ಈ ಹಿಂದೆ ೨ ಬಾರಿ ಭದ್ರಾವತಿ ನಗರಸಭೆ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿ ಮನೋಹರ್‌ರವರು ಪ್ರಸ್ತುತ ವಿಜಯನಗರ ಜಿಲ್ಲೆಯ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತರಕಾಂಡ್, ಮಸ್ಸೂರಿಯಲ್ಲಿ ನಡೆಯುತ್ತಿರುವ ತರಬೇತಿಗೆ ಆಯ್ಕೆಯಾಗಿದ್ದಾರೆ.
ಭದ್ರಾವತಿ: ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿ ಮನೋಹರ್‌ರವರು ಪ್ರಸ್ತುತ ವಿಜಯನಗರ ಜಿಲ್ಲೆಯ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತರಕಾಂಡ್, ಮಸ್ಸೂರಿಯಲ್ಲಿ ನಡೆಯುತ್ತಿರುವ ತರಬೇತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯದಿಂದ ಪೌರಾಡಳಿತ ಇಲಾಖೆಯ ೪ ಜನರು ಮಾತ್ರ ತರಬೇತಿಗೆ ಆಯ್ಕೆಯಾಗಿದ್ದು, ಈ ಪೈಕಿ ಮನೋಹರ್ ಸಹ ಒಬ್ಬರಾಗಿದ್ದಾರೆ. ಉತ್ತರಕಾಂಡ್ ರಾಜ್ಯದ ಮಸ್ಸೂರಿ ಮೂಲತಃ ಗಿರಿಧಾಮವಾಗಿದ್ದು, ಅಲ್ಲದೆ ಡೆಹ್ರಾಡೋನ್ ನಗರದಲ್ಲಿ ಪೌರಾಡಳಿತ ಮಂಡಳಿಯಾಗಿದೆ. ಇಲ್ಲಿನ ಆಡಳಿತ ವ್ಯವಸ್ಥೆ ಕುರಿತು ಅಧ್ಯಯನ ನಡೆಸುವ ಉದ್ದೇಶದೊಂದಿಗೆ ತರಬೇತಿ ಆಯೋಜಿಸಲಾಗಿದೆ.
ಮನೋಹರ್ ಈ ಹಿಂದೆ ೨ ಬಾರಿ ಇಲ್ಲಿನ ನಗರಸಭೆ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ತರಬೇತಿ ಯಶಸ್ವಿಯಾಗಲಿ ಎಂದು ನಗರಸಭೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
No comments:
Post a Comment