ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರ ಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಕೆ.ಆರ್ ನಾಗರಾಜು ಧ್ವಜಾರೋಹಣ ನೆರವೇರಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ ಅಧ್ಯಕ್ಷತೆವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಮಾಜ ನಿರ್ಮಾಣಗೊಳ್ಳಬೇಕಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸ.ನೌ. ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪಸ್ಥಿತರಿದ್ದರು. ಉಪ ತಹಸೀಲ್ದಾರ್ ರಾಧಾಕೃಷ್ಣ ಭಟ್, ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು ಹಾಗೂ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಸ್ವಾತಂತ್ರ ಹೋರಾಟಗಾರರು ಪ್ರತಿಕಾ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಮತ್ತು ನಾಗರೀಕರು ಹಾಗು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಶ್ರೀಶೈಲ ಕೆಂಚಣ್ಣನವರು ಪಥ ಸಂಚಲನದ ವಂದನೆ ಸ್ವೀಕರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ