ವಚನ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಭದ್ರಾವತಿ ನಗರದ ನಿವಾಸಿ, ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಪ್ರೊ. ಎಸ್.ಎಸ್ ವಿಜಯ (ಡಾ. ವಿಜಯದೇವಿ) ಅವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ವತಿಯಿಂದ ಜ.೭ರ ಭಾನುವಾರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆ ಆವರಣ, ಶ್ರೀ ರಾಜೇಂದ್ರ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ `ಶಕುಂತಲ ಜಯದೇವ ಶರಣ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು.
ಭದ್ರಾವತಿ: ವಚನ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನಗರದ ನಿವಾಸಿ, ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಪ್ರೊ. ಎಸ್.ಎಸ್ ವಿಜಯ (ಡಾ. ವಿಜಯದೇವಿ) ಅವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ವತಿಯಿಂದ ಜ.೭ರ ಭಾನುವಾರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆ ಆವರಣ, ಶ್ರೀ ರಾಜೇಂದ್ರ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ `ಶಕುಂತಲ ಜಯದೇವ ಶರಣ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು.
ಶ್ರೀ ಸುತ್ತೂರು ಕ್ಷೇತ್ರ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ ಲೋಕನಾಥ್ ಉದ್ಘಾಟಿಸಿದರು. ಅಖಿಲ ಭಾರತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ ಅಧ್ಯಕ್ಷತೆ ವಹಿಸಿದ್ದರು. ದತ್ತಿ ದಾಸೋಹಿ ಶಕುಂತಲ ಜಯದೇವ, ಪರಿಷತ್ ಜಿಲ್ಲಾ ಅಧ್ಯಕ್ಷ ಸದಾನಂದಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment