Tuesday, October 3, 2023

ಜ್ಞಾನದೀಪಿಕಾ ಶಾಲೆ ವಿದ್ಯಾರ್ಥಿಗಳು 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆ

  

ಭದ್ರಾವತಿ ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭದ್ರಾವತಿ : ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹೆಚ್ಚಿನ ಬಹುಮಾನಗಳನ್ನು ಪಡೆದುಕೊಂಡಿದ್ದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಬಾಲಕಿಯರ ಖೋ ಖೋ ತಂಡ ಪ್ರಥಮ, 100 ಮೀ. ಓಟ, ಸಿ. ಅರ್ಪಿತ ಪ್ರಥಮ, ಬಾಲಕರ ತಟ್ಟೆ ಎಸೆತ ಎಂ. ಅಯ್ಯಪ್ಪ ಪ್ರಥಮ, 4X100 ಮೀ. ರಿಲೆ ಓಟ ಬಾಲಕಿಯರು ದ್ವಿತೀಯ, 100 ಮೀಟರ್ ಹರ್ಡಲ್ಸ್ ಓಟ ಟಿ.ಡಿ ದಿಶಾ ದ್ವಿತೀಯ, 400 ಮೀಟರ್ ಮತ್ತು 600 ಮೀಟರ್ ಓಟದಲ್ಲಿ ಸಿ. ಅರ್ಪಿತ ತೃತೀಯ ಸ್ಥಾನ ಪಡೆದಿದ್ದಾರೆ.

    ವಿಜೇತ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆ ಕಾರ್ಯದರ್ಶಿ ಮಂಜುಳ ರಾಜಶೇಖರ್ ಹಾಗು ಶಾಲಾ ಮುಖ್ಯೋಪಾಧ್ಯಾಯರು, ತರಬೇತಿದಾರರು, ಶಿಕ್ಷಕರು ಹಾಗು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಜಂಬೂಸ್ವಾಮಿಗೆ ಪ್ರಥಮ ಬಹುಮಾನ

ಜಂಬೂಸ್ವಾಮಿ

    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾನಪದ ಗೀತೆ ಸ್ಪರ್ಧೆಯಲ್ಲಿ ಜಂಬೂಸ್ವಾಮಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

    ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಈ ದೇಶಭಕ್ತಿ ಗೀತೆ, ಭಾವ ಗೀತೆ, ಜಾನಪದ ಗೀತೆ ಮತ್ತು ನಗೆ ಚಟಾಕಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸುಗಮ ಸಂಗೀತ ಕಲಾವಿದರಾಗಿರುವ ಜಂಬೂಸ್ವಾಮಿ ಅವರು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

    ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಎನ್ ಮಹಾರುದ್ರ ಹಾಗು ಸಂಚಾಲಕಿ ಎಂ. ಅನಸೂಯ ಸೇರಿದಂತೆ ಸಂಘದ ಪದಾಧಿಕಾರಿಗಳು, ಹಿರಿಯ ಸದಸ್ಯರು ಉಪಸ್ಥಿತರಿದ್ದರು.

ಅ.4ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ : ಮೆಸ್ಕಾಂ ತಾಲೂಕಿನ ಕೂಡ್ಲಿಗೆರೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಿಳಚಿ, ತಿಮ್ಲಾಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.