ಹಿಂದೂಪರ ಸಂಘಟನೆಗಳಿಂದ ಬಿಡುಗಡೆಗೆ ಆಗ್ರಹ : ಮನವಿ
ಕರಸೇವಕರ ಬಂಧನ ಖಂಡಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ ವತಿಯಿಂದ ಭದ್ರಾವತಿ ಮಾಧವಚಾರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ನಂತರ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಕರಸೇವಕರ ಬಂಧನ ಖಂಡಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ ವತಿಯಿಂದ ನಗರದ ಮಾಧವಚಾರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ನಾನು ರಾಮಭಕ್ತ, ನಾನು ಕರಸೇವಕ ತಾಕತ್ತು ಇದ್ದರೆ ಬಂಧಿಸಿ ಎಂದು ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ `ರಾಜ್ಯ ಸರ್ಕಾರಕ್ಕೆ ಧಿಕ್ಕಾರ, ಧಿಕ್ಕಾರ, ರಾಮನ ಭಕ್ತರು ನಾವೆಲ್ಲ. ಟಿಪ್ಪು ಸಂತತಿ ಬೇಕಿಲ್ಲ. ಹನುಮನ ಸಂತತಿ ನಾವೆಲ್ಲ. ಬಾಬರ್ ಸಂತತಿ ಬೇಕಿಲ್ಲ' ಎಂಬ ಘೋಷಣೆಗಳನ್ನು ಹಾಕುವ ಮೂಲಕ ಬಂಧಿಸಲಾಗಿರುವ ಕರಸೇವಕರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು. ದತ್ತ ಮಾಲಾಧಾರಿಗಳ ಮೇಲೆ ಪೊಲೀಸ್ ತನಿಖೆ ಹಾಗು ರಾಜ್ಯದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಗಳನ್ನು ಖಂಡಿಸಿದರು. ನಂತರ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಹಾ. ರಾಮಪ್ಪ, ಜಿ. ಶಿವರಾಜ್, ವಿ. ಕದಿರೇಶ್, ಎನ್. ವಿಶ್ವನಾಥರಾವ್, ಬಿ.ಕೆ ಶ್ರೀನಾಥ್, ಕೆ.ಎನ್ ಶ್ರೀಹರ್ಷ, ಎಂ.ಎಸ್ ಸುರೇಶಪ್ಪ, ಚನ್ನೇಶ್, ರಾಜಶೇಖರ ಉಪ್ಪಾರ, ಶಿವಕುಮಾರ್, ರಾಘವನ್ ವಡಿವೇಲು, ಚಂದ್ರಪ್ಪ, ರಾಮಲಿಂಗಯ್ಯ, ಎಂ. ಮಂಜುನಾಥ್, ಗೋಕುಲ್ ಕೃಷ್ಣ, ಎಂ. ಪ್ರಭಾಕರ್, ಕಾರಾನಾಗರಾಜ್, ಧನುಷ್ ಬೋಸ್ಲೆ, ಹೇಮಾವತಿ ವಿಶ್ವನಾಥ್, ಮಂಜುಳ, ಲತಾ, ಅನ್ನಪೂರ್ಣ, ರೇಖಾ ಪದ್ಮಾವತಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment