ಭದ್ರಾವತಿ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೭೭ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ ಮಕ್ಕಳಿಂದ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ವಿವಿಧೆಡೆ ೭೭ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಕಾರ್ಖಾನೆಯ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೭೭ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಖಾನೆಯ ಭದ್ರತಾ ಪಡೆ, ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್‌ಸಿಸಿ ಹಾಗು ನಗರದ ವಿವಿಧ ಪ್ರೌಢಶಾಲೆಗಳು ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಂದ ಪಥಸಂಚಲನ, ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಬ್ಯಾಂಡ್ ಸೆಟ್ ಹಾಗೂ ದೇಶ ಭಕ್ತಿಗೀತೆ ಗಾಯನ ನಂತರ ಬಾಲಭಾರತಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮೈಜಿಓಟಿ.ಇನ್ (MyGov.in) ಆಯೋಜಿಸಿದ್ದ ರಾಷ್ಟ್ರೀಯ ಪೋಸ್ಟರ್ ವಿನ್ಯಾಸ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಕಾರ್ಖಾನೆಯ ನೀರು ಸರಬರಾಜು ಇಲಾಖೆಯ ಜೆ.ನಾಗೇಂದ್ರ ಅವರ ಪುತ್ರಿ ಶ್ರೇಯಾ ಎನ್. ಗೌಡ ಹಾಗೂ ಕುವೆಂಪು ವಿಶ್ವವಿದ್ಯಾನಿಲಯ ದೂರಶಿಕ್ಷಣ ನಡೆಸಿದ ಪದವಿ ಕಲಾ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಕಾರ್ಖಾನೆಯ ಪ್ರಯೋಗಾಲಯ ವಿಭಾಗದ ಮೇಲ್ವಿಚಾರಕ ಎಲ್. ಮಧುಕುಮಾರ್‌ರವರ ಪತ್ನಿ ಎಚ್.ಎಂ ಪುಷ್ಪಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಅತಿಥಿಗಳನ್ನು ಬರಮಾಡಿಕೊಂಡರು. ಸಹಾಯಕ ಮಹಾ ಪ್ರಬಂಧಕರು (ಹಣಕಾಸು) ಇಳಯರಾಜ ನಿರೂಪಿಸಿದರು. ಸಾರ್ವಜನಿಕ ಸಂಪರ್ಕ, ಟ್ರಾಫಿಕ್, ನಗರಾಡಳಿತ ಮತ್ತು ಭದ್ರತಾ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಮಿಳು ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ :
ನಗರದ ತರೀಕೆರೆ ರಸ್ತೆಯ ತಮಿಳು ಸಂಘದ ವತಿಯಿಂದ ೭೭ನೇ ಸ್ವಾತಂತ್ರ್ಯ ದಿನಾಚಾರಣೆ ನಡೆಯಿತು. ಸಂಘದ ಅಧ್ಯಕ್ಷ ಜಿ.ಎನ್ ರವಿಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಖಂಜಾಂಚಿ ಎ. ವೀರಭದ್ರನ್, ಸಂಘದ ನಿರ್ದೇಶಕರುಗಳಾದ ಸಿ. ವಡಿವೇಲು, ಮುತ್ತುಸ್ವಾಮಿ, ವಿ. ಮಂಜುಳ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿ. ಮಣಿ ಸ್ವಾಗತಿಸಿದರು. ಸಹ ಕಾರ್ಯದರ್ಶಿ ವಿ. ರಾಜ ವಂದಿಸಿದರು.
ಭದ್ರಾವತಿ ಜನ್ನಾಪುರ ಶ್ರೀ ಮಾರಿಕಾಂಬ ಸೇವಾ ಸಮಿತಿ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಜನ್ನಾಪುರ ಅಂಬೇಡ್ಕರ್ ಸಮುದಾಯ ಭವನ:
ಜನ್ನಾಪುರ ಶ್ರೀ ಮಾರಿಕಾಂಬ ಸೇವಾ ಸಮಿತಿ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ವಿರೂಪಾಕ್ಷಪ್ಪ ಧ್ವಜಾರೋಹಣ ನೆರವೇರಿಸಿದರು. ಪ್ರಮುಖರಾದ ತಮಟೆ ಜಗದೀಶ್, ಎಲ್. ಸುರೇಶ್, ಎಂ. ಮಂಜುನಾಥ್, ಎಸ್. ಪಂಕಜ್, ಸಿ.ಎಂ ಮೋಹನ್ ಕುಮಾರ್, ನರಸಿಂಹಯ್ಯ, ಜಿಂಕ್ ಲೈನ್ ಮಣಿ, ಕಾಣಿಕ್ ರಾಜ್, ಸಿದ್ದರಾಜಣ್ಣ, ಮಂಜುನಾಥ್, ವೆಂಕಟೇಶ್, ರತ್ನ, ಮಧು, ಬಿ. ಕಮಲಾಕರ ಮತ್ತು ಕೆ.ಎಸ್ ರವಿಕುಮಾರ್ ಹಾಗು ಸ್ಥಳೀಯರು ಇನ್ನಿತರರು ಪಾಲ್ಗೊಂಡಿದ್ದರು.