ಭದ್ರಾವತಿ : ಹಳೇನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಜ.೬ರಂದು ಬೆಳಿಗ್ಗೆ ೧೦ ಗಂಟೆಗೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗು ಬಡ ಕಾರ್ಮಿಕರಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಹಿರಿಯ ನಗರಸಭಾ ಸದಸ್ಯ ಬಿ.ಕೆ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೇಪರ್‌ಟೌನ್ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸಿ. ಬಸವರಾಜ್, ಜ್ಞಾನೇಶ್ವರಿ ವಿದ್ಯಾವರ್ಧಕ ಟ್ರಸ್ಟ್ ಅಧ್ಯಕ್ಷೆ ಟಿ.ಆರ್ ವಿನೋದಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಟ್ರಸ್ಟಿ ತಸ್ಮೈ ಕಿರಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment