ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘ ಮನವಿ
![](https://blogger.googleusercontent.com/img/a/AVvXsEiJKgVrBdRqo2T1Avilin3e-qt6cNBUP4AaP0LLlY-IkxQ6txMhvx6gTDxZ9XBoJ3S7ux9QdeAzKYiutjxfmshGnPaO2wLNnxrukL7CsKuF1IAkJKkiNoDBzI4s_wIxiSLuCBwWKTnaF9bKfQwZUkAN9rSftQrHCyT0cUE-0Z6LL3iaNILGPWIP-Mw47h4K=w400-h174-rw)
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಬಹದ್ದೂರ್‌ರವರನ್ನು ನಗರದ ಹೊರವಲಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಭದ್ರಾ ಜಲಾಶಯ ಸಮೀಪದ ಜಂಗಲ್ ರೆಸಾರ್ಟ್‌ನಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅಂದಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹದ್ದೂರ್‌ರವರ ದೂರದೃಷ್ಟಿ ಹಾಗು ಪರಿಶ್ರಮದ ಫಲವಾಗಿ ನಿರ್ಮಾಣಗೊಂಡಿರುವ ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಬೇಕೆಂಬುದು ಕ್ಷೇತ್ರದ ನಾಗರೀಕರ ಆಶಯವಾಗಿದೆ. ಕಾರ್ಖಾನೆಯ ಶತಮಾನೋತ್ಸವ ಉದ್ಘಾಟಿಸುತ್ತಿರುವುದು ಸಂತಸ ತಂದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಶಿಫಾರಸ್ಸು ಮಾಡಬೇಕೆಂದು ಕೋರಿದರು.
ಸಂಘದ ಗೌರವಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ, ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ. ಜಗದೀಶ್, ಖಜಾಂಚಿ ಬಿ. ಶಂಕರನಾಯ್ಕ, ಸಹಕಾರ್ಯದರ್ಶಿ ಮಂಜು, ಸಲಹೆಗಾರ ಸತ್ಯ ಭದ್ರಾವತಿ, ವಿಲ್ಸನ್ ಬಾಬು, ಭಾಸ್ಕರ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.