Wednesday, January 10, 2024

ರಸ್ತೆ ಸುರಕ್ಷಾ ಸಪ್ತಾಹ : ಬೈಕ್ ಜಾಥಾ ಮೂಲಕ ಜಾಗೃತಿ

ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಭದ್ರಾವತಿ ಪೊಲೀಸ್ ಉಪವಿಭಾಗ, ಸಂಚಾರಿ ಪೊಲೀಸ್ ಠಾಣೆ ಹಾಗು ಸರ್.ಎಂ ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ಸಹಯೋಗದೊಂದಿಗೆ ಬುಧವಾರ `ಹೆಲ್ಮೆಟ್ ಧರಿಸಿ, ಜೀವ ಉಳಿಸಿ', `ನಮ್ಮ ನಡೆ ಸುರಕ್ಷಾ ಚಾಲನೆ ಕಡೆ' ಎಂಬ ಧ್ಯೇಯ ವಾಕ್ಯದೊಂದಿಗೆ ಬೈಕ್ ಜಾಥಾ ನಡೆಸಲಾಯಿತು.  
    ಭದ್ರಾವತಿ: ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಪೊಲೀಸ್ ಉಪವಿಭಾಗ, ಸಂಚಾರಿ ಪೊಲೀಸ್ ಠಾಣೆ ಹಾಗು ಸರ್.ಎಂ ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ಸಹಯೋಗದೊಂದಿಗೆ ಬುಧವಾರ `ಹೆಲ್ಮೆಟ್ ಧರಿಸಿ, ಜೀವ ಉಳಿಸಿ', `ನಮ್ಮ ನಡೆ ಸುರಕ್ಷಾ ಚಾಲನೆ ಕಡೆ' ಎಂಬ ಧ್ಯೇಯ ವಾಕ್ಯದೊಂದಿಗೆ ಬೈಕ್ ಜಾಥಾ ನಡೆಸಲಾಯಿತು.  
    ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಾಥಾ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮೂಲಕ ಎನ್‌ಎಂಸಿ ರಸ್ತೆ, ಸೀಗೆಬಾಗಿವರೆಗೂ ಸಾಗಿ ಸಿ.ಎನ್ ರಸ್ತೆ ಮೂಲಕ ರಂಗಪ್ಪ ವೃತ್ತ ತಲುಪಿ ಅಂತ್ಯಗೊಂಡಿತು.


ಭದ್ರಾವತಿಯಲ್ಲಿ ಬುಧವಾರ ಹೆಲ್ಮೆಟ್ ಧರಿಸುವ ಬಗ್ಗೆ ಹಾಗು ಸುರಕ್ಷಾ ಚಾಲನೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸರ್.ಎಂ ವಿಶ್ವೇಶ್ವರಯ್ಯ ದಿಚಕ್ರ ವಾಹನ ದುರಸ್ತಿಗಾರರ ಸಂಘಕ್ಕೆ ಇಲಾಖೆ ವತಿಯಿಂದ ಅಭಿನಂದಿಸಿ ಸಂಘದ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.
  ಹೆಲ್ಮೆಟ್ ಧರಿಸುವ ಬಗ್ಗೆ ಹಾಗು ಸುರಕ್ಷಾ ಚಾಲನೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸರ್.ಎಂ ವಿಶ್ವೇಶ್ವರಯ್ಯ ದಿಚಕ್ರ ವಾಹನ ದುರಸ್ತಿಗಾರರ ಸಂಘಕ್ಕೆ ಇಲಾಖೆ ವತಿಯಿಂದ ಅಭಿನಂದಿಸಿ ಸಂಘದ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲ ಸೇರಿದಂತೆ ವಿವಿಧ ಠಾಣೆಗಳ ಠಾಣಾಧಿಕಾರಿಗಳು, ಸಂಚಾರಿ ಪೊಲೀಸರು, ದ್ವಿಚಕ್ರ ವಾಹನ ದುರಸ್ತಿಗಾರರು ಜಾಥಾದಲ್ಲಿ ಪಾಲ್ಗೊಂಡಿದ್ದರು.
    ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಈಗಾಗಲೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಜಾಥಾ, ಜಾನಪದ ಕಲಾವಿದರಿಂದ ಬೀದಿ ನಾಟಕ ಸೇರಿದಂತೆ ಇಲಾಖೆ ವತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

No comments:

Post a Comment