ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಹಳೇನಗರ ಬಸವೇಶ್ವರ ವೃತ್ತದಲ್ಲಿ ಕಲಾವಿದ ರಮೇಶ್‌ರವರು ಶ್ರೀರಾಮ ಹಾಗು ಆಟೋ ಪ್ರದೀಪ್‌ರವರು ಹನುಮಂತ ವೇಷ ಧರಿಸಿ ಎಲ್ಲರ ಗಮನ ಸೆಳೆದರು.
ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಹಳೇನಗರ ಬಸವೇಶ್ವರ ವೃತ್ತದಲ್ಲಿ ವರ್ತಕರ ಸಂಘದಿಂದ ಧಾರ್ಮಿಕ ಆಚರಣೆಗಳು ಜರುಗಿದವು.
ಪ್ರಭು ಶ್ರೀರಾಮ ಚಂದ್ರನಿಗೆ ವರ್ತಕರು, ಸ್ಥಳೀಯರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು. ಕಲಾವಿದ ರಮೇಶ್‌ರವರು ಶ್ರೀರಾಮ ಹಾಗು ಆಟೋ ಪ್ರದೀಪ್‌ರವರು ಹನುಮಂತ ವೇಷ ಧರಿಸಿ ಎಲ್ಲರ ಗಮನ ಸೆಳೆದರು.
No comments:
Post a Comment