ಸೈಯದ್ ರಜಿಖ್
ಭದ್ರಾವತಿ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಲೂಕಿನ ಬಾಬಳ್ಳಿ ಗ್ರಾಮದಲ್ಲಿ ಯುವಕನೋರ್ವ ಕೊಲೆಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಸೈಯದ್ ರಜಿಖ್ (೩೦) ಮೃತ ದುರ್ದೈವಿಯಾಗಿದ್ದು, ರಜಿಖ್‌ನನ್ನು ಆತನ ಸಂಬಂಧಿಕರೇ ಕೊಲೆ ಮಾಡಿರುವುದಾಗಿ ಮೃತನ ಕುಟುಂಬ ಆರೋಪಿಸಿದೆ. ಕೊಲೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.