Saturday, September 9, 2023

ಸೆ.15ರಂದು ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯರವರ 163ನೇ ಜಯಂತಿ

    
ಭಾರತರತ್ನ ಸರ್.ಎಂ ವಿಶ್ವೇಶ್ವರಾಯ
     ಭದ್ರಾವತಿ: ನಗರದ ವಿ.ಐ.ಎಸ್.ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ ವತಿಯಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ 163ನೇ ಜಯಂತಿ ಹಾಗೂ ಸರ್ವ ಸದಸ್ಯರ ಸಭೆ ಸೆ.15ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
  ಸಭೆಯ ಅಧ್ಯಕ್ಷತೆ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ವಹಿಸಲಿದ್ದಾರೆ. ಸಭೆಯಲ್ಲಿ ನಿಧನ ಹೊಂದಿದ ಸದಸ್ಯರಿಗೆ ಸಂತಾಪ, ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ. ಸದಸ್ಯರು ತಪ್ಪದೇ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ ಕೋರಿದ್ದಾರೆ.



ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ್, ಕೃಷ್ಣ ಜನ್ಮಾಷ್ಟಮಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ್, ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು.
ಭದ್ರಾವತಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ನಗರದ ಹೊಸಮನೆ ಹಿಂದೂ ಮಹಾಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ್, ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು.
   ಈ ಸಂಬಂಧ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ರಾಧೆಯರ ಪ್ರದರ್ಶನದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಪ್ರದರ್ಶನದಲ್ಲಿ ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಬಹುಮಾನಗಳನ್ನು ನೀಡಲಾಯಿತು.
       ಕ್ಷತ್ರಿಯ ಸತ್ಸಂಗ ಪ್ರಮುಖ ಮಹಾಬಲೇಶ್, ನಗರಸಭಾ ಸದಸ್ಯ ಮಣಿ ಎಎನ್ಎಸ್, ಜಿಲ್ಲಾ ಕಾರ್ಯದರ್ಶಿ ನಾರಾಯಣ ವರ್ಣೇಕರ್, ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ಜಿಲ್ಲಾ ಸಹ ಕಾರ್ಯದರ್ಶಿ ಧರಣೇಶ್, ಜಿಲ್ಲಾ ಸೇವಾ ಪ್ರಮುಖ್ ದತ್ತಾತ್ರಿ, ಜಿಲ್ಲಾ ಸಂಯೋಜಕ ರಾಘವನ್ ವಡಿವೇಲು, ಆಕಾಶ್, ಸಂಜು, ಕಿರಣ್, ಸಾವಾಯಿ ಸಿಂಗ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.