ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ೨೦೨೩-೨೪ನೇ ಸಾಲಿನ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
ಭದ್ರಾವತಿ: ಜೀವನದಲ್ಲಿ ವಿದ್ಯೆಗೆ ಹೆಚ್ಚಿನ ಗೌರವವಿದ್ದು, ಮಕ್ಕಳು ಶಾಲಾ-ಕಾಲೇಜು ದಿನಗಳಲ್ಲಿಯೇ ವಿದ್ಯೆಯ ಮಹತ್ವ ತಿಳಿಯಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ೨೦೨೩-೨೪ನೇ ಸಾಲಿನ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಲು ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆದರ್ಶಗಳು ಅಗತ್ಯ. ಶಾಲಾ-ಕಾಲೇಜುಗಳಲ್ಲಿ ಸಣ್ಣ ಘಟನೆಗಳಿಗೂ ಅನಗತ್ಯವಾಗಿ ಚಳುವಳಿಗಳನ್ನು ನಡೆಸುವುದು ದುರಂತ ಸಂಗತಿ ಎಂದರು.
ಶಿವಮೊಗ್ಗದ ಡಾ. ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜಿನ ಪ್ರಿನ್ಸಿಪಲ್ ಡಾ. ಸಂಧ್ಯಾ ಕಾವೇರಿ ಮಾತನಾಡಿ, ಶಿಕ್ಷಣ ಎಂದರೆ ಕೇವಲ ಪಠ್ಯವಲ್ಲ. ಜೀವನವನ್ನು ಸುಂದರವನ್ನಾಗಿಸುವ ಸಾಧನ. ಶಿಕ್ಷಣ ಸಂಸ್ಥೆಗಳ ದೊಡ್ಡ ಜವಾಬ್ದಾರಿ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದು ಎಂದರು.
ಸರ್.ಎಂ.ವಿ ಕಾಲೇಜು ಸುಸಜ್ಜಿತವಾಗಿದ್ದು, ವಿದ್ಯಾರ್ಥಿಗಳು ಇದನ್ನು ಉತ್ತಮ ರೀತಿ ಬಳಸಿಕೊಳ್ಳಬೇಕು. ಪ್ರಸ್ತುತ ಇಂದಿನ ದಿನಗಳು ಸಂಶೋಧನೆಯ ಯುಗ, ಆಧುನಿಕತೆಯ ಯುಗವಾಗಿರುವುದರ ಜೊತೆಗೆ ಸಾಧನೆಯ ಯುಗವೂ ಆಗಿದೆ ಎಂಬುದನ್ನು ತಿಳಿಯಬೇಕಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್, ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಣಿಶೇಖರ್, ಮುಖಂಡರಾದ ಎಸ್.ಎಸ್ ಭೈರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮುಕುಂದಪ್ಪ, ಕಿರಣ್ ಬಾರಂದೂರು, ಸೈಯದ್ ಸರ್ಪರಾಜ್ ನವಾಜ್, ಪ್ರಮೋದ್, ಯಲ್ಲೋಜಿರಾವ್(ಬಾಬು), ನಂಜುಂಡಪ್ಪ, ಪಿ.ಕೆ ಹರೀಶ್, ಇಮ್ರಾನ್, ರಿಚರ್ಡ್, ಎಂ.ಎ ವೆಂಕಟೇಶ್, ಟಿ.ಆರ್ ಯೋಗೇಶಪ್ಪ, ಲೀಲಾವತಿ, ಗಂಗಾಧರ್, ಎಂ.ಜಿ ರಾಮಚಂದ್ರನ್, ಇಸ್ರೆಲ್, ವಿವಿಧ ವೇದಿಕೆಗಳ ಸಂಚಾಲಕರಾದ ಎಂ. ವೆಂಕಟೇಶ್, ಎಂ. ಮೊಹಮ್ಮದ್ ನಜೀಬ್, ಅಕ್ರಂಪಾಷ, ಆರ್. ವೆಂಕಟೇಶ್, ಡಾ. ಎಚ್.ಎಸ್ ಶಿವರುದ್ರಪ್ಪ, ಡಾ. ಎಸ್. ವರದರಾಜ, ಬಿ. ಗುರುಪ್ರಸಾದ್, ಡಾ. ಬಿ.ಜಿ ಅಕ್ಷತ, ಡಾ. ಟಿ.ಜಿ ಉಮಾ, ಕಾಲೇಜಿನ ಸಾಂಸ್ಕೃತಿಕ ವೇದಿಕೆ ವಿದ್ಯಾರ್ಥಿ ಪದಾಧಿಕಾರಿಗಳಾದ ವಿ. ಪ್ರೇಮ್ ಕುಮಾರ್, ಅಬ್ದುಲ್ ಹಸೀಬ್ ಖಾನ್, ಟಿ. ಶ್ಯಾಂ ಬಾಬು ಮತ್ತು ಆರ್. ಪುಷ್ಪಲತಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಶೈಲಜಾ ಎಸ್ ಹೊಸಳ್ಳೇರ ಅಧ್ಯಕ್ಷತೆ ವಹಿಸಿದ್ದರು. ಶಾಯಿದ್ ಮತ್ತು ಸಂಗಡಿಗರು ನಾಡಗೀತೆ ಹಾಗು ವಚನಗಾಯನ ಹಾಡಿದರು. ಪ್ರೊ. ಎನ್. ರವಿ ಸ್ವಾಗತಿಸಿದರು. ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು, ಸ್ಕೌಟ್ ಸದಸ್ಯರು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರೊ. ಶ್ರೀದೇವಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
No comments:
Post a Comment