ಭದ್ರಾವತಿ ಹೊಸಮನೆ ನಿವಾಸಿ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್ ಕಳೆದ ಕೆಲವು ವರ್ಷಗಳಿಂದ ಅಂತರಾಷ್ಟ್ರೀಯ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಒಲಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಇವರ ಪರಿಶ್ರಮ ಸಹ ಹೆಚ್ಚಿನದಾಗಿದೆ. ಈ ಹಿನ್ನಲೆಯಲ್ಲಿ ಇವರನ್ನು ರಿಲೆಯನ್ಸ್ ಫೌಂಡೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ನಗರದ ಹೊಸಮನೆ ನಿವಾಸಿ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್ ಕಳೆದ ಕೆಲವು ವರ್ಷಗಳಿಂದ ಅಂತರಾಷ್ಟ್ರೀಯ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಒಲಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಇವರ ಪರಿಶ್ರಮ ಸಹ ಹೆಚ್ಚಿನದಾಗಿದೆ. ಈ ಹಿನ್ನಲೆಯಲ್ಲಿ ಇವರನ್ನು ರಿಲೆಯನ್ಸ್ ಫೌಂಡೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸೌಮ್ಯ ಸಾವಂತ್ ಈ ಹಿಂದೆ ಅಥ್ಲೆಟಿಕ್ ಕ್ರೀಡಾಪಟು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವು ಸಾಧನೆಗಳನ್ನು ಮಾಡುವ ಮೂಲಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಗಮನ ಸೆಳೆದಿದ್ದರು. ನಂತರ ಅಂತರಾಷ್ಟ್ರೀಯ ತರಬೇತಿದಾರರಾಗಿ ಅಂಧ ಕ್ರೀಡಾಪಟುಗಳಿಗೆ ತರಬೇತಿ ನೀಡಿ ಅವರುಗಳು ಸಹ ರಾಜ್ಯ ಮತ್ತು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಂಗಾರ ಮತ್ತು ಬೆಳ್ಳಿ ಪದಕಗಳನ್ನು ಗಳಿಸುವಲ್ಲಿ ಕಾರಣಕರ್ತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೆ.೨೯ರಂದು ರಿಲೆಯನ್ಸ್ ಫೌಂಡೇಷನ್ ವತಿಯಿಂದ ಮುಂಬೈನಲ್ಲಿ ಏರ್ಪಡಿಸಲಾಗಿದ್ದ ಒಲಿಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಕ್ರೀಡಾಪಟು ಹಾಗು ತರಬೇತಿದಾರರೊಂದಿಗೆ ಸಂತೋಷ ಕೂಟ ಸಂಭ್ರಮ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಮುಕೇಶ್ ಅಂಬಾನಿ, ನೀತು ಅಂಬಾನಿ, ಅನಂತ್ ಅಂಬಾನಿ, ರಾಧಿಕಾ ಅಂಬಾನಿ ಸೇರಿದಂತೆ ಅಂಬಾನಿ ಕುಟುಂಬ ವರ್ಗದವರು ಹಾಗು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಸೌಮ್ಯ ಸಾವಂತ್ ಹಿರಿಯ ಪತ್ರಕರ್ತ ಯು.ಆರ್ ಸಾವಂತ್-ಅನ್ನಪೂರ್ಣ ಸಾವಂತ್ ದಂಪತಿಯ ಹಿರಿಯ ಪುತ್ರಿಯಾಗಿದ್ದಾರೆ. ಪ್ರಸ್ತುತ ಸೌಮ್ಯ ಸಾವಂತ್ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಪತಿ ಬಿ.ರಾಹುಲ್ ಸಹ ಅಥ್ಲೆಟಿಕ್ ಕ್ರೀಡಾಪಟುವಾಗಿದ್ದು, ಪ್ರಸ್ತುತ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ