀಲ್ದಾರ್ ಕಚೇರಿವರೆಗೂ ಮೌನ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.
ಪ್ರಮುಖರು ಮಾತನಾಡಿ, ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು, ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು. ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ದುಷ್ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ ಶಾಂತಿ, ಸೌಹಾರ್ದತೆ ಹಾಗು ಅಹಿಂಸಾ ಮಾರ್ಗದಲ್ಲಿ ಸಾಗುತ್ತಿರುವ ಜೈನ ಸಮುದಾಯಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.
ಮೌನ ಮೆರವಣಿಗೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್), ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು.
ಜೈನ ಸಮಾಜದ ಅಧ್ಯಕ್ಷ ರತನ್ಚಂದ್ ಜೈನ್, ಸಂಚಾಲಕರಾದ ಸಂಪತ್ರಾವ್ ಬಾಂಟಿಯಾ, ಸಂದೇಶ್ ಜೈನ್ ಮೆಹ್ತಾ, ಭರತ್ಕುಮಾರ್, ರಾಹುಲ್ಜೈನ್, ಗೌತಮ್ ಚಂದ್, ರಾಜ್ಕುಮಾರ್, ಪ್ರೇಮ್ಕುಮಾರ್, ಅನಿತಾ, ಕಾಂಚನಾ, ಲೇಖನಾ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.