ಭದ್ರಾವತಿಯಲ್ಲಿ ಭಾರತೀಯ ಭೂ ಸೇನಾ ದಿನಾಚರಣೆ ಅಂಗವಾಗಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ದೇಶಕ್ಕಾಗಿ ಸೈನಿಕರು ಸಲ್ಲಿಸುತ್ತಿರುವ ಸೇವೆ ಹಾಗು ಅವರ ದೇಶಭಕ್ತಿ ಸ್ಮರಣೆಯೊಂದಿಗೆ ಸಂಭ್ರಮಿಸಲಾಯಿತು. ಅಲ್ಲದೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ವಯೋವೃದ್ಧರು, ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಭದ್ರಾವತಿ: ಭಾರತೀಯ ಭೂ ಸೇನಾ ದಿನಾಚರಣೆ ಅಂಗವಾಗಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ದೇಶಕ್ಕಾಗಿ ಸೈನಿಕರು ಸಲ್ಲಿಸುತ್ತಿರುವ ಸೇವೆ ಹಾಗು ಅವರ ದೇಶಭಕ್ತಿ ಸ್ಮರಣೆಯೊಂದಿಗೆ ಸಂಭ್ರಮಿಸಲಾಯಿತು. ಅಲ್ಲದೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ವಯೋವೃದ್ಧರು, ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ನಗರಸಭೆ ವಾಡ್ ನಂ.೨೯ರ ಸಿದ್ದಾಪುರದಲ್ಲಿರುವ ಮಾಜಿ ಸೈನಿಕರ ಸಂಘದ ಕಛೇರಿಯಿಂದ ಆರಂಭಗೊಂಡ ಬೈಕ್ ಜಾಥಾ ಜಯಶ್ರೀ ಮುಖ್ಯ ರಸ್ತೆ ಮೂಲಕ ಜಯಶ್ರೀ ವೃತ್ತ, ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಿಂದ ಡಬ್ಬಲ್ ರಸ್ತೆ ಮೂಲಕ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ತಲುಪಿತು.
ಸಂಘದ ಅಧ್ಯಕ್ಷ ಸುಬೇದಾರ್ ಗುಲ್ಗುಲೆ, ಉಪಾಧ್ಯಕ್ಷ ಮಹೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಸಹಕಾರ್ಯದರ್ಶಿ ಹರೀಶ್, ಹಿರಿಯ ಮಾಜಿ ಸೈನಿಕರಾದ ಗೋವಿಂದಪ್ಪ, ವಾಸುದೇವನ್, ಮುದುಗಲ ರಾಮರೆಡ್ಡಿ, ಕೃಷ್ಣೋಜಿರಾವ್, ಸುರೇಶ್, ಅಭಿಲಾಷ್, ಗಿರಿ, ಶ್ರೀಧರ, ಉಮೇಶ್, ರಮೇಶ್, ದಿನೇಶ್, ಶೇಷಾಚಲ, ಉದಯ್, ಸ್ಥಳೀಯರಾದ ರಾಜಶೇಖರ್, ಈಶ್ವರ್ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment