ಭದ್ರಾವತಿ: ಕೇಂದ್ರ ಸರ್ಕಾರ ಹಾಗೂ ಉಕ್ಕು ಪ್ರಾಧಿಕಾರ ಆಡಳಿತ ವರ್ಗ ಕೈಕೊಂಡಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಜ.೧೫ರಂದು ಬೆಳಿಗ್ಗೆ ೧೧ ಗಂಟೆಗೆ ಶಿವಮೊಗ್ಗ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.
ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಕೆಲವು ದಿನಗಳ ಹಿಂದೆ ಗುತ್ತಿಗೆ ಕಾರ್ಮಿಕರು ಹೋರಾಟ ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಜ.೧೬ರಂದು ಕರಾಳ ದಿನ ಆಚರಣೆಯೊಂದಿಗೆ ಪಂಜಿನ ಮೆರವಣಿಗೆ ಹಾಗು ೧೮ರಂದು ಸಂಸದರ ನಿವಾಸದವರೆಗೂ ಬೈಕ್ ರ್‍ಯಾಲಿ ನಡೆಸಲು ತೀರ್ಮಾನ ಕೈಗೊಂಡಿದ್ದರು. ಇದೀಗ ಬೈಕ್ ರ್‍ಯಾಲಿ ಜ.೧೫ರ ಸಂಕ್ರಾತಿ ಹಬ್ಬದಂದು ನಡೆಸಲು ಮುಂದಾಗಿದ್ದಾರೆ.
ಈ ಸಂಬಂಧ ಗುತ್ತಿಗೆ ಕಾರ್ಮಿಕ ಸಂಘಟನೆಗಳ ಮುಖಂಡರು ಭಾನುವಾರ ಪತ್ರಿಕಾ ಹೇಳಿಕೆ ನೀಡಿದ್ದು, ಬೈಕ್ ರ್‍ಯಾಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರು, ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು, ರೈತರು, ವ್ಯಾರಾರಸ್ಥರು ಸೇರಿದಂತೆ ನಾಗರೀಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
No comments:
Post a Comment