ಕುಟುಂಬ ವೈದ್ಯ ಡಾ. ಕೃಷ್ಣ ಎಸ್. ಭಟ್
ಭದ್ರಾವತಿ, ಜು. ೨೨: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಶಾಖೆ, ಕನ್ನಡ ವೈದ್ಯ ಬರಹಗಾರರ ಸಮಿತಿ ಮತ್ತು ವಾಸವಿ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಜು.೨೩ರ ಭಾನುವಾರ ಸಂಜೆ ೬.೩೦ರಿಂದ ೭.೩೦ರವರೆಗೆ ಸಾಹಿತಿಗಳೊಂದಿಗೆ ಒಂದು ಸಂಜೆ ೧೦೧ನೇ ಆನ್‌ಲೈನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಕುಟುಂಬ ವೈದ್ಯ ಡಾ. ಕೃಷ್ಣ ಎಸ್. ಭಟ್ ಆರೋಗ್ಯದ ವಿವಿಧ ಆಯಾಮಗಳು ಕುರಿತು ಮಾಹಿತಿ ನೀಡಲಿದ್ದಾರೆ. ಭಾ.ವೈ.ಸಂ ರಾಜ್ಯಾಧ್ಯಕ್ಷ ಡಾ. ಶಿವಕುಮಾರ್ ಲಕ್ಕೋಳ್, ಕಾರ್ಯದರ್ಶಿ ಡಾ.ಬಿ.ಪಿ ಕರುಣಾಕರ, ಕನ್ನಡ ವೈದ್ಯ ಬರಹಗಾರರ ಸಮಿತಿ ಅಧ್ಯಕ್ಷ ಡಾ. ಶಿವಾನಂದ ಕುಬಸದ, ವಾಸವಿ ಸಾಹಿತ್ಯ ಕಲಾ ವೇದಿಕೆಯ ಡಾ. ವೀಣಾ ಎನ್ ಸುಳ್ಯ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ. ಆಸಕ್ತರು ಝೂಮ್ ಲಿಂಕ್ https://bit.ly/2UbE22Z , ಮೀಟಿಂಗ್ ಐಡಿ : ೫೯೪೦೭೬೫೭೭೪, ಪಾಸ್ ಕೋಡ್ : imakab ಸಂಪರ್ಕಿಸಬಹುದಾಗಿದೆ.