ಕರ್ನಾಟಕ ರಾಜ್ಯ ವಕೀಲರ ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್ ವಿಶಾಲ್ ರಘು ಗುರುವಾರ ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಭದ್ರಾವತಿ, ಜು. ೧೩: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಆ. 12 ಮತ್ತು 13 ಎರಡು ದಿನಗಳ 10 ನೇ ರಾಜ್ಯ ವಕೀಲರ ಸಮ್ಮೇಳ ಆಯೋಜಿಸಲಾಗಿದೆ ಎಂದು ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್. ವಿಶಾಲ್ ರಘು ಹೇಳಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು 14 ವರ್ಷಗಳ ನಂತರ ಸಾಂಸ್ಕೃತಿಕ ನಗರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸಮ್ಮೇಳನ ನಡೆಸಲಾಗುತ್ತಿದೆ. ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 10 ರಿಂದ 12
ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಮ್ಮೇಳನದ ಪ್ರತಿನಿಧಿ ಶುಲ್ಕ ರು. 1000 ನಿಗದಿಪಡಿಸಲಾಗಿದೆ. ಭಾಗವಹಿಸಿದವರಿಗೆ ನೆನೆಪಿನ ಕಾಣಿಕೆ ನೀಡಲಾಗುವುದು. ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ಭಾಗವಹಿಸುವವರು ಜು. 25 ರೊಳಗೆ ನೊಂದಾಯಿಸಿಕೊಳ್ಳಬೇಕು. ನಂತರ ಬರುವವರು ಅಧ್ಯಕ್ಷರು, ಕಾರ್ಯದರ್ಶಿಗಳ ಗುರುತು ಪತ್ರದೊಂದಿಗೆ ಭಾಗವಹಿಸಬಹುದಾಗಿದೆ. ಸಮ್ಮೇಳನದಲ್ಲಿ ವಕೀಲರು ಎದುರಿಸುತ್ತಿರುವ ಸಂಕಷ್ಟ ಸವಾಲುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಬೋಪಣ್ಣ, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹಾಗು ಕಾನೂನು ಸಚಿವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ
ದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಭಾಗವಹಿಸಿ ಮಹಿಳೆಯರ ಹಕ್ಕುಗಳು ಮತ್ತು ಸವಾಲುಗಳ ಬಗ್ಗೆ ಮಾತನಾಡಲಿದ್ದಾರೆ ಎಂದರು.
ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಎಲ್. ಶ್ರೀನಿವಾಸ್ ಬಾಬು, ಜಿಲ್ಲಾಧ್ಯಕ್ಷ ಬಿ.ಜಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಕಾರ್ಯದರ್ಶಿ ವಿ. ಉದಯ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಮಗೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.