ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ
ಭದ್ರಾವತಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮಾತನಾಡಿದರು.
ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣದ ಸಮೀಪದಲ್ಲಿರುವ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಪರ್ವೀಜ್ ತಿಳಿಸಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಲವಾರ ವರ್ಷಗಳಿಂದ ಸಂಘ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೀಗ ಹೊಸದಾಗಿ ಪದಾಧಿಕಾರಿಗಳನ್ನು ಪುನರ್ ಆಯ್ಕೆ ಮಾಡಲಾಗಿದೆ. ಅದರಂತೆ ಅಧ್ಯಕ್ಷ ಮಹಮ್ಮದ್ ಪರ್ವೀಜ್, ಉಪಾಧ್ಯಕ್ಷರಾಗಿ ಬಸವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಬಿ. ಜಗದೀಶ್, ಕಾರ್ಯದರ್ಶಿಯಾಗಿ ಶ್ರೀ ಕುಮಾರ್, ಖಜಾಂಚಿಯಾಗಿ ಮುಬಾರಕ್ ಹಾಗು ನಿರ್ದೇಶಕರಾಗಿ ಸಂತೋಷ್ ಕುಮಾರ್(ಬಾಬು), ಎ. ರಾಜಣ್ಣ, ನೇವಿಲ್ ಪೆರೆರಾ, ಅಬ್ದುಲ್ ರೆಹಮಾನ್, ವಾಸುದೇವ ಆಚಾರ್, ಮಹೇಶ್, ರಾಕೇಶ್, ಗೋವಿಂದ ಮತ್ತು ಎಸ್.ಎನ್ ಕಾಂತರಾಜುರವರು ಆಯ್ಕೆಯಾಗಿದ್ದಾರೆ ಎಂದರು.
ಪ್ರಸ್ತುತ ವಾಹನ ಚಾಲಕರು ಮತ್ತು ಮಾಲೀಕರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಸರ್ಕಾರ ವಾಹನಗಳ ತೆರಿಗೆ ವಿಮೆ ಮೊತ್ತ ಹೆಚ್ಚಿಸಿರುವುದು ಸರಿಯಲ್ಲ. ತಕ್ಷಣ ಹೆಚ್ಚಿಸಿರುವ ಮೊತ್ತ ಹಿಂಪಡೆಯಬೇಕು. ಯಾವುದೇ ವಸತಿ ಸೌಲಭ್ಯಗಳು ಇಲ್ಲದ ಕಾರಣ ವಸತಿ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಬೇಕು. ಹಲವಾರು ಬೇಡಿಕೆಗಳಿದ್ದು, ಇವುಗಳನ್ನು ಈಡೇರಿಸಿಕೊಡುವ ಮೂಲಕ ಹಿತಕಾಪಾಡುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.
No comments:
Post a Comment