ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ
ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ದೇಶನ ನೀಡುವಂತೆ ಭದ್ರಾವತಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ: ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ದೇಶನ ನೀಡುವಂತೆ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಹಾಗು ಕಾರ್ಯದರ್ಶಿ ಗಿರಿನಾಯ್ಡು ಅವರು ಮನವಿ ಸಲ್ಲಿಸಿದ್ದು, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಉಂಬ್ಳೆಬೈಲು ಹಾಗು ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಸೇರಿದಂತೆ ೨೮ ಗ್ರಾಮಗಳನ್ನೊಳಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ದೊಣಬಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗು ಸಿಂಗನಮನೆ ಗ್ರಾಮದ ಏಕಗ್ರಾಮ ಕುಡಿಯುವ ನೀರಿನ ಯೋಜನೆಯ ಮನಶ್ವೇತನ ಕಾಮಗಾರಿ ಮತ್ತು ಕಂಬದಾಳ್ ಹೊಸೂರು ಸೇರಿದಂತೆ ೨೧ ಗ್ರಾಮಗಳನ್ನೊಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗನ್ನು ತುರ್ತಾಗಿ ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾದ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಿರ್ದೇಶಕರು ಈ ಸಂಬಂಧ ಕ್ರಮ ಕೈಗೊಳ್ಳುವಂತೆ ತಮಗೆ(ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ) ೧೮ ಅಕ್ಟೋಬರ್ ೨೦೨೩ರಂದು ಪತ್ರ ಬರೆದಿದ್ದಾರೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.
No comments:
Post a Comment