Tuesday, September 26, 2023

ವಿಐಎಸ್ಎಲ್ ಕಾರ್ಖಾನೆಯಲ್ಲಿ ಬೋನಿಗೆ ಬಿದ್ದ ಚಿರತೆ ಮರಿ






ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಚಿರತೆ ಮರಿಯೊಂದು ಸಿಕ್ಕಿಬಿದ್ದಿರುವ ಘಟನೆ  ಬುಧವಾರ ನಡೆದಿದೆ.

ಕಾರ್ಖಾನೆಯಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದ ಚಿರತೆ ಕಾಣಿಸಿಕೊಂಡಿರುವುದಾಗಿ  ಆಡಳಿತ ಮಂಡಳಿ ಅಧಿಕಾರಿಗಳು ಮತ್ತು ಕಾರ್ಮಿಕರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿತ್ತು. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಖಾನೆಗೆ  ಭೇಟಿ ನೀಡಿ ಚಿರತೆ ಕಾಣಿಸಿಕೊಂಡಿರುವ ಸ್ಥಳ  ಪರಿಶೀಲನೆ ನಡೆಸಿದ್ದರು ದಲ್ಲಿ ಚಿರತೆ  ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಬೋನ್ ಇಡಲಾಗಿತ್ತು. 

ಆದರೆ ಚಿರತೆ ಮಾತ್ರ ಪತ್ತೆಯಾಗಿರಲಿಲ್ಲ. ಇದೀಗ ಬುಧವಾರ ಬೆಳಗ್ಗೆ ಬೋನಿನಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ನಾಗರಾಜ್ ಹಾಗೂ ಕಾರ್ಖಾನೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಆಗಮಿಸಿ ಚಿರತೆಗೆ ಮದ್ದು ಬರುವ ಚುಚ್ಚುಮದ್ದು ನೀಡಿದ್ದು, ಕೆ ಚಿರತೆಯನ್ನು ಅರಣ್ಯಕ್ಕೆ ಬಿಟ್ಟುಬಿಡಲು ಸಿದ್ಧತೆಗಳು ನಡೆದಿವೆ.  

ಕಳೆದ ಸುಮಾರು ಒಂದು ವರ್ಷದ ಹಿಂದೆ ಚಿರತೆಯೊಂದು ಕಾರ್ಖಾನೆಗಯ  ವಸತಿ ಗೃಹದಲ್ಲಿ  ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು 8 ಗಂಟೆಗಳ ಕಾಲ ಕಾರ್ಯಾಚರಣೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಕೃತಜ್ಞತೆ

ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಈ ಸಂಬಂಧ ನಡೆದ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಸಂಜೆ ನಿರೀಕ್ಷಿಗೂ ಮೀರಿದ ಜನಸ್ತೋಮ ಕಂಡು ಬಂದಿತು.

    ಭದ್ರಾವತಿ : ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಮಂಗಳವಾರ ಶಾಂತಿಯುತವಾಗಿ ನಡೆಯಿತು.

    ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ಮುಂಭಾಗದ ಭದ್ರಾ ನದಿಯಲ್ಲಿ ಧಾರ್ಮಿಕ ಆಚರಣೆಗಳೊಂದಿಗೆ ವಿಸರ್ಜಿಸಲಾಯಿತು. ಈ ಬಾರಿ ರಾಜಬೀದಿ ಉತ್ಸವ ಮೆರವಣಿಗೆ ತಡವಾಗಿ ಮುಕ್ತಾಯಗೊಂಡಿದ್ದು, ಸಂಜೆ ವೇಳೆಗೆ ಉತ್ಸವ ಮೆರವಣಿಗೆಯಲ್ಲಿ ನಿರೀಕ್ಷೆಗೂ ಮೀರಿದ ಜನಸ್ತೋಮ ಕಂಡು ಬಂದಿತು. ಈ ನಡುವೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು, ಆದರೂ ಸಹ ಮಳೆಯಲ್ಲೂ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು.

    

ಉತ್ಸವ ಮೆರವಣಿಗೆ ಕೆಎಸ್ ಆರ್ ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಸಾಗುತ್ತಿದ್ದಂತೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅಭಿಮಾನಿಗಳು, ಬೆಂಬಲಿಗರು ಅಪ್ಪಾಜಿ ಅವರ ಭಾವಚಿತ್ರ ಪ್ರದರ್ಶಿಸಿ ಸಂಭ್ರಮಿಸಿದರು.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಭಾವಚಿತ್ರ:

    ಉತ್ಸವ ಮೆರವಣಿಗೆ ಕೆಎಸ್ ಆರ್ ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಸಾಗುತ್ತಿದ್ದಂತೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅಭಿಮಾನಿಗಳು, ಬೆಂಬಲಿಗರು ಅಪ್ಪಾಜಿ ಅವರ ಭಾವಚಿತ್ರ ಪ್ರದರ್ಶಿಸಿ ಸಂಭ್ರಮಿಸಿದರು. ಮೆರವಣಿಗೆಯಲ್ಲಿ ಅಪ್ಪಾಜಿ ಕುಟುಂಬಸ್ಥರು ಸಹ ಪಾಲ್ಗೊಂಡಿದ್ದರು.

    ಕ್ಷೇತ್ರದ ಜನತೆಗೆ ಕೃತಜ್ಞತೆ:

    ವಿನಾಯಕ ಮೂರ್ತಿ ವಿಸರ್ಜನೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಹಾಗು ಶಾಂತಿಯುತವಾಗಿ ನಡೆಯಲು ಸಹಕರಿಸಿದ ಪ್ರತಿಯೊಬ್ಬರಿಗೂ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ಭದ್ರಾ ಜಲಾಶಯದಲ್ಲಿ ನೀರಿನ ಕೊರತೆ : ಅಡಕೆ, ತೆಂಗು ಬೆಳೆ ನಾಶವಾಗುವ ಭೀತಿ

ಭದ್ರಾ ಜಲಾಶಯ


    * ಅನಂತಕುಮಾರ್

    ಭದ್ರಾವತಿ : ಭದ್ರಾ ಜಲಾಶಯದಲ್ಲಿ ಈ ಬಾರಿ ನೀರಿನ ಕೊರತೆ ಇದ್ದು, ಈ ನಡುವೆ ರೈತರಿಂದ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಇದೀಗ ಮಳೆಯಾಗುವ ಲಕ್ಷಣಗಳು ದೂರವಾಗಿದ್ದು, ಬೇಸಿಗೆಯಲ್ಲಿ ನೀರಿನ ಅಭಾವ ತೀವ್ರವಾಗಿ ಎದುರಾಗಲಿದೆ. ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ದೀರ್ಘಾವಧಿ ತೆಂಗು, ಅಡಕೆ ಬೆಳೆಗಳು ನಾಶವಾಗುವ ಭೀತಿ ರೈತರಿಗೆ ಎದುರಾಗಿದೆ.

    ಪ್ರಸ್ತುತ ಜಲಾಶಯದಲ್ಲಿ 160 ಅಡಿ ಮಾತ್ರ ನೀರಿದ್ದು, ನೀರಾವರಿ ಸಲಹಾ ಸಮಿತಿ ನಿರ್ಧಾರದಂತೆ ನೀರು ಹಂಚಿಕೆ ಮಾಡಲಾಗುತ್ತಿದೆ. ಯಾರು ಸಹ ನಿರೀಕ್ಷಿಸಲಾಗದಂತಹ ತೀವ್ರ ಬರಗಾಲ ಇದೀಗ ಎದುರಾಗಿದ್ದು, ಒಂದೆಡೆ ಜಲಾಶಯದಲ್ಲಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವುದು ಅನಿವಾರ್ಯವಾದರೇ, ಮತ್ತೊಂದೆಡೆ ಪ್ರಸ್ತುತ ರೈತರು ಬೆಳೆದಿರುವ ಬೆಳೆಗಳಿಗೆ ನೀರು ಪೂರೈಸಬೇಕಾಗದ ಸ್ಥಿತಿ ಎದುರಾಗಿದೆ. ಈ ಹಿಂದೆ ಸರ್ಕಾರ 100 ದಿನ ನೀರು ಪೂರೈಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ರೈತರು ಭತ್ತದ ಬೆಳೆಗಳನ್ನು ಬೆಳೆದಿದ್ದರು. ಇದೀಗ ಬರಗಾಲ ಎದುರಾಗಿರುವ ಹಿನ್ನಲೆಯಲ್ಲಿ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ. ಈ ನಡುವೆ ದಾವಣಗೆರೆ ಭಾಗದ ರೈತರು ತಕ್ಷಣ ನೀರು ಬಿಡಬೇಕೆಂದು ಹೋರಾಟ ನಡೆಸಿದ ಪರಿಣಾಮ ಸಲಹಾ ಸಮಿತಿ 43 ದಿನ 2 ಹಂತದಲ್ಲಿ ನೀರು ಪೂರೈಸಲು ತೀರ್ಮಾನಿಸಿದೆ. ಅದರಂತೆ ಬಲದಂಡೆ ನಾಲೆಗೆ ಮಂಗಳವಾರದಿಂದ ಅ.15ರ ವರೆಗೆ ಒಟ್ಟು 20 ದಿನ ಹಾಗು ಅ.26 ರಿಂದ ನ.17ರ ವರೆಗೆ ಒಟ್ಟು 23 ದಿನ ನೀರು ಪೂರೈಸಲಾಗುತ್ತಿದೆ. ಉಳಿದಂತೆ ಎಡದಂಡೆ ನಾಲೆಗೆ ಈಗಾಗಲೇ ನೀರು ಹರಿಸಲಾಗುತ್ತಿದ್ದು, ಅ.1ರವರೆಗೆ ಒಟ್ಟು 15 ದಿನಗಳು, ಅ.12ರಿಂದ 26ರವರೆಗೆ ಒಟ್ಟು 15 ದಿನಗಳು ಹಾಗು ನ.6 ರಿಂದ 17ರವರೆಗೆ ಒಟ್ಟು 12 ದಿನಗಳು ನೀರು ಪೂರೈಕೆಯಾಗಲಿದೆ.

    43 ದಿನ ನೀರು ಪೂರೈಕೆಯಾದರೂ ಭತ್ತದ ಬೆಳೆ ನಾಶವಾಗುವ ಭೀತಿ:

    ಈ ಬಾರಿ ಮುಂಗಾರು ಮಳೆ ಸಹ ಕೈಕೊಟ್ಟಿದ್ದು, ಈ ನಡುವೆ 100 ದಿನಗಳ ಬದಲು 43 ದಿನ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದಾಗಿ ಭತ್ತದ ಬೆಳೆ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದ್ದು, ಬೆಳೆ ನಾಶವಾಗುವ ಭೀತಿ ಎದುರಾಗಿದೆ. ಬೆಳೆ ಕಾಳುಕಟ್ಟುವ ಕೊನೆಯ ಹಂತದಲ್ಲಿ ನೀರು ಲಭ್ಯವಾಗದೆ ನಾಶವಾಗಲಿವೆ. ಇದರಿಂದಾಗಿ ರೈತರು ನಷ್ಟ ಅನುಭವಿಸುವಂತಾಗಿದೆ.

    ದೀರ್ಘಾವಧಿ ಅಡಕೆ, ತೆಂಗು ಬೆಳೆಗಳಿಗೆ ಹೆಚ್ಚಿನ ನಷ್ಟ :

ದೀರ್ಘಾವಧಿ ಅಡಕೆ, ತೆಂಗು ಬೆಳೆಗಳಿಗೆ ಬೇಸಿಗೆಯಲ್ಲಿ ನೀರಿನ ಅಭಾವ ಈ ಬಾರಿ ಹೆಚ್ಚಾಗಲಿದ್ದು, ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಒಂದು ವೇಳೆ ಅಡಕೆ, ತೆಂಗು ಬೆಳೆಗಳು ಹಾನಿಯಾದಲ್ಲಿ ಹೆಚ್ಚಿನ ನಷ್ಟ ಅನುಭವಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಇದೀಗ ದೊಡ್ಡ ಸವಾಲು ಎದುರಾಗಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳಬೇಕಾಗಿದೆ.


'ಶತಮಾನದ ದೊಡ್ಡ ಬರಗಾಲ ಇದಾಗಿದ್ದು, ಇಂತಹ ಸಂದರ್ಭದಲ್ಲಿ ವಿವೇಚನೆ ಇಲ್ಲದವರು 100 ದಿನ ನೀರು ಪೂರೈಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನು ನಂಬಿದ ರೈತರು ಭತ್ತದ ಬೆಳೆ ಬೆಳೆದಿದ್ದಾರೆ. ಈ ಹಿನ್ನಲೆಯಲ್ಲಿ ನಷ್ಟವನ್ನು ಸರ್ಕಾರವೇ ತುಂಬಿ ಕೊಡಬೇಕು. ಬೇಸಿಗೆಯಲ್ಲಿ ನೀರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರು ಹಂಚಿಕೆ ನಿರ್ಧಾರ ಕೈಗೊಳ್ಳಲಾಗಿದೆ. ರೈತರು ನೀರನ್ನು ಮಿತವಾಗಿ ಬಳಸಿ ಸದ್ಬಳಕೆ ಮಾಡಿಕೊಳ್ಳಬೇಕು.'

                                 - ಕೆ.ಟಿ ಗಂಗಾಧರ್, ರೈತ ಮುಖಂಡರು. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ.


ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಮೆರವಣಿಗೆ

ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ ಚಾಲನೆ

ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸಂಜೆ ನಡೆಯಲಿದ್ದುಈ ಸಂಬಂಧ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆಗೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಶಾಸಕ ಸಂಗಮೇಶ್ವರ್‌ ಬೆಳಿಗ್ಗೆ ಚಾಲನೆ ನೀಡಿದರು.

    ಭದ್ರಾವತಿ, ಸೆ. ೨೬ : ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸಂಜೆ ನಡೆಯಲಿದ್ದು, ಸಂಬಂಧ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆಗೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಶಾಸಕ ಸಂಗಮೇಶ್ವರ್‌ ಬೆಳಿಗ್ಗೆ ಚಾಲನೆ ನೀಡಿದರು.

ವಿನಾಯಕ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಸುಮಾರು ೧೧.೩೦ರ ಸಮಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್‌ ಹಾಗು ಪದಾಧಿಕಾರಿಗಳು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್‌, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ ಕುಮಾರ್‌ ಹಾಗು ಸದಸ್ಯರು, ಪೌರಾಯುಕ್ತ ಮನುಕುಮಾರ್‌, ತಹಸೀಲ್ದಾರ್‌ ನಾಗರಾಜ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸಂಜೆ ನಡೆಯಲಿದ್ದುಈ ಸಂಬಂಧ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಸೇವಾಕರ್ತರಿಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.

ರಾಜಬೀದಿ ಉತ್ಸವ ಮೆರವಣಿಗೆ ನಿರೀಕ್ಷೆಗೂ ಮೀರಿ ವೈಭವಯುತವಾಗಿ ನಡೆಯುತ್ತಿದ್ದು, ಉತ್ಸವ ಮೆರವಣಿಗೆ ಹಬ್ಬದಂತೆ ಕಂಡು ಬರುತ್ತಿದೆ. ಜಾತಿ, ಧರ್ಮ ಬೇಧಭಾವವಿಲ್ಲದೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ರಸ್ತೆಯುದ್ದಕ್ಕೂ ಕೇಸರಿ ತೋರಣಗಳು, ಧ್ವಜಗಳು ಕಂಗೊಳಿಸುವ ಜೊತೆಗೆ ಸೇವಾಕರ್ತರಿಂದ ಅನ್ನಸಂತರ್ಪಣೆ, ಹೋಳಿಗೆ, ಲಾಡು, ಮಜ್ಜಿಗೆ, ಕೋಸಂಬರಿ ಸೇರಿದಂತೆ ಬಗೆ ಬಗೆಯ ಪ್ರಸಾದ ವಿತರಣೆ ನಡೆಯುತ್ತಿದ್ದು, ಬಗೆ ಬಗೆಯ ಬೃಹತ್ ಹಾರಗಳ ಸಮರ್ಪಣೆ, ಬೃಹತ್ ಓಂಕಾರದ ಚಿತ್ತಾರದೊಂದಿಗೆ ಭಕ್ತಿ ಸಮರ್ಪಣೆ ಕಂಡು ಬರುತ್ತಿದೆ. ಅಲ್ಲದೆ ವೀರಗಾಸೆ, ಡೊಳ್ಳು ಕುಣಿತ, ಗೊಂಬೆ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆ ಮತ್ತಷ್ಟು ಮೆರಗು ನೀಡಿವೆ.

ಮೆರವಣಿಗೆ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಮುಖ್ಯ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.  ಉತ್ಸವ ಮೆರವಣಿಗೆ ಹೊಸಮನೆ ಮುಖ್ಯ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್‌ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್‌ ವೃತ್ತ, ಲೋಯರ್‌ ಹುತ್ತಾ ಬಸ್‌ ನಿಲ್ದಾಣದವರೆಗೂ ಸಾಗಿ ಪುನಃ ಹಿಂದಿರುಗಿ ತರೀಕೆರೆ ರಸ್ತೆ ಮಹಾತ್ಮಗಾಂಧಿ ವೃತ್ತದವರೆಗೆ ಸಾಗಿ ಪುನಃ ಹಿಂದಿರುಗಿ ಅಂತ್ಯಗೊಳ್ಳಲಿದೆ. ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.