![](https://blogger.googleusercontent.com/img/a/AVvXsEhbvd_EWT_gfa9cGtVrcVSn6sVs3nBzjGN1wBb7tcbnkUQrL7wTs_Z4rWGKoMV1Wv4SOD1270PyrzpGq5gDAN4cJ-O43uOmfIOM5T6aaXgNc77PIh1Mz3MR4alu2VeIi3dZUm3t8F_0ePYwKDKHXK_MBPIdrGprrWRxialpmEiQJe5KpEDnZEbVW8RXMZw4=w400-h241-rw)
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನಾಡಧ್ವಜಾರೋಹಣ ನೆರವೇರಿಸಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
ಭದ್ರಾವತಿ: ಕನ್ನಡದ ಬಗೆಗಿನ ಅಭಿಮಾನ ಅಂತರಾಳದಿಂದ ಬರಬೇಕು. ಕನ್ನಡ ರಾಜ್ಯೋತ್ಸವ ವರ್ಷದ ೩೬೦ ದಿನಗಳ ನಿತ್ಯೋತ್ಸವ ಆಗಬೇಕೆಂದರೆ ಜನರ ಮನೋಭಾವ ಹಾಗು ಪ್ರೀತಿ ಮುಖ್ಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡಧ್ವಜಾರೋಹಣ ನೆರವೇರಿಸಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಆಡಳಿತ ಭಾಷೆ ಹಾಗು ಮಾತೃಭಾಷೆಯಾದ ಕನ್ನಷ ಭಾಷೆಗೆ ಇನ್ನೂ ಹೆಚ್ಚಿನ ಸ್ಥಾನಮಾನಗಳು ಲಭಿಸಬೇಕು. ತಾಯಿಯನ್ನು ಗೌರವಿಸುವಂತೆಯೇ ಕನ್ನಡ ಭಾಷೆಯನ್ನು ಗೌರವಿಸುವುದು ಕನ್ನಡನಾಡಿನ ಪ್ರತೊಯೊಬ್ಬರ ಕರ್ತವ್ಯ. ಅತ್ಯಂತ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ನಾಡು ಕರ್ನಾಟಕ ಎಂಬುದು ಪ್ರತಿಯೊಬ್ಬ ಕನ್ನಡಿಗರ ಹೆಮ್ಮೆ ಎಂದರು.
ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್ ಕೆ.ಆರ್ ನಾಗರಾಜ್, ಕನ್ನಡ ಭಾಷೆಗೆ ೨ ಸಾವಿರ ವರ್ಷಗಳ ಇತಿಹಾಸವಿದೆ. ಭವ್ಯ ಪರಂಪರೆ ಇದ್ದು, ನಾಡು, ನುಡಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿ ಅವರ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ , ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಸದಸ್ಯರಾದ ಬಸವರಾಜ್ ಆನೇಕೊಪ್ಪ, ಮಣಿ ಎಎನ್‌ಎಸ್, ಚನ್ನಪ್ಪ, ಕಾಂತರಾಜ್, ಸೈಯ್ಯದ್ ರಿಯಾಜ್, ಲತಾ ಚಂದ್ರಶೇಖರ್, ಶಶಿಕಲಾ ನಾರಾಯಣಪ್ಪ, ಮಂಜುಳ ಸುಬ್ಬಣ್ಣ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿ, ವಂದಿಸಿದರು. ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಕನಕಮಂಟಪ ಮೈದಾನದವರಿಗೂ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು.