ಕುಮಾರ್
ಭದ್ರಾವತಿ, ಆ. ೨೧: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆವತಿಯಿಂದ ನೀಡಲಾಗುವ `ಶ್ರೀ ರಾಘವೇಂದ್ರ ಸದ್ಭಾವನಾ ಪ್ರಶಸ್ತಿ' ಜನ್ನಾಪುರ ನಿವಾಸಿ ಕುಮಾರ್ ಅವರಿಗೆ ಲಭಿಸಿದೆ.
ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೨ನೇ ಆರಾಧನಾ ಮಹೋತ್ಸವ ಸಂಧರ್ಭದಲ್ಲಿ ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಸೆ.೧ರಂದು ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್ ಸಮೀಪದಲ್ಲಿರುವ ಕೋದಂಡರಾಮ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.