Thursday, October 31, 2024

ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮದಿನ

ಭದ್ರಾವತಿಯಲ್ಲಿ ಕಾಂಗ್ರೆಸ್ ಭಾರತ್ ಸೇವಾದಳ ಹಾಗು ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಗುರುವಾರ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮದಿನ ವಿಶೇಷವಾಗಿ ಆಚರಿಸಲಾಯಿತು. 
    ಭದ್ರಾವತಿ : ಕಾಂಗ್ರೆಸ್ ಭಾರತ್ ಸೇವಾದಳ ಹಾಗು ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಗುರುವಾರ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮದಿನ ವಿಶೇಷವಾಗಿ ಆಚರಿಸಲಾಯಿತು. 
    ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ)ಸಮಾಜದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ವಿಶೇಷವಾಗಿ ಆಚರಿಸಿ ಅವರ ಆಡಳಿತ ಅವಧಿಯಲ್ಲಿನ ಜನಪರ ಯೋಜನೆಗಳು ಹಾಗು ಅವರ ಕಾರ್ಯವೈಖರಿಗಳನ್ನು ಸ್ಮರಿಸಲಾಯಿತು. 
    ಪ್ರಮುಖರಾದ ಡಿ. ನರಸಿಂಹಮೂರ್ತಿ, ಜಿ.ಟಿ ಬಸವರಾಜ್, ಹನುಮಂತಯ್ಯ, ಚಂದ್ರಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಬಸ್‌ನಲ್ಲಿ ಮರೆತು ಬಿಟ್ಟು ಹೋಗಿದ್ದ ಕಿಟ್ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಭದ್ರಾವತಿ ನಿವಾಸಿ ಶಿವಾನಂದಪ್ಪರವರು ಮರೆತು ಬಿಟ್ಟು ಹೋಗಿದ್ದ ಕಿಟ್‌ಬ್ಯಾಗ್ ಪುನಃ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಬಸ್ಸಿನ ಸಿಬ್ಬಂದಿ ಬಾಬು ದೊಡ್ಮನೆಯವರಿಗೆ ಪುಷ್ಪಮಾಲೆ ಹಾಕುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. 
    ಭದ್ರಾವತಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಮರೆತು ಬಿಟ್ಟು ಹೋಗಿದ್ದ ಕಿಟ್‌ಬ್ಯಾಗ್ ಪುನಃ ಆ ವ್ಯಕ್ತಿಗೆ ತಲುಪಿಸುವ ಮೂಲಕ ಬಸ್ಸಿನ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಇತ್ತೀಚೆಗೆ ನಡೆದಿದೆ. 
    ನಗರಸಭೆ ವ್ಯಾಪ್ತಿಯ ಕಡದಕಟ್ಟೆ ನಿವಾಸಿ, ನಿವೃತ್ತ ಕೆಇಬಿ ನೌಕರ ಪಿ.ಎಲ್ ಶಿವಾನಂದಪ್ಪ ಚಿಕ್ಕೋಡಿಯಿಂದ ಶಿವಮೊಗ್ಗಕ್ಕೆ ಕೆಎಸ್‌ಆರ್‌ಟಿಸಿ  ಕೆಎ ೧೪ ಎಫ್೦೦೮೪ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಿಟ್ ಬ್ಯಾಗ್ ಮರೆತುಹೋಗಿದ್ದರು. ಶಿವಮೊಗ್ಗ ತಲುಪಿದ ನಂತರ ನೋಡಿದಾಗ ಕಿಟ್ ಬ್ಯಾಗ್ ಇರಲಿಲ್ಲ. ಇವರು ಪುನಃ ಹಿಂದಿರುಗಿ ಭದ್ರಾವತಿ ನಿಲ್ದಾಣದಲ್ಲಿ ಬಂದು ವಿಚಾರಿಸಿದ್ದು, ಬಸ್ ಸಿಬ್ಬಂದಿ ಬಾಬು ದೊಡ್ಮನೆಯವರು ಕಿಟ್‌ಬ್ಯಾಗ್ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. 
    ಶಿವಾನಂದಪ್ಪರವರು ಬಾಬು ದೊಡ್ಮನೆಯವರ ಪ್ರಾಮಾಣಿಕತೆ ಕಂಡು ಬೆರಗಾಗಿದ್ದು, ಅವರಿಗೆ ಪುಷ್ಪಮಾಲೆ ಹಾಕುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. 

ಸರ್ದಾರ್ ವಲ್ಲಭ ಭಾಯ್ ಪಟೇಲ್ ಎಂದಿಗೂ ಅವಿಸ್ಮರಣೀಯ : ಪ್ರಕಾಶ್

ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿವಸ್ 

ವಲ್ಲಭ ಭಾಯ್ ಪಟೇಲ್‌ರವರ ಜನ್ಮದಿನದ ಅಂಗವಾಗಿ ಭದ್ರಾವತಿ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿವಸ್ ಆಯೋಜಿಸಲಾಗಿತ್ತು. ಅರಳಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಮತ್ತು ಉಪಾಧ್ಯಕ್ಷೆ ಅನಿತಾರವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. 
    ಭದ್ರಾವತಿ: ದೇಶದ ಏಕೀಕರಣಕ್ಕೆ ಶ್ರಮಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಎಂದಿಗೂ ಅವಿಸ್ಮರಣೀಯರು ಎಂದು ತಾಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಹೇಳಿದರು. 
    ಅವರು ಗುರುವಾರ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರವರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಾಲ್ಗೊಂಡು ಮಾತನಾಡಿದರು.  
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ  ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ದಿವಾಕರ್ ಮಾತನಾಡಿ, ಪಟೇಲರ ಇಚ್ಚಾ ಶಕ್ತಿ ಇಂದಿನ ಅಖಂಡ ಭಾರತ ನಿರ್ಮಾಣಕ್ಕೆ ಕಾರಣವಾಗಿದ್ದು, ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಕ್ಕೆ ಅವರೇ ಸಾಟಿ. ನಮ್ಮೆಲ್ಲರಿಗೂ ಸರ್ದಾರ್ ಪಟೇಲರು ಪ್ರೇರಣಾದಾಯಕ. ಅವರ ವ್ಯಕ್ತಿತ್ವ, ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದರು.  
    ಅರಳಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಮತ್ತು ಉಪಾಧ್ಯಕ್ಷೆ ಅನಿತಾರವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಸುರೇಶ್, ಚಂದ್ರಶೇಖರ್ ಮತ್ತು ಅನಿತಾ ಉಪಸ್ಥಿತರಿದ್ದರು.
ರುದ್ರೇಶ್ ಪ್ರಾರ್ಥಿಸಿ, ರಂಗರಾಜ್ ಸ್ವಾಗತಿಸಿ, ಇಮ್ರಾನ್ ಖಾನ್ ಕಾರ್ಯಕ್ರಮ ನಿರೂಪಿಸಿದರು. ಪಲ್ಲವಿ ಪ್ರತಿಜ್ಞಾ ವಿಧಿ ಬೋಧಿಸಿದರು, ಶಾಂತಪ್ಪ ವಿಶೇಷ ಉಪನ್ಯಾಸ ನೀಡಿದರು. 

ನ.೧ರಂದು ಕನ್ನಡ ರಾಜ್ಯೋತ್ಸವ

    ಭದ್ರಾವತಿ: ರಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ೬೯ನೇ ಕನ್ನಡ ರಾಜ್ಯೋತ್ಸವ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ನಡೆಯಲಿದೆ. 
    ಬೆಳಿಗ್ಗೆ ೮ ಗಂಟೆಗೆ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ತಾಯಿ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದ್ದು, ೯ ಗಂಟೆಗೆ ಕನಕಮಂಟಪ ಮೈದಾನದಲ್ಲಿ ತಹಸೀಲ್ದಾರ್ ಕೆ.ಆರ್ ನಾಗರಾಜು ಧ್ವಜಾರೋಹಣ ನೆರವೇರಿಸಲಿದ್ದಾರೆ. 
    ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರಸಭೆ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲುಯಜ್ಞಯ್ಯ ಸೇರಿದಂತೆ ಇನ್ನಿತರರು ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಮತ್ತು ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ವಿವಿಧ ಸರ್ಕಾರಿ ಇಲಾಖೆಗಳ, ಸಂಘ-ಸಂಸ್ಥೆಗಳ ಪ್ರಮುಖರು, ಗ್ರಾಮ ಪಂಚಾಯಿತಿ, ನಗರಸಭೆ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

Wednesday, October 30, 2024

ನ.೫ರಂದು ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮಾಚರಣೆ

ಭದ್ರಾವತಿ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮಾಚರಣೆ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಾಹಿತಿ ನೀಡಿದರು. 
    ಭದ್ರಾವತಿ: ನಗರದ ಅಪ್ಪರ್‌ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮಾಚರಣೆ ಹಾಗು ಸರ್ವ ಸದಸ್ಯರ ವಾರ್ಷಿಕ ಸಭೆ ನ.೫ರಂದು ಸಂಜೆ ೫ ಗಂಟೆಗೆ ಜನ್ನಾಪುರ ಮಲ್ಲೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಎಸ್ ಮಲ್ಲೇಶ್ ಹೇಳಿದರು. 
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೧೯೯೮ರಲ್ಲಿ ಆರಂಭಗೊಂಡ ಸಂಘ ನಿರಂತರವಾಗಿ ಲಾಭದಲ್ಲಿ ಮುನ್ನಡೆದುಕೊಂಡು ಬರುತ್ತಿದೆ. ಇದೀಗ ೨೫ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಸಂಭ್ರಮಾಚರಣೆಗೆ ಮುಂದಾಗಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಶಿವಮೊಗ್ಗ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಹೃದಯ ರೋಗ ತಜ್ಞ, ಸಂಸದ ಡಾ. ಸಿ.ಎನ್ ಮಂಜುನಾಥ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು. 
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಂಘದ ಪ್ರವರ್ತಕರಾದ ತಾಲೂಕು ಒಕ್ಕಲಿಗರ ಸಂಘದ ಹಾಲಿ ಮತ್ತು ಮಾಜಿ ಪೋಷಕರು, ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿರುವರು ಎಂದರು. 
    ನ.೧ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ: 
    ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ನ.೧ರಂದು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್, ರೋಟರಿ ಕ್ಲಬ್, ತಾಲೂಕು ಒಕ್ಕಲಿಗರ ಸಂಘ, ಶುಗರ್ ಟೌನ್, ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮತ್ತು ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ವತಿಯಿಂದ ನ.೧ರಂದು ಜನ್ನಾಪುರ ಮಲ್ಲೇಶ್ವರ ಸಭಾ ಭವನದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨.೩೦ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. 
    ಮಧುಮೇಹ ವಿಭಾಗ, ಶ್ವಾಸಕೋಶ ವಿಭಾಗ, ಹೃದಯ ರೋಗ ವಿಭಾಗ, ಕೀಲು ಮತ್ತು ಮೂಳೆ ವಿಭಾಗ, ಕಿವಿ, ಮೂಗು ಗಂಟಲು ವಿಭಾಗ, ಚರ್ಮರೋಗ ವಿಭಾಗ, ನರರೋಗ ವಿಭಾಗ, ದಂತ ಚಿಕಿತ್ಸಾ ವಿಭಾಗ, ಪ್ರಸೂತಿ, ಸ್ತ್ರೀ ರೋಗ ವಿಭಾಗ ಮತ್ತು ಮಕ್ಕಳ ವಿಭಾಗಗಳಲ್ಲಿ ತಪಾಸಣೆ ನಡೆಯಲಿದೆ. ವೈದ್ಯರ ಸಲಹೆ ಮೇರೆಗೆ ಇ.ಸಿ.ಜಿ, ಶ್ವಾಸಕೋಶ ಸ್ಕ್ಯಾನಿಂಗ್(ಉಸಿರಾಟ), ಹೃದಯ ಪರೀಕ್ಷೆ(ಇಕೋ), ಬಿ.ಪಿ, ಶುಗರ್, ಮೂಳೆ ಸಾಂದ್ರತೆ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗುವುದು ಎಂದರು. 
    ಸಂಘದ ಉಪಾಧ್ಯಕ್ಷ ಎಲ್. ದೇವರಾಜ್, ಕುಮಾರ್, ಗಾಯಿತ್ರಿ, ಕೆಂಪಯ್ಯ, ಪರಮಶಿವ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಧರ್ಮ ಸತ್ಯದ ದಾರಿಯಲ್ಲಿ ನಡೆಯಿರಿ : ಶ್ರೀ ರಂಭಾಪುರಿ ಜಗದ್ಗುರುಗಳು

ಭದ್ರಾವತಿ ತಾಲೂಕಿನ ಬಿಳಕಿ ಹಿರೇಮಠದಲ್ಲಿ ಬುಧವಾರ ಜರುಗಿದ ಲಿಂ.ಶ್ರೀ ರಾಚೋಟಿ ಶಿವಾಚಾರ್ಯ ಸ್ವಾಮಿಗಳವರ ೫೭ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು. 
    ಭದ್ರಾವತಿ : ಮನುಷ್ಯ ಆಶೆ ಕಳೆದುಕೊಂಡು ಬದುಕಬಹುದು. ಆದರೆ ಆಸಕ್ತಿ ಕಳೆದುಕೊಂಡು ಬಾಳಲಾಗದು. ಧರ್ಮ ಸತ್ಯದ ದಾರಿಯಲ್ಲಿ ನಡೆಯುವವನಿಗೆ ನೂರೆಂಟು ಕಷ್ಟಗಳು ಬಂದರೂ ಕೊನೆಗೆ ಸತ್ಯ ಧರ್ಮಗಳ ಪರಿಪಾಲನೆ ನಮ್ಮನ್ನು ಕಾಪಾಡುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. 
    ಅವರು ಬುಧವಾರ ತಾಲೂಕಿನ ಬಿಳಕಿ ಹಿರೇಮಠದಲ್ಲಿ ಜರುಗಿದ ಲಿಂ.ಶ್ರೀ ರಾಚೋಟಿ ಶಿವಾಚಾರ್ಯ ಸ್ವಾಮಿಗಳವರ ೫೭ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. 
    ಹುಟ್ಟು ಎಷ್ಟು ಸಹಜವೋ ಸಾವು ಅಷ್ಟೇ ನಿಶ್ಚಿತ. ಭೌತಿಕ ಸಂಪತ್ತು ಜೀವನ ಶಾಶ್ವತವಲ್ಲ. ಆದರೆ ಸತ್ಯ ಧರ್ಮ ಒಂದೇ ಸ್ಥಿರ. ಅರಳಿದ ಪುಷ್ಪಗಳು ಬೀರುವ ಸುಗಂಧ ಗಾಳಿಯಲ್ಲಿ ಹರಡುವಂತೆ ಸತ್ಕಾರ್ಯಗಳಿಂದ ಮನುಷ್ಯನ ಕೀರ್ತಿ ಎಲ್ಲೆಡೆ ಹರಡುತ್ತದೆ. ದೇವರ ಹೆಸರಿನಲ್ಲಿ ಉಪವಾಸ ಮಾಡುವುದು ದೊಡ್ಡ ಸಾಧನೆಯಲ್ಲ. ಜನ್ಮ ಕೊಟ್ಟ ತಂದೆ ತಾಯಿ ಮಾರ್ಗದರ್ಶನ ನೀಡುವ ಗುರುವಿನಲ್ಲಿ ಶ್ರದ್ಧೆಯಿಟ್ಟು ಕಾಪಾಡುವುದೇ ದೊಡ್ಡ ಸಾಧನೆ ಎಂಬುದನ್ನು ಮರೆಯಬಾರದು ಎಂದರು. 
    ವೀರಶೈವ ಧರ್ಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಆದರ್ಶ ಮೌಲ್ಯಗಳನ್ನು ಪರಿಪಾಲಿಸಿ ನಡೆದರೆ ಜೀವನ ಸಾರ್ಥಕ. ಲಿಂ.ರಾಚೋಟಿ ಶಿವಾಚಾರ್ಯರು ಧರ್ಮಮುಖಿಯಾಗಿ ಮತ್ತು ಸಮಾಜ ಮುಖಿಯಾಗಿ ಸತ್ಕಾರ್ಯಗಳನ್ನು ಮಾಡಿ ಭಕ್ತ ಸಮುದಾಯವನ್ನು ಸನ್ಮಾರ್ಗಕ್ಕೆ ತಂದ ಕೀರ್ತಿ ಅವರದಾಗಿದೆ. ಇಂದಿನ ರಾಚೋಟೇಶ್ವರ ಶಿವಾಚಾರ್ಯರು ಪೂರ್ವದ ಆದರ್ಶ ಪರಿಪಾಲನೆಯನ್ನು ಪರಿಪಾಲಿಸುವ ಭಕ್ತ ಸಂಕುಲದಲ್ಲಿ ಸಂಸ್ಕಾರ, ಸದ್ವಿಚಾರಗಳನ್ನು ಬೆಳೆಸುತ್ತಿರುವುದು ಅತ್ಯಂತ ಸಂತೋಷವನ್ನುಂಟು ಮಾಡಿದೆ ಎಂದರು. 
      ಸಮಾರಂಭ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಮನಸೊಂದಿದ್ದರೆ ಮಾರ್ಗವಿದೆ. ನಂಬಿಕೆಯೊಂದಿದ್ದರೆ ಜೀವನವಿದೆ, ನಿಷ್ಕಲ್ಮಶವಾದ ಭಕ್ತಿಯೊಂದಿದ್ದರೆ ಪರಮಾತ್ಮನ ಅನುಗ್ರಹ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ ಚಿಂತನೆಗಳನ್ನು ರಾಚೋಟಿ ಶ್ರೀಗಳು ಪರಿಪಾಲಿಸಿ ಭಕ್ತರಿಗೆ ಬೋಧಿಸಿದ ಶಕ್ತಿಯನ್ನು ಮರೆಯಲಾಗದು. ಅವರ ಜೀವನದ ಸಿದ್ಧಿ ಸಾಧನೆಗಳು ನಮ್ಮೆಲ್ಲರಿಗೂ ದಾರಿ ದೀಪವಾಗಲೆಂದರು. 
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಷ್ಯ ಎಷ್ಟು ವರುಷ ಬದುಕಿದನೆಂಬುದು ಮುಖ್ಯವಲ್ಲ. ಬದುಕಿರುವಷ್ಟು ದಿನ ಹೇಗೆ ಬದುಕಿದನೆಂಬುದು ಬಹಳ ಮುಖ್ಯ. ಹಣ ಇವತ್ತು ಅಥವಾ ನಾಳೆ ಗಳಿಸಬಹುದು. ಆದರೆ ಯಾವಾಗಲೂ ಜೊತೆಯಾಗಿ ನಿಲ್ಲುವ ವ್ಯಕ್ತಿಯನ್ನು ಕಳೆದುಕೊಳ್ಳಬಾರದು. ಲಿಂ.ರಾಚೋಟಿ ಶ್ರೀಗಳವರು ಎಲ್ಲ ಭಕ್ತರನ್ನು ಸಮಾನವಾಗಿ ಕಂಡು ಸತ್ಕರಿಸಿ ಒಳಿತನ್ನು ಬಯಸಿದ ಮಹಾನ್ ಚೇತನ ಶಕ್ತಿ ಎಂದು ಸ್ಮರಿಸಿದರು. 
    ಎಡೆಯೂರು ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಆದರ್ಶ ಮೌಲ್ಯಗಳ ಪರಿಪಾಲನೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಬೆಳೆಯುವ ಯುವ ಜನಾಂಗದಲ್ಲಿ ಸ್ವಧರ್ಮ ನಿಷ್ಠೆ ಮತ್ತು ಪರಧರ್ಮ ಸಹಿಷ್ಣುತೆಯ ಪಾಠಗಳನ್ನು ಮಾಡುವ ಅವಶ್ಯಕತೆ ಇದೆ ಎಂದರು. 
    ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ ಮಾತನಾಡಿ, ಇಂದಿನ ಅತ್ಯಾಧುನಿಕ ಯುಗದಲ್ಲಿ ಮನುಷ್ಯನ ಮನಸ್ಸು ಬಹಳಷ್ಟು ಚಂಚಲಗೊಂಡಿದೆ. ಧರ್ಮ ಪರಿಪಾಲನೆಯ ದಾರಿಯಲ್ಲಿ ನಡೆದಾಗ ಬದುಕಿನಲ್ಲಿ ಶಾಂತಿ, ಸಂತೃಪ್ತಿ, ಸಮಾಧಾನ ಪ್ರಾಪ್ತಿಗಾಗಿ ಇಂತಹ ಸಮಾರಂಭಗಳ ಅವಶ್ಯಕತೆ ಇದೆ. ಶ್ರೀ ರಂಭಾಪುರಿ ಜಗದ್ಗುರುಗಳು ನಿತ್ಯ ಸಂಚರಿಸಿ ಜನ ಸಮುದಾಯಗಳಲ್ಲಿ ಸದಭಿಮಾನ, ಶ್ರದ್ಧೆ, ದೇಶಭಕ್ತಿ, ಧರ್ಮ ಪರಿಪಾಲನೆಯ ವಿಚಾರಗಳನ್ನು ಬೋಧಿಸಿ ಉದ್ಧರಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು. 
    ಹುಣಸಘಟ್ಟ, ಹಾಲಸ್ವಾಮಿಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾದಿಹಳ್ಳಿ ಹಿರೇಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಬೀರೂರು ಬಾಳೆಹೊನ್ನೂರು ಖಾಸಾ ಶಾಖಾಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕೆ. ಬಿದಿರೆ ದೊಡ್ಡಮಠದ ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಮೆಟಿಕುರ್ಕೆಮಠದ ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ, ಸಂಸ್ಥಾನ ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ರಾಮಲಿಂಗೇಶ್ವರಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠ, ಶ್ರೀ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕುರವತ್ತಿ ಹಿರೇಮಠದ ಶ್ರೀ ಸಿದ್ಧನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ನಂದಿಪುರಮಠದ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಹಣ್ಣೆಮಠದ ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. 
    ಶ್ರೀ ಮಠದ ಗೌರವಾಧ್ಯಕ್ಷ ಟಿ.ವಿ.ಈಶ್ವರಯ್ಯ, ಉದ್ಯಮಿ ಬಿ.ಕೆ.ಜಗನ್ನಾಥ, ಎಸ್.ಎನ್ ಮಹಾಲಿಂಗಶಾಸ್ತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್, ಎ.ಎಂ.ಚಂದ್ರಯ್ಯ, ಹೆಚ್.ಮಲ್ಲಿಕಾರ್ಜುನಸ್ವಾಮಿ, ಡಾ.ರೇಣುಕಾರಾಧ್ಯ ಶಾಸ್ತ್ರಿಗಳು, ಸಿದ್ಧಲಿಂಗಯ್ಯ, ಉಮೇಶ ಹಿರೇಮಠ, ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಹೊನ್ನಾಳಿ ಕೋಟೆಮಲ್ಲೂರಿನ ಶತಾಯುಷಿ, ನಿವೃತ್ತ ಮುಖ್ಯೋಪಾಧ್ಯಾಯ ಶಿವಲಿಂಗಾರಾಧ್ಯ ಶಾಸ್ತ್ರಿಗಳವರಿಗೆ `ಸೌಜನ್ಯ ಸುಧಾಕರ ರತ್ನ' ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಶ್ರೀ ಮಠದ ನಿಯೋಜಿತ ಪೀಠಾಧಿಪತಿ ಶ್ರೀ ಗುರುಪ್ರಸಾದ ದೇವರು ಸ್ವಾಗತಿಸಿದರು. ಶಿವಮೊಗ್ಗದ ಶಾಂತಾ ಆನಂದ ನಿರೂಪಿಸಿದರು. ಗಂಜಿಗಟ್ಟಿ ಕೃಷ್ಣಮೂರ್ತಿ  ಜಾನಪದ ಗೀತೆಗಳನ್ನು ಹಾಡಿದರು. 
    ಬೆಳಿಗ್ಗೆ ಲಿಂ.ರಾಚೋಟಿ ಶ್ರೀಗಳವರ ಗದ್ದುಗೆಗೆ ಹಾಗೂ ಶ್ರೀ ಮಠದ ಎಲ್ಲ ದೇವರುಗಳಿಗೆ ಶಾಸ್ತ್ರೋಕ್ತ ರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಳಾರತಿ ಜರುಗಿದವು. ಬೆಳಿಗ್ಗೆ ಲೋಕಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಪೂಜೆ ನೆರವೇರಿಸಿ ಭಕ್ತರಿಗೆ ಶುಭ ಹಾರೈಸಿದರು.
 
    ಲಿಂ.ಹಾನಗಲ್ಲ ಕುಮಾರಸ್ವಾಮಿಗಳು ಮಾಡಿರುವ ನಿರ್ಣಯದಂತೆ ನಡೆದುಕೊಳ್ಳಿ...
    ಇತ್ತೀಚೆಗೆ ಜಾತಿ ಜನಗಣತಿ ಹಿನ್ನೆಲೆಯಲ್ಲಿ ಸೇರಿದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಅಧ್ಯಕ್ಷರು ಮೊದಲ್ಗೊಂಡು ಹಲವಾರು ಗಣ್ಯರು ಪಾಲ್ಗೊಂಡಿದ್ದು ಸಂತೋಷದ ಸಂಗತಿ. ಈ ಸಂದರ್ಭದಲ್ಲಿ ಹಲವಾರು ಠರಾವುಗಳನ್ನು ಮಹಾಸಭೆ ಪ್ರಕಟಪಡಿಸಿದ್ದು, ಮೊದಲನೆಯ ಠರಾವಿನಲ್ಲಿ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರ ತತ್ವ ಸಿದ್ಧಾಂತ ಮತ್ತು ಶ್ರೀ ಬಸವಾದಿ ಶಿವಶರಣರ ವಿಚಾರ ಧಾರೆಯಂತೆ ಮಹಾಸಭಾ ಕಾರ್ಯ ನಿರ್ವಹಿಸುತ್ತದೆ ಎಂದಾಗಬೇಕಿತ್ತು. ಆದರೆ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರ ಹೆಸರು ಕೈ ಬಿಟ್ಟಿರುವುದು ಒಳ್ಳೆಯದಲ್ಲ. ಮಹಾಸಭಾ ಯಾವಾಗಲೂ ಗುರು ವಿರಕ್ತ ಸಮುದಾಯವನ್ನು ಸಮಾನ ದೃಷ್ಟಿಯಿಂದ ಕಾಣಬೇಕೆಂದು ನಿಯಮ ಇರುವಾಗಲೂ ಈ ರೀತಿ ನಿರ್ಣಯ ಕೈಗೊಂಡಿರುವುದು ನೋವಿನ ಸಂಗತಿ. ಈ ವಿಚಾರವನ್ನು ಮಹಾಸಭಾ ಗಂಭೀರವಾಗಿ ಅವಲೋಕನ ಮಾಡಿ ಸರಿಪಡಿಸುವತ್ತ ಗಮನ ಕೊಡಬೇಕಾದ ಅಗತ್ಯವಿದೆ.  ಲಿಂ.ಹಾನಗಲ್ಲ ಕುಮಾರಸ್ವಾಮಿಗಳು ಮಾಡಿರುವ ನಿರ್ಣಯದಂತೆ ವೀರಶೈವ ಮಹಾಸಭೆ ನಡೆದುಕೊಳ್ಳಬೇಕಲ್ಲದೇ ತಪ್ಪು ನಿರ್ಣಯ ಕೈಕೊಳ್ಳಬೇಡಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಎಚ್ಚರಿಸಿದರು. 
 

ಭದ್ರಾವತಿ ತಾಲೂಕಿನ ಬಿಳಕಿ ಹಿರೇಮಠದಲ್ಲಿ ಬುಧವಾರ ಜರುಗಿದ ಲಿಂ.ಶ್ರೀ ರಾಚೋಟಿ ಶಿವಾಚಾರ್ಯ ಸ್ವಾಮಿಗಳವರ ೫೭ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭದಲ್ಲಿ ಹೊನ್ನಾಳಿ ಕೋಟೆಮಲ್ಲೂರಿನ ಶತಾಯುಷಿ, ನಿವೃತ್ತ ಮುಖ್ಯೋಪಾಧ್ಯಾಯ ಶಿವಲಿಂಗಾರಾಧ್ಯ ಶಾಸ್ತ್ರಿಗಳವರಿಗೆ `ಸೌಜನ್ಯ ಸುಧಾಕರ ರತ್ನ' ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.  

ಉಕ್ಕಿನ ನಗರಕ್ಕೆ ಆಗಮಿಸಿದ ೧೨ ಅಡಿ ಎತ್ತರದ ನೂತನ ಡಾ. ಬಿ.ಆರ್ ಅಂಬೇಡ್ಕರ್ ಕಂಚಿನ ಪ್ರತಿಮೆ

ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತಿ : ಸಿಹಿ ಹಂಚಿ ಸಂಭ್ರಮ 

 ೧೨ ಅಡಿ ಎತ್ತರದ ನೂತನ ಡಾ. ಬಿ.ಆರ್ ಅಂಬೇಡ್ಕರ್ ಕಂಚಿನ ಪ್ರತಿಮೆ ಬುಧವಾರ ಭದ್ರಾವತಿ ನಗರಕ್ಕೆ ಆಗಮಿಸಿದ್ದು, ಹಳೇಯ ಪ್ರತಿಮೆ ಸ್ಥಳದಲ್ಲಿಯೇ ಪ್ರತಿಷ್ಠಾಪನೆಗೊಳ್ಳುತ್ತಿದೆ. 
    ಭದ್ರಾವತಿ : ೧೨ ಅಡಿ ಎತ್ತರದ ನೂತನ ಡಾ. ಬಿ.ಆರ್ ಅಂಬೇಡ್ಕರ್ ಕಂಚಿನ ಪ್ರತಿಮೆ ಬುಧವಾರ ನಗರಕ್ಕೆ ಆಗಮಿಸಿದ್ದು, ದಲಿತ ಸಂಘಟನೆಗಳ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು. 
    ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಹಳೇಯ ಪ್ರತಿಮೆ ಸ್ಥಳದಲ್ಲಿಯೇ ನೂತನ ಪ್ರತಿಮೆ ಅನಾವರಣಗೊಳ್ಳುತ್ತಿದ್ದು, ಮಧ್ಯಾಹ್ನ ೩ ಗಂಟೆ ಸಮಯಕ್ಕೆ ಪ್ರತಿಷ್ಠಾಪನಾ ಸ್ಥಳಕ್ಕೆ ಆಗಮಿಸಿದ ಪ್ರತಿಮೆಯನ್ನು ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಸದಸ್ಯರಾದ ಚನ್ನಪ್ಪ, ಬಸವರಾಜ ಬಿ. ಆನೇಕೊಪ್ಪ, ದಲಿತ ಮುಖಂಡರಾದ ಸತ್ಯ ಭದ್ರಾವತಿ, ಶಿವಬಸಪ್ಪ, ಚಿನ್ನಯ್ಯ, ವಿ. ವಿನೋದ್, ಈಶ್ವರಪ್ಪ, ಎಸ್. ಕುಮಾರ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಗೋಪಾಲ್, ರಾಜೇಂದ್ರ, ವೆಂಕಟೇಶ್ ಉಜ್ಜನಿಪುರ ಹಾಗು ಕೆ. ಪ್ರಸಾದ್, ಸಂತೋಷ್ ಪಾಟೀಲ್ ಸೇರಿದಂತೆ ನಗರಸಭೆ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು. 
    ನೂತನ ಅಂಬೇಡ್ಕರ್ ಪ್ರತಿಮೆ ಸಂಪೂರ್ಣವಾಗಿ ಕಂಚಿನಿಂದ ನಿರ್ಮಿಸಲಾಗಿದ್ದು, ಸುಮಾರು ೧,೫೦೦ ಕೆ.ಜಿ ತೂಕವಿದೆ. ಪ್ರತಿಷ್ಠಾಪನಾ ಮಂಟಪ ೬ ಅಡಿ ಎತ್ತರವಿದ್ದು, ೧೨ ಅಡಿ ಪ್ರತಿಮೆ ಸೇರಿ ಒಟ್ಟು ೧೮ ಅಡಿ ಎತ್ತರಕ್ಕೆ ಮೆಟ್ಟಿಲುಗಳನ್ನು ಸಹ ನಿರ್ಮಿಸಲಾಗುತ್ತದೆ. ಈಗಾಗಲೇ ಪ್ರತಿಷ್ಠಾಪನಾ ಸ್ಥಳದ ಸುತ್ತ ಲೋಹದ ಗ್ರಿಲ್‌ಗಳನ್ನು ಅಳವಡಿಸಲಾಗಿದೆ. ಉಳಿದಂತೆ ಪ್ರತಿಮೆ ಅನಾವರಣಕ್ಕೆ ದಿನಾಂಕ ನಿಗದಿಯಾಗಬೇಕಿದೆ. 

Tuesday, October 29, 2024

ಚುನಾವಣೆಯಲ್ಲಿ ಗೆಲುವು : ಡಿಎಫ್‌ಓ ಅಭಿನಂದನೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಅರಣ್ಯ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಪ್ರಥಮ ದರ್ಜೆ ಸಹಾಯಕ ಡಿ. ವೆಂಕಟೇಶ್ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಅರಣ್ಯ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಪ್ರಥಮ ದರ್ಜೆ ಸಹಾಯಕ ಡಿ. ವೆಂಕಟೇಶ್ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ. 
    ಅರಣ್ಯ ಇಲಾಖೆ ಮತಕ್ಷೇತ್ರದ ೧ ಸ್ಥಾನಕ್ಕೆ ಕಾಂತೇಶ್ ನಾಯ್ಕ ಮತ್ತು ಡಿ. ವೆಂಕಟೇಶ್ ಸ್ಪರ್ಧಿಸಿದ್ದರು. ತೀವ್ರ ಪೈಪೋಟಿ ನಡುವೆ ವೆಂಕಟೇಶ್ ಗೆಲುವು ಸಾಧಿಸಿದ್ದಾರೆ. ಇವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಸ್ ರೆಡ್ಡಿ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದು, ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೋರಲಾಗಿದೆ.  

ಸರ್ಕಾರಿ ನೌಕರರ ಸಂಘದ ಚುನಾವಣೆ : ನಾಲ್ವರು ಗೆಲುವು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ೪ ಜನ ಗೆಲುವು ಸಾಧಿಸಿದ್ದಾರೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ೪ ಜನ ಗೆಲುವು ಸಾಧಿಸಿದ್ದಾರೆ. 
    ಒಟ್ಟು ೪ ಸ್ಥಾನಗಳಿಗೆ ಉಮೇಶಪ್ಪ, ಡಾ.ಎಚ್.ಎಸ್ ಗಿರೀಶ್, ಎಚ್.ಎಂ ನಾಗರಾಜಪ್ಪ, ಪದ್ಮರಾಜ ಶೆಟ್ಟಿ, ಕೆ. ರಮೇಶ್, ಆರ್. ರೀನಾ, ಶ್ರೀನಿವಾಸ್ ಎಚ್. ಬಾಗೋಡಿ ಮತ್ತು  ಎಂ.ಎಚ್ ಹರೀಶ್ ಸೇರಿದಂತೆ ಒಟ್ಟು ೮ ಸ್ಪರ್ಧಿಗಳು ಸ್ಪರ್ಧಿಸಿದ್ದರು. ಈ ಪೈಕಿ ಡಾ.ಎಚ್.ಎಸ್ ಗಿರೀಶ್, ಕೆ. ರಮೇಶ್, ಶ್ರೀನಿವಾಸ್ ಎಚ್. ಬಾಗೋಡಿ ಮತ್ತು ಆರ್. ರೀನಾ ಗೆಲುವು ಸಾಧಿಸಿದ್ದಾರೆ. 
    ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಯ್ಕೆಯಾದ ಕಾರ್ಯಕಾರಿ ಸಮಿತಿ ನೂತನ ಸದಸ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಭಿನಂದನೆ ಸಲ್ಲಿಸಿದೆ. 

ವಿಐಎಸ್‌ಎಲ್‌ನಲ್ಲಿ ನ.೩ರವರೆಗೆ ಜಾಗೃತಾ ತಿಳುವಳಿಕೆ ಸಪ್ತಾಹ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ.೩ರವರೆಗೆ "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಧ್ಯೇಯ ವ್ಯಾಕ್ಯದೊಂದಿಗೆ ಜಾಗೃತಾ ತಿಳುವಳಿಕೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ.೩ರವರೆಗೆ   "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಧ್ಯೇಯ ವ್ಯಾಕ್ಯದೊಂದಿಗೆ ಜಾಗೃತಾ ತಿಳುವಳಿಕೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. 
    ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹಾಗೂ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಭಿತ್ತಿಪತ್ರ ವಿನ್ಯಾಸ(ಪೋಸ್ಟರ್ ಡಿಸೈನ್), ಪ್ರಬಂಧ, ಆಶುಭಾಷಣ, ರಂಗೋಲಿ, ರಸಪ್ರಶ್ನೆ ಮತ್ತು ಚಿತ್ರಕಲೆಯಂತಹ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
    ಕಾರ್ಖಾನೆಯ ಇಸ್ಪಾತ್ ಭವನದ ಮುಂಭಾಗ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಮತ್ತು ಸರ್. ಎಂ. ವಿಶ್ವೇಶ್ವರಾಯರವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.  
    ಪ್ರತಿಜ್ಞಾ ವಿಧಿಯನ್ನು ಕನ್ನಡದಲ್ಲಿ ಡಾ. ಕೆ.ಎಸ್ ಸುಜೀತ್ ಕುಮಾರ್(ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ) ಮತ್ತು ಹಿಂದಿಯಲ್ಲಿ ಶೋಭಾ ಶಿವಶಂಕರನ್ (ಪ್ರಧಾನ ವ್ಯವಸ್ಥಾಪಕರು ಹಣಕಾಸು ಮತ್ತು ಲೆಕ್ಕ) ಹಾಗು ಆಂಗ್ಲ ಭಾಷೆಯಲ್ಲಿ ಕೆ. ಹರಿಶಂಕರ್ (ಪ್ರಧಾನ ವ್ಯವಸ್ಥಾಪಕರು-ಸುರಕ್ಷತೆ) ಬೋಧಿಸಿದರು.
    ಟಿ. ರವಿಚಂದ್ರನ್ (ಪ್ರಧಾನ ವ್ಯವಸ್ಥಾಪಕರು-ಸೇವೆಗಳು), ಎಂ. ಸುಬ್ಬರಾವ್ (ಪ್ರಧಾನ ವ್ಯವಸ್ಥಾಪಕರು ಇ.ಎಂ.ಡಿ ಮತ್ತು ಸಿ.ಈ ಪ್ಲಾಂಟ್), ಎಲ್. ಪ್ರವೀಣ್ ಕುಮಾರ್ (ಪ್ರಧಾನ ವ್ಯವಸ್ಥಾಪಕರು- ಸಾರ್ವಜನಿಕ ಸಂಪರ್ಕ) ಮತ್ತು  ಅಜಯ್ ಡಿ. ಸೋಂಕುವಾರ್ (ಉಪ ಪ್ರಧಾನ ವ್ಯವಸ್ಥಾಪಕರು ಮೆಟೀರಿಯಲ್ ಮ್ಯಾನೇಜ್‌ಮೆಂಟ್)ರವರು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗು ಕೇಂದ್ರ ಜಾಗೃತಾ ಕಮಿಷನರ್‌ರವರ ಸಂದೇಶಗಳನ್ನು ವಾಚಿಸಿದರು. 
    ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್. ಸುರೇಶ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಸೇರಿದಂತೆ ಅಧಿಕಾರಿಗಳು, ಕಾರ್ಮಿಕರು ಇನ್ನಿತರರು ಉಪಸ್ಥಿತರಿದ್ದರು. 
    ತ್ರಿವೇಣಿ ಪ್ರಾರ್ಥಿಸಿ, ರಘುನಾಥ ಬಿ. ಅಷ್ಟಪುತ್ರೆ (ಪ್ರಧಾನ ವ್ಯವಸ್ಥಾಪಕರು-ವಿಜಿಲೆನ್ಸ್) ಸ್ವಾಗತಿಸಿ, ಎಲ್. ಕುಥಲನಾಥನ್ ಸಹಾಯಕ ಮಹಾಪ್ರಬಂಧಕರು (ವಿಜಿಲೆನ್ಸ್) ಕಾರ್ಯಕ್ರಮ ನಿರೂಪಿಸಿದರು. ಕೇದಾರನಾಥ (ಸೆಕ್ಷನ್ ಅಸೋಸಿಯೆಟ್ಸ್) ವಂದಿಸಿದರು.  
    ನ್ಯೂಟೌನ್ ಶ್ರೀ ಶಾರದಾ ಮಂದಿರದಲ್ಲಿ ನ.೪ರಂದು ಮಧ್ಯಾಹ್ನ ೨.೧೫ಕ್ಕೆ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಗಳನ್ನು ವಿತರಿಸುವುದರೊಂದಿಗೆ ಜಾಗೃತಿ ತಿಳುವಳಿಕೆ ಕುರಿತು ನಾಟಕವನ್ನು ಆಯೋಜಿಸಲಾಗಿದೆ.

ಪುನೀತ್‌ರಾಜ್‌ಕುಮಾರ್ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿ : ಬಿ.ಎಸ್ ಗಣೇಶ್

ಭದ್ರಾವತಿ ತಾಲೂಕು ಕಛೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪುನೀತ್‌ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಯುವ ಮುಖಂಡ ಬಿ.ಎಸ್ ಗಣೇಶ್ ಪಾಲ್ಗೊಂಡು ಮಾತನಾಡಿದರು. 
    ಭದ್ರಾವತಿ : ಕರ್ನಾಟಕ ರತ್ನ, ನಟ, ಸಮಾಜ ಸೇವಕ ದಿವಂಗತ ಪುನೀತ್‌ರಾಜ್‌ಕುಮಾರ್ ಸಮಾಜಕ್ಕೆ ಮಾದರಿಯಾಗಿದ್ದು, ಅವರ ಸೇವಾ ಕಾರ್ಯಗಳನ್ನು ನಾವುಗಳು ಸಹ ಮೈಗೂಡಿಸಿಕೊಳ್ಳಬೇಕೆಂದು ಯುವ ಮುಖಂಡ ಬಿ.ಎಸ್ ಗಣೇಶ್ ಹೇಳಿದರು. 
    ಅವರು ಮಂಗಳವಾರ ತಾಲೂಕು ಕಛೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪುನೀತ್‌ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಭೂಮಿ ಮೇಲೆ ಮನುಷ್ಯ ಜನ್ಮ ಶ್ರೇಷ್ಠವಾಗಿದ್ದು, ನಮ್ಮ ಜನ್ಮ ಸಾರ್ಥಕವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು. 
    ಸ್ಥಳೀಯ ಮುಖಂಡರಾದ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಡಿಎಸ್‌ಎಸ್ ಮುಖಂಡ ಪುಟ್ಟರಾಜ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್, ತಾಲೂಕು ಕುರುಬರ ಸಂಘದ ನಿರ್ದೇಶಕ ಮಂಜುನಾಥ್ ಕೊಯ್ಲಿ, ಕುಮಾರ್(ಮಾಸ್ಟರ್) ಹಾಗು ಆಟೋ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಆಟೋ ಚಾಲಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಪುಣ್ಯಸ್ಮರಣೆ ಅಂಗವಾಗಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಿ.ಎಸ್ ಗಣೇಶ್, ಆರ್. ಮಹೇಶ್ ಕುಮಾರ್ ಚಾಲನೆ ನೀಡಿದರು.  

ಪುನೀತ್‌ರಾಜ್‌ಕುಮಾರ್‌ರವರ ಪುಣ್ಯಸ್ಮರಣೆ ಅಂಗವಾಗಿ ಭದ್ರಾವತಿ ತಾಲೂಕು ಕಛೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಿ.ಎಸ್ ಗಣೇಶ್, ಆರ್. ಮಹೇಶ್ ಕುಮಾರ್ ಚಾಲನೆ ನೀಡಿದರು. 

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಗಣಹೋಮ

ಭದ್ರಾವತಿ ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮಂಗಳವಾರ ಗಣಹೋಮ ಜರುಗಿತು.
    ಭದ್ರಾವತಿ: ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮಂಗಳವಾರ ಗಣಹೋಮ ಜರುಗಿತು.
    ಕಳೆದ ವರ್ಷ ಸಹ ಕಾರ್ಖಾನೆ ಉಳಿವಿಗಾಗಿ ಗಣಹೋಮ ಹಮ್ಮಿಕೊಳ್ಳಲಾಗಿತ್ತು. ಇದೀಗ ೨ನೇ ಬಾರಿ ಗಣಹೋಮ ಜರುಗಿದ್ದು, ಕಾಗದನಗರ ೭ನೇ ವಾರ್ಡ್ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕರಾದ ರಮೇಶ್ ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. 
    ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನ್ಯೂಕಾಲೋನಿ, ನ್ಯೂಟೌನ್, ಆಂಜನೇಯ ಅಗ್ರಹಾರ, ಬಾಲಭಾರತಿ, ಬೆಣ್ಣೆಕೃಷ್ಣ ಸರ್ಕಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು,  
    ನ.೨ರಂದು ಡೊಳ್ಳು ಕುಣಿತ, ತಮಟೆ ಹಾಗು ಮಂಗಳವಾದ್ಯಗಳೊಂದಿಗೆ ಉತ್ಸವ ಮೆರವಣಿಗೆಯೊಂದಿಗೆ ಸಂಜೆ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ. 

Monday, October 28, 2024

ಶಾಸಕ ಬಿ.ಕೆ ಸಂಗಮೇಶ್ವರ್ ಹುಟ್ಟುಹಬ್ಬ : ನಿರಾಶ್ರಿತರ ಆಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಭದ್ರಾವತಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬದ ಅಂಗವಾಗಿ  ಸೋಮವಾರ ಪ್ರಕೃತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ-ತಿಮ್ಲಾಪುರ ರಸ್ತೆಯಲ್ಲಿರುವ ಹೋಂ ಆಫ್ ಹೋಂ ಜನಸ್ನೇಹಿ ಸೇವಾ ಟ್ರಸ್ಟ್ ನಿರಾಶ್ರಿತರ ಆಶ್ರಮಕ್‌ಕೆ ದಿನಸಿ ಸಾಮಾಗ್ರಿಗಳನ್ನು ವಿತರಿಸಲಾಯಿತು. 
ಭದ್ರಾವತಿ : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬ ಸೋಮವಾರ ನಗರದ ವಿವಿಧೆಡೆ ವಿವಿಧ ಸಂಘಟನೆಗಳಿಂದ, ಅಭಿಮಾನಿಗಳಿಂದ ಆಚರಿಸಲಾಯಿತು. 
ಪ್ರಕೃತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹುಟ್ಟುಹಬ್ಬದ ಅಂಗವಾಗಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ-ತಿಮ್ಲಾಪುರ ರಸ್ತೆಯಲ್ಲಿರುವ ಹೋಂ ಆಫ್ ಹೋಂ ಜನಸ್ನೇಹಿ ಸೇವಾ ಟ್ರಸ್ಟ್ ನಿರಾಶ್ರಿತರ ಆಶ್ರಮದಲ್ಲಿ ದಿನಸಿ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು. ಪ್ರಕೃತಿ ಜಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಸರ್ಕಾರಿ ನೌಕರರ ಸಂಘದ ಚುನಾವಣೆ : ಹಾಲಿ ಅಧ್ಯಕ್ಷ ಬಿ. ಸಿದ್ದಬಸಪ್ಪ ಗೆಲುವು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಮತದಾನ ಸೋಮವಾರ ಭದ್ರಾವತಿ ಹಳೇನಗರದ ಕನಕಮಂಟಪ ಸಮೀಪದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಪಾಠ ಶಾಲೆಯಲ್ಲಿ ನಡೆಯಿತು. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಮತದಾನ ಸೋಮವಾರ ಹಳೇನಗರದ ಕನಕಮಂಟಪ ಸಮೀಪದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಪಾಠ ಶಾಲೆಯಲ್ಲಿ ನಡೆಯಿತು. 
    ಈಗಾಗಲೇ ಕಾರ್ಯಕಾರಿ ಸಮಿತಿಗೆ ಬಹುತೇಕ ಮಂದಿ ವಿವಿಧ ಮತ ಕ್ಷೇತ್ರಗಳಿಂದ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಕೆಲವು ಮತ ಕ್ಷೇತ್ರಗಳಿಗೆ ಮತದಾನ ನಡೆಯಿತು. ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಕಂಡು ಬಂದಿತು. 
    ತಾಲೂಕು ಸರ್ಕಾರಿ ನೌಕರರ ಸಂಘದ ಹಾಲಿ ಅಧ್ಯಕ್ಷ ಬಿ. ಸಿದ್ದಬಸಪ್ಪ ಈ ಬಾರಿ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದಾರೆ. ಪ್ರೌಢಶಾಲೆ ಮತ ಕ್ಷೇತ್ರದ ೧ ಸ್ಥಾನಕ್ಕೆ ವಿ. ಮೋತಿನಾಯ್ಕ, ಜಿ. ಶಿವಾನಾಯ್ಕ ಮತ್ತು ಬಿ. ಸಿದ್ದಬಸಪ್ಪ ಸ್ಪರ್ಧಿಸಿದ್ದು, ಒಟ್ಟು ೩೦೦ ಮತಗಳ ಪೈಕಿ ೧೭೦ ಮತಗಳ ಚಲಾವಣೆಗೊಂಡಿವೆ. ಈ ಪೈಕಿ ಬಿ. ಸಿದ್ದಬಸಪ್ಪ-೧೮೬ ಅತಿಹೆಚ್ಚು, ವಿ. ಮೋತಿನಾಯ್ಕ-೪೭ ಹಾಗು ಜಿ. ಶಿವಾನಾಯ್ಕ-೩೭ ಮತಗಳನ್ನು ಪಡೆದುಕೊಂಡಿದ್ದಾರೆ
    ಸರ್ಕಾರಿ ಪ್ರಾಥಮಿಕ ಶಾಲೆಗಳು ಮತಕ್ಷೇತ್ರದ ಒಟ್ಟು ೩ ಸ್ಥಾನಗಳಿಗೆ ಜೇನಮ್ಮ, ಎಸ್. ನಾಗರತ್ನಮ್ಮ, ಯು. ಮಹಾದೇವಪ್ಪ, ಮುಕ್ತಿಯಾರ್ ಅಹಮದ್, ಎಸ್.ಕೆ ಮೋಹನ್, ರಮೇಶ್ ನಾಯ್ಕ, ಎ. ರಂಗನಾಥ, ವೈ.ಎನ್ ಶಶಿಧರಗೌಡ ಮತ್ತು ಎಚ್.ಎಸ್ ಸುಮಾ ಸ್ಪರ್ಧಿಸಿದ್ದು, ಒಟ್ಟು ೮೨೧ ಮತಗಳ ಪೈಕಿ ೭೯೫ ಮತಗಳು ಚಲಾವಣೆಗೊಂಡಿವೆ. ಶೇ.೯೭ರಷ್ಟು ಮತದಾನ ನಡೆದಿದ್ದು, ಈ ಪೈಕಿ ಎಸ್.ಕೆ ಮೋಹನ್-೬೨೨, ವೈ.ಎನ್ ಶ್ರೀಧರ್ ಗೌಡ-೫೬೬ ಮತ್ತು ಎ. ರಂಗನಾಥ-೫೩೧ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 

ಕನ್ನಡ ರಥಯಾತ್ರೆಗೆ ಉಕ್ಕಿನ ನಗರದಲ್ಲಿ ಅದ್ದೂರಿ ಸ್ವಾಗತ

ಮಂಡ್ಯದಲ್ಲಿ ಡಿ.೨೦, ೨೧ ಮತ್ತು ೨೨ರಂದು ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಸೋಮವಾರ ಸಂಜೆ ೬.೩೦ರ ಸಮಯಕ್ಕೆ ಭದ್ರಾವತಿ ನಗರಕ್ಕೆ ಆಗಮಿಸಿತು. 
    ಭದ್ರಾವತಿ: ಮಂಡ್ಯದಲ್ಲಿ ಡಿ.೨೦, ೨೧ ಮತ್ತು ೨೨ರಂದು ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಸೋಮವಾರ ಸಂಜೆ ೬.೩೦ರ ಸಮಯಕ್ಕೆ ನಗರಕ್ಕೆ ಆಗಮಿಸಿತು. 
    ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್‌ರವರು ಕನ್ನಡ ತಾಯಿ ಭುವನೇಶ್ವರಿಗೆ ಮಾಲಾರ್ಪಣೆ ಮಾಡಿದರು. 
    ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಉಪ ತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪ್ರಮುಖರಾದ ಕೋಡ್ಲು ಯಜ್ಞಯ್ಯ, ಎಂ.ಇ ಜಗದೀಶ್, ಟಿ. ತಿಮ್ಮಪ್ಪ, ಎಂ.ಎಸ್ ಸುಧಾಮಣಿ, ಗೊಂದಿ ಜಯರಾಂ, ಸತ್ಯ ಭದ್ರಾವತಿ, ಚಿನ್ನಯ್ಯ, ಮಣಿ ಜಿಂಕ್‌ಲೈನ್, ಪ್ರಶಾಂತ್, ಜೆ.ಎನ್ ಬಸವರಾಜಪ್ಪ, ಕೋಗಲೂರು ತಿಪ್ಪೇಸ್ವಾಮಿ, ಬಿ.ಟಿ ನಾಗರಾಜ್, ಬಸವರಾಜ ಬಿ. ಆನೇಕೊಪ್ಪ, ವಿಶಾಲಾಕ್ಷಿ, ಸುಮತಿ ಕಾರಂತ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ವಿಐಎಸ್‌ಎಲ್ ಉಲಿವಿಗಾಗಿ ಅ.೨೯ರಂದು ಗಣಹೋಮ



    ಭದ್ರಾವತಿ: ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ನ.೨ರಂದು ನಡೆಯಲಿದೆ. 
    ಕಳೆದ ವರ್ಷ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮೂಲಕ ಸಮಿತಿ ವತಿಯಿಂದ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ವಿನೂತನ ಪ್ರಯತ್ನ ಕೈಗೊಳ್ಳಲಾಗಿತ್ತು. ವೇದಿಕೆಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಚಿತ್ರಣವನ್ನು ತೆರೆದಿಡುವ ಮೂಲಕ ಗಮನ ಸೆಳೆಯಲಾಗಿತ್ತು. ಅಲ್ಲದೆ ಕಾರ್ಖಾನೆ ಉಳಿವಿಗಾಗಿ ಗಣಹೋಮ ಸಹ ಏರ್ಪಡಿಸಲಾಗಿತ್ತು. ಈ ಬಾರಿ ಸಹ ಅ.೨೯ರ ಮಂಗಳವಾರ ಗಣಹೋಮ ಹಮ್ಮಿಕೊಳ್ಳಲಾಗಿದೆ. 
    ನ.೨ರಂದು ಡೊಳ್ಳು ಕುಣಿತ, ತಮಟೆ ಹಾಗು ಮಂಗಳವಾದ್ಯಗಳೊಂದಿಗೆ ವಿಸರ್ಜನಾ ಪೂರ್ವ ಉತ್ಸವ ಮೆರವಣಿಗೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ದಿಶಾ ಸಮಿತಿಗೆ ಯುವ ಮುಖಂಡ ಜಿ. ಆನಂದಕುಮಾರ್

ಜಿ. ಆನಂದಕುಮಾರ್ 
    ಭದ್ರಾವತಿ : ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಜಿಲ್ಲಾಮಟ್ಟದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಿಶಾ ಸಮಿತಿಗೆ ನಗರದ ಯುವ ಮುಖಂಡ ಜಿ. ಆನಂದಕುಮಾರ್ ನಾಮನಿರ್ದೇಶನಗೊಂಡಿದ್ದಾರೆ. 
    ಸಮಿತಿ ಅಧ್ಯಕ್ಷರಾದ ಸಂಸದ ಬಿ.ವೈ ರಾಘವೇಂದ್ರರವರ ಕೋರಿಕೆ ಮೇರೆಗೆ ಆನಂದಕುಮಾರ್‌ರವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ. ದಿಶಾ ಸಮಿತಿ ಅಧ್ಯಕ್ಷರು ಹಾಗು ೪೦ ಮಂದಿ ಸದಸ್ಯರನ್ನು ಒಳಗೊಂಡಿದೆ. 
    ಜಿ. ಆನಂದಕುಮಾರ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಮೂಲಕ ಗುರುತಿಸಿಕೊಂಡಿದ್ದು, ಒಂದು ಬಾರಿ ಬಿಜೆಪಿ ಮಂಡಲ ನಗರ ಅಧ್ಯಕ್ಷರಾಗಿ, ೨ ಬಾರಿ ನಗರಸಭೆ ಸದಸ್ಯರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 
    ದಿಶಾ ಸಮಿತಿಗೆ ನಾಮನಿರ್ದೇಶನಗೊಳ್ಳಲು ಕಾರಣಕರ್ತರಾದ ಸಂಸದ ಬಿ.ವೈ ರಾಘವೇಂದ್ರರವರಿಗೆ ಜಿ. ಆನಂದಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ. 

Saturday, October 26, 2024

ಬಸ್ ನಿಲ್ದಾಣದ ಬಳಿ ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು

    ಭದ್ರಾವತಿ: ನಗರದ ಬೈಪಾಸ್ ರಸ್ತೆ, ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಸರ್ಕಲ್ ಸಮೀಪದ ಬಸ್ ನಿಲ್ದಾಣದ ಬಳಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ. 
    ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಬಸವರಾಜ್ ಅ.೨೫ರ ಸಂಜೆ ೫ ಗಂಟೆ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಮನೆಯಲ್ಲಿ ದಾಸ್ತಾನು ಮಾಡಿದ್ದ ೫ ಕೆ.ಜಿ ಒಣ ಗಾಂಜಾ ಸೊಪ್ಪು ವಶ : ಪ್ರಕರಣ ದಾಖಲು


    ಭದ್ರಾವತಿ : ವ್ಯಕ್ತಿಯೋರ್ವ ಮನೆಯಲ್ಲಿ ದಾಸ್ತಾನು ಮಾಡಿದ್ದ ಸುಮಾರು ೫ ಕೆ.ಜಿ ತೂಕದ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. 
    ತಾಲೂಕಿನ ಅಗರದಹಳ್ಳಿ ಗ್ರಾಮದ ಮನೆಯೊಂದರಲ್ಲಿ ಗಾಂಜಾ ಸೊಪ್ಪನ್ನು ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜುರವರ ನೇತೃತ್ವದ ತಂಡ ದಾಳಿ ನಡೆಸಿದ್ದು, ಸುಮಾರು ೨.೮೦ ಲಕ್ಷ ರು. ಮೌಲ್ಯದ ೫ ಕೆ.ಜಿ ೫೭೪ ಗ್ರಾಂ ತೂಕದ ಒಣ ಗಾಂಜಾ ಸೊಪ್ಪು ಪತ್ತೆಯಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 

ಮನೆಯ ಮೇಲ್ಛಾವಣಿ ಶೀಟ್ ತೆಗೆದು ಚಿನ್ನಾಭರಣ ಕಳ್ಳತನ



    ಭದ್ರಾವತಿ : ಮನೆಯ ಮೇಲ್ಛಾವಣಿ ಶೀಟ್ ತೆಗೆದು ಒಳಗೆ ಪ್ರವೇಶಿಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಆನವೇರಿ ಗ್ರಾಮದಲ್ಲಿ ನಡೆದಿದೆ. 
    ಶೇಖರಪ್ಪ ಎಂಬುವರರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅ.೨೪ರಂದು ಮಧ್ಯಾಹ್ನ ೧.೩೦ರ ಸಮಯದಲ್ಲಿ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗಕ್ಕೆ ಹೋಗಿದ್ದು,  ಸಂಜೆ ೬.೩೦ರ ಸಮಯಕ್ಕೆ ಮನೆಗೆ ಬಂದಾಗ ಕಳ್ಳತನ ಮಾಡಿರುವುದು ಕಂಡು ಬಂದಿದೆ. ಸುಮಾರು ೩೫ ಸಾವಿರ ರು. ಮೌಲ್ಯದ ಚಿನ್ನ ಹಾಗು ಸುಮಾರು ೧೫ ಸಾವಿರ ರು. ಮೌಲ್ಯದ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮನುಷ್ಯನ ದೈಹಿಕ, ಬುದ್ಧಿ ಬೆಳವಣಿಗೆಗೆ ಅಯೋಡಿನ್ ಅತಿ ಅವಶ್ಯಕ : ಕೆ. ಸುಶೀಲಬಾಯಿ

ಭದ್ರಾವತಿ ತಾಲೂಕಿನ ಅರೆಬಿಳಿಚಿ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗು ಅರೆಬಿಳಿಚಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಒಕ್ಕೂಟದ ಸಹಯೋಗದೊಂದಿಗೆ ಸ್ವಾಸ್ಥ್ಯ ಸಂಕಲ್ಪ ಹಾಗು ಅಯೋಡಿನ್ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ಅಯೋಡಿನ್ ಮನುಷ್ಯನ ದೈಹಿಕ ಹಾಗು ಬುದ್ಧಿ ಬೆಳವಣಿಗೆಯಲ್ಲಿ ಅತಿ ಅವಶ್ಯಕವಾದ ಸೂಕ್ಷ್ಮ ಪೋಷಕಾಂಶವಾಗಿದ್ದು, ಇದು ನೈಸರ್ಗಿಕವಾಗಿ ಅಯೋಡಿನ್‌ಯುಕ್ತ ಉಪ್ಪಿನಲ್ಲಿ ದೊರೆಯುತ್ತದೆ ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಬಾಯಿ ಹೇಳಿದರು. 
    ಅವರು ತಾಲೂಕಿನ ಅರೆಬಳಿಚಿಯಲ್ಲಿರುವ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗು ಅರೆಬಿಳಿಚಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಒಕ್ಕೂಟದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಹಾಗು ಅಯೋಡಿನ್ ಸಪ್ತಾಹ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾಹಿತಿ ನೀಡಿದರು. 
    ನಿರಂತರ ಮಳೆಯಿಂದಾಗಿ ಭೂಮಿಯ ಮೇಲ್ಮೈಯಲ್ಲಿರುವ ಅಯೋಡಿನ್ ಅಂಶ ಕೊಚ್ಚಿ ಹೋಗಿ ಹಳ್ಳ-ಕೊಳ್ಳ, ನದಿಗಳ ಸಮುದ್ರ ಸೇರುತ್ತದೆ. ಈ ಹಿನ್ನಲೆಯಲ್ಲಿ ಗೆಡ್ಡೆ ರೂಪದಲ್ಲಿರುವ ಮೂಲಂಗಿ, ಗೆಣಸು, ಕ್ಯಾರೇಟ್, ಬೀಟ್‌ರೋಟ್, ಕೋಸು ಇತ್ಯಾದಿ ತರಕಾರಿಗಳಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ದೊರೆಯುತ್ತದೆ. ಸಮುದ್ರದ ಮೀನು ಇತ್ಯಾದಿಗಳಲ್ಲಿ ಇದು ಹೆಚ್ಚಾಗಿ ದೊರೆಯುತ್ತದೆ ಎಂದರು. 
    ಅಯೋಡಿನ್ ಪೋಷಕಾಂಶ ಕೊರತೆಯಿಂದ ಗರ್ಭಿಣಿ ಮಹಿಳೆಯರಲ್ಲಿ ಗರ್ಭಪಾತ, ಬುದ್ಧಿಮಾಂಧ್ಯ, ಕಿವುಡತನ, ಮೂಕತನ ಹಾಗು ಮೆಳ್ಳೆ ಕಣ್ಣು ಶಿಶುವಿನ ಜನನ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಮಕ್ಕಳಲ್ಲಿ ಕುಬ್ಜತನ, ಗ್ರಹಣ ಶಕ್ತಿಯ ಕೊರತೆ, ಕುಂಠಿತ ಬುದ್ಧಿ ಬೆಳವಣಿಗೆ, ವಯಸ್ಕರಲ್ಲಿ ಅತಿಯಾದ ಆಯಾಸ, ಹೆಣ್ಣು ಮಕ್ಕಳ ಋತು ಚಕ್ರದಲ್ಲಿ ಸಮಸ್ಯೆಗಳು ಕಂಡು ಬರುತ್ತವೆ. ಸ್ಥೂಲಕಾಯ ಹಾಗು ಥೈರಾಯಿಡ್ ಗ್ರಂಥಿಯ ಗಳಗಂಡ ಅಥವಾ ಗಾಯಿಟರ್ ಎಂಬ ಕೊರತೆ ಕಾಯಿಲೆಯು ಕಾಡುತ್ತದೆ ಎಂದರು. 
    ಸರ್ಕಾರ ಎಲ್ಲರಿಗೂ ಅಯೋಡಿನ್ ಪೋಷಕಾಂಶ ವಿತರಿಸುವ ಉದ್ದೇಶದಿಂದ ಉಪ್ಪಿನಲ್ಲಿ ಅಯೋಡಿನ್ ಅಂಶ ಸೇರಿಸಿ `ಅಯೋಡಿನ್‌ಯುಕ್ತ ಉಪ್ಪು' ಮಾರಾಟಕ್ಕೆ ಅವಕಾಶ ನೀಡಿದೆ. ನಾವುಗಳು ಅಯೋಡಿನ್‌ಯುಕ್ತ ಉಪ್ಪನ್ನು ಖರೀದಿಸಬೇಕು. ಅಲ್ಲದೆ ಗಾಳಿಯಲ್ಲಿ ಅಯೋಡಿನ್ ಅಂಶ ಹಾಳಾಗದಂತೆ ಭದ್ರವಾದ ಮುಚ್ಚಳವಿರುವ ಡಬ್ಬದಲ್ಲಿ ಸಂಗ್ರಹಿಸಿ ಬಳಸಬೇಕೆಂದರು. 
ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಶುಚಿ, ಪೋಷಕಾಂಶಯುಕ್ತ ಆಹಾರ ಹಾಗು ಶುದ್ಧ ನೀರಿನ ಸೇವನೆ, ಪರಿಸರ ಸ್ವಚ್ಛತೆಯ ಕಾಳಜಿ ಮತ್ತು ಪರಿಸರ ರಕ್ಷಣೆ ಅತಿ ಮುಖ್ಯ ಎಂದರು. 
    ಶಾಲಾ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಒಕ್ಕೂಟದ ಪ್ರತಿನಿಧಿಗಳು, ವಿದ್ಯಾಥಿಗಳು ಉಪಸ್ಥಿತರಿದ್ದರು. 

ಎಸ್. ಬಂಗಾರಪ್ಪ ಹುಟ್ಟುಹಬ್ಬ : ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ

ಹಿಂದುಳಿದ ವರ್ಗಗಳ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿ ದಿವಂಗತ ಸಾರೇಕೊಪ್ಪ ಬಂಗಾರಪ್ಪನವರ ೯೨ನೇ ಹುಟ್ಟುಹಬ್ಬದ ಅಂಗವಾಗಿ ಭದ್ರಾವತಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ವತಿಯಿಂದ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. 
    ಭದ್ರಾವತಿ : ಹಿಂದುಳಿದ ವರ್ಗಗಳ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿ ದಿವಂಗತ ಸಾರೇಕೊಪ್ಪ ಬಂಗಾರಪ್ಪನವರ ೯೨ನೇ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ವತಿಯಿಂದ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. 
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಮಾರ್ಗದರ್ಶನದಲ್ಲಿ ಹಿರಿಯೂರಿನ ಅಮಲಾ ಮಾತಾ ಆಸ್ಪತ್ರೆಯಲ್ಲಿ ವಿಭಾಗದ ಅಧ್ಯಕ್ಷ ಎಂ. ರಮೇಶ್ ಶೆಟ್ಟಿ ನೇತೃತ್ವದಲ್ಲಿ ಒಳ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಯೋಜನೆಗಳ ಮೂಲಕ ಅವರನ್ನು ಸ್ಮರಿಸಲಾಯಿತು. 
    ಶಂಕರಘಟ್ಟ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಟಿ.ಡಿ ಶಶಿಕುಮಾರ್, ಶಂಕರ್ ರೈಸ್ ಮಿಲ್ ಮಾಲೀಕ ನಂದೀಶ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್ ಹಾಗು ಆಸ್ಪತ್ರೆ ವೈದ್ಯರು, ದಾದಿಯರು ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ನಿಲಯ ಕಾಮಗಾರಿ ಶೀಘ್ರ ಮುಕ್ತಾಯಗೊಂಡು ಸದ್ಬಳಕೆಯಾಗಲಿ : ಬಿ.ಕೆ ಮೋಹನ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೇಬಾಗಿ ಹನುಮಂತ ನಗರದಲ್ಲಿ ಶನಿವಾರ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಡಾ.ಬಿ.ಅರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಾಮಗಾರಿಗೆ ಗುದ್ದಲಿ ಪೂಜೆ ಹಾಗು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ : ಶಾಸಕ ಬಿ.ಕೆ ಸಂಗಮೇಶ್ವರ್ ಬಡ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮೆಟ್ರಿಕ್ ಪೂರ್ವ ಡಾ.ಬಿ.ಅರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಮಂಜೂರಾತಿ ಮಾಡಿಸಿದ್ದು, ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವ ಮೂಲಕ ಇದರ ಸದ್ಬಳಕೆಯಾಗಬೇಕೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು. 
    ಅವರು ಶನಿವಾರ ನಗರಸಭೆ ವ್ಯಾಪ್ತಿಯ ಸೀಗೇಬಾಗಿ ಹನುಮಂತ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಡಾ.ಬಿ.ಅರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
  ಸಮಾಜ ಕಲ್ಯಾಣ ಇಲಾಖೆ ಅನುದಾನ ಸುಮಾರು ೩.೫ ಕೋ. ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಕ್ರಮ ಕೈಗೊಂಡಿದ್ದು, ಬಂಗಾರಪ್ಪನವರ ಮುಂದಿನ ಜನ್ಮದಿನ ಅಚರಣೆಯೊಳಗೆ ಕಟ್ಟಡ ಪೂರ್ಣಗೊಂಡು ಉದ್ಘಾಟನೆಯಾಗಬೇಕು. ವಿದ್ಯೆ ಎಂಬುದು ಕದಿಯಲಾಗದ ಸಂಪತ್ತು. ವಿದ್ಯೆ ಕಲಿಯಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದರು. 
    ನಗರಸಭೆ ಪ್ರಭಾರ ಅಧ್ಯಕ್ಷ ಎಂ.ಮಣಿ ಎಎನ್‌ಎಸ್,  ಸದಸ್ಯರಾದ ಚನ್ನಪ್ಪ, ಅನಿತಾ ಮಲ್ಲೇಶ್, ಬಷೀರ್ ಅಹಮ್ಮದ್, ಮಹಮ್ಮದ್ ಯೂಸುಫ್, ಮುಖಂಡರಾದ ಜಿಂಜಾನಾಯ್ಕ, ನಾಗಣ್ಣ, ಶಿವಾಜಿರಾವ್, ರಾಮಣ್ಣ, ಅಣ್ಣಾದೊರೈ, ಸಂಪತ್, ಶ್ರೀನಿವಾಸ, ಅರಿಫ್, ಚಿನ್ನಯ್ಯ, ಶೇಖರ್,  ಶಾಲಾ ಅಡುಗೆ ತಯಾರಕರಾದ ಮೋಹಿನಿ, ಪದ್ಮ, ರತ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Friday, October 25, 2024

ಅ.೨೬ರಂದು `ಮಂಥನ ಭದ್ರಾವತಿ'

   

 ಭದ್ರಾವತಿ: ಮಂಥನ ಕರ್ನಾಟಕ ವತಿಯಿಂದ ಭದ್ರೆಯ ಮಡಿಲು, ಅರಿವಿನ ಕಡಲು `ಮಂಥನ ಭದ್ರಾವತಿ' ಮೊದಲ ಕಾರ್ಯಕ್ರಮ ಅ.೨೬ರ ಸಂಜೆ ೬ ಗಂಟೆಗೆ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 
    ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್. ಭಟ್ ಮತ್ತು  ರಾಷ್ಟ್ರೀಯ ಸ್ವಯಂ ಸೇವಕ ಸಂಘ, ದಕ್ಷಿಣ ಪ್ರಾಂತ್ಯ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಗೆ ೧೦ ಸಾವಿರ ರು. ದಂಡ..!

ಭದ್ರಾವತಿಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಗೆ ನ್ಯಾಯಾಲಯದ ಸಂಖ್ಯೆ ಸಿಸಿ೬೭೩೦/೨೪ರ ಪ್ರಕರಣದಲ್ಲಿ ಅ.೨೩ರಂದು ೧೦,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ. ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ. 
    ಭದ್ರಾವತಿ: ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಠಾಣೆ ಉಪನಿರೀಕ್ಷಕರು(ಪಿಎಸ್‌ಐ) ಗರಿಷ್ಠ ೧೦,೦೦೦ ರು. ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ನಡೆದಿದೆ. 
    ನ್ಯಾಯಾಲಯದ ಸಂಖ್ಯೆ ಸಿಸಿ೬೭೩೦/೨೪ರ ಪ್ರಕರಣದಲ್ಲಿ ಅ.೨೩ರಂದು ೧೦,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ. ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ.  
    ದೇಶದಲ್ಲಿ ಯಾವುದೇ ವ್ಯಕ್ತಿ ಕುಡಿದು ವಾಹನ ಚಲಾವಣೆ ಮಾಡ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ ೧೮೫ ರಡಿ ದೂರು ದಾಖಲಿಸುತ್ತಾರೆ.  ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನು ಸಹ ಕಸ್ಟಡಿಗೆ ತೆಗೆದುಕೊಳ್ಳಬಹುದು. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೨೦೭ ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲಾ ದಾಖಲೆಗಳನ್ನು ಸಹ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ೨,೦೦೦ ರೂಪಾಯಿಯಿಂದ ೧೦,೦೦೦ ರೂಪಾಯಿವರೆಗೆ ದಂಡ ವಿಧಿಸಲಾಗುತ್ತದೆ.  
    ಇನ್ನು ಬೆಂಗಳೂರಿನಲ್ಲಿ ಕುಡಿದು ವಾಹನ ಚಾಲನೆ ಮಾಡಿದರೆ ಮೊದಲ ಬಾರಿ ೧೦,೦೦೦ ರೂಪಾಯಿ ದಂಡ ಅಥವಾ ೬ ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಎರಡನೇ ಬಾರಿ ಅಪರಾಧಕ್ಕೆ ೧೫,೦೦೦ ರೂಪಾಯಿ ದಂಡ ಅಥವಾ ೨ ವರ್ಷಗಳವರೆಗೆ ಜೈಲು ಶಿಕ್ಷೆಯಾಗುತ್ತದೆ.  

ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಅಭಿಯಂತರ ತಾರಕೇಶ್ ಭೇಟಿ : ಪರಿಶೀಲನೆ

ದೇವಸ್ಥಾನದ ಮೇಲ್ಛಾವಣಿಯಲ್ಲಿ ಮಳೆ ನೀರು ಸೋರಿಕೆ : ಶೀಘ್ರ ಕಾಮಗಾರಿ ಆರಂಭ 

ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಸಂರಕ್ಷಣಾ ವಿಭಾಗದ ಅಭಿಯಂತರ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಸಂರಕ್ಷಣಾ ವಿಭಾಗದ ಅಭಿಯಂತರ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ದೇವಸ್ಥಾನದ ಮೇಲ್ಛಾವಣಿ ಶಿಥಿಲಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುವ ಕುರಿತು ದೇವಸ್ಥಾನದ ಅರ್ಚಕರು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಶಾಸಕರು ಪುರತತ್ವ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಶೀಘ್ರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದು, ಈ ಸಂಬಂಧ ಕಾಮಗಾರಿ ವೆಚ್ಚದ ಅಂದಾಜು ಪಟ್ಟಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಕಂದಾಯ ನಿರೀಕ್ಷಕ ಪ್ರಶಾಂತ್, ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸ್, ಮುಖಂಡರಾದ ನರಸಿಂಹಚಾರ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

ಚನ್ನಪಟ್ಟಣ ಚುನಾವಣೆ ಉಸ್ತುವಾರಿಯಾಗಿ ಎಸ್. ಮಂಜುನಾಥ್ ನೇಮಕ


ಎಸ್. ಮಂಜುನಾಥ್ 
    ಭದ್ರಾವತಿ: ನಗರದ ಜನ್ನಾಪುರ ನಿವಾಸಿ, ಕೆಪಿಸಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್. ಮಂಜುನಾಥ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. 
    ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಒ.ಬಿ.ಸಿ, ಅಲ್ಪಸಂಖ್ಯಾತ ಉಸ್ತುವಾರಿ ಕೆ.ರಾಜು ಹಾಗು ಎ.ಐ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿಯರವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿರ್ದೇಶನದಂತೆ  ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಧರ್ಮಸೇನ ಮಂಜುನಾಥ್‌ರವರನ್ನು ನೇಮಕಗೊಳಿಸಿದ್ದಾರೆ. 
     ಪರಿಶಿಷ್ಟಜಾತಿ ಸಮುದಾಯದ ಜನರನ್ನು ಗುರುತಿಸಿ ಅವರನ್ನು ವಿಶ್ವಾಸಕ್ಕೆ ಪಡೆದು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು, ಪಕ್ಷದ ಅಭ್ಯರ್ಥಿಪರ ವ್ಯಾಪಕ ಪ್ರಚಾರ ಕೈಗೊಂಡು ಗೆಲುವಿಗೆ ಶ್ರಮಿಸುವಂತೆ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ. 
    ಮಂಜುನಾಥ್‌ರವರು ಕರ್ನಾಟಕ ರಾಜ್ಯ ಮಾದಿಗ ಸಮಾಜ(ಕೆಆರ್‌ಎಂಎಸ್)ದ ರಾಜ್ಯಾಧ್ಯಕ್ಷರಾಗಿದ್ದು, ಹಲವಾರು ವರ್ಷಗಳಿಂದ ಪರಿಶಿಷ್ಟರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಂಡಿದ್ದಾರೆ.   

ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡಿ

ಭದ್ರಾವತಿ ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಮುಂದಿನ ಪ್ರಕ್ರಿಯೆಗೆ ಪೂರಕವಾಗುವಂತೆ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡುವಂತೆ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್‌ರವರಿಗೆ ಮನವಿ ಸಲ್ಲಿಸಲಾಗಿದೆ. 
    ಭದ್ರಾವತಿ : ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಮುಂದಿನ ಪ್ರಕ್ರಿಯೆಗೆ ಪೂರಕವಾಗುವಂತೆ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡುವಂತೆ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್‌ರವರಿಗೆ ಮನವಿ ಸಲ್ಲಿಸಲಾಗಿದೆ. 
    ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರು ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಕೃತಜ್ಞತೆ ಸಲ್ಲಿಸಿದ್ದು, ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಉಂಬ್ಲೆಬೈಲು ಕಲ್ಲಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಇತರೆ ೨೮ ಗ್ರಾಮಗಳನ್ನೊಳಗೊಂಡ ಸುಮಾರು ೪೮ ಕೋಟಿ ರೂ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. 
    ಶಿವಮೊಗ್ಗ ಜಿಲ್ಲೆ ಕುಂಸಿ ಮತ್ತು ೮೯ ಜನ ವಸತಿಗಳನ್ನೊಳಗೊಂಡ ಹಾಗೂ ಗಾಜನೂರು ಮತ್ತು ೧೫ ಜನ ವಸತಿಗಳನ್ನೊಳಗೊಂಡ ಸುಮಾರು ೧೨೫ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವುದು ಹಾಗು ತಾಲೂಕಿನ ಆನವೇರಿ ಮತ್ತು ೩೭ ಇತರೆ ಗ್ರಾಮಗಳಿಗೆ ಸುಮಾರು ೩೬.೧೧ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ಕೋರಲಾಗಿದೆ. 
    ತಾಲೂಕಿನ ಮಾರಶೆಟ್ಟಿಹಳ್ಳಿ ಮತ್ತು ಇತರೆ ೨೩ ಗ್ರಾಮಗಳಿಗೆ ೨೫ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ವಿನಂತಿಸಲಾಗಿದೆ. 

Thursday, October 24, 2024

ಬಿಳಿಕಿ ಹಿರೇಮಠದಲ್ಲಿ ಅ.೩೦ರಂದು ಇಷ್ಟಲಿಂಗ ಮಹಾಪೂಜೆ, ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ


    ಭದ್ರಾವತಿ : ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಹಾಗು ಲಿಂಗೈಕ್ಯ ಶ್ರೀ ರಾಚೋಟಿ ಶಿವಾಚಾರ್ಯ ಸ್ವಾಮಿಗಳವರ ೫೭ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ ಅ.೩೦ರಂದು ನಡೆಯಲಿದೆ. 
    ಅಂದು ಬೆಳಿಗ್ಗೆ ೬ ಗಂಟೆಗೆ ಗಂಗೆ ಪೂಜೆಯೊಂದಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ ಮತ್ತು ಶ್ರೀ ಶಕ್ತಿಮಾತೆ ಚೌಡೇಶ್ವರಿ ದೇವಿಗೆ ಮಹಾರುದ್ರಾಭಿಷೇಕ, ಕುಂಕುಮಾರ್ಚನೆ, ಬಿಲ್ವಾರ್ಚನೆ, ಅಷ್ಟೋತ್ತರ, ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ ಮತ್ತು ೮ ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಅಷ್ಟಲಿಂಗ ಮಹಾಪೂಜೆ ಹಾಗು ೧೦ ಗಂಟೆಗೆ ಅಂಗೈಕ್ಯ ಶ್ರೀಗಳವರ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ ನಡೆಯಲಿದೆ. 
    ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು,  ಖಾಸಾ ಶಾಖಾಮಠ, ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ,  ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗು ಬಿಳಿಕಿ ಹಿರೇಮಠ ಗೌರವಾಧ್ಯಕ್ಷ ಟಿ. ವಿ. ಈಶ್ವರಯ್ಯ ಉಪಸ್ಥಿತರುವರು. 
    ಸಂಸದ ಬಿ.ವೈ ರಾಘವೇಂದ್ರ ಸಮಾರಂಭ ಉದ್ಘಾಟಿಸಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ. ಕೆ. ಸಂಗಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ಹೊನ್ನಾಳಿ ಹಿರೇಕಲ್ಮಠದ ಶ್ರೀ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಹುಣಸಘಟ್ಟ, ಹಾಲಸ್ವಾಮಿಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣಕಂಥಿಮಠದ  ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾದಿಹಳ್ಳಿ ಹಿರೇಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ,  ತೊಗರ್ಶಿ ಪಂಚವಣ್ಣಿಗಿಮಠದ ಶ್ರೀ ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಬೀರೂರು ಬಾಳೆಹೊನ್ನೂರು ಖಾಸಾ ಶಾಖಾಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕೆ. ಬಿದಿರೆ ದೊಡ್ಡಮಠದ ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ,  ಮೆಟಿಕುರ್ಕೆಮಠದ ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ, ಸಂಸ್ಥಾನ ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ರಾಮಲಿಂಗೇಶ್ವರಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠ, ಶ್ರೀ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕುರವತ್ತಿ ಹಿರೇಮಠದ ಶ್ರೀ ಸಿದ್ಧನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ದಿಂಡದಹಳ್ಳಿ ಧರ್ಮಕ್ಷೇತ್ರ ಮಠದ  ಶ್ರೀ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ನಂದಿಪುರಮಠದ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಹಣ್ಣೆಮಠದ ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತು  ಬುಡರಕಟ್ಟಿ ಶ್ರೀಗುರು ಮಡಿವಾಳೇಶ್ವರಮಠದ ಶ್ರೀ ಶಿವಪಂಚಾಕ್ಷರಿ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.  
    ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಶಿವಮೊಗ್ಗ ಬಸವೇಶ್ವರ ವೀರಶೈವ ಸಮಾಜ ಅಧ್ಯಕ್ಷ ಎಸ್. ಎಸ್. ಜ್ಯೋತಿಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ಎನ್. ಮಹಾಲಿಂಗಯ್ಯ ಶಾಸ್ತ್ರಿ, ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷ ಎ. ಎಂ. ಚಂದ್ರಯ್ಯ, ಜಿಲ್ಲಾ ವೀರಶೈವ ಪುರೋಹಿತ ಮತ್ತು ಅರ್ಚಕರ ಸಂಘದ ಅಧ್ಯಕ್ಷ ಎಚ್. ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ವೀರಶೈವ ಪುರೋಹಿತ-ಜ್ಯೋತಿಷ್ಯರ ಸಂಘದ ಅಧ್ಯಕ್ಷ ಶ್ರೀ ವಿದ್ವಾನ್ ಡಾ. ರೇಣುಕಾರಾಧ್ಯ ಶಾಸ್ತ್ರಿಗಳು, ಮುಖಂಡರಾದ ಮಂಗೋಟೆ ರುದ್ರೇಶ್,  ಶಾರದ ಅಪ್ಪಾಜಿ, ಆರ್. ಮಹೇಶ್ ಕುಮಾರ್ ಮತ್ತು ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.  
    ಜನ್ಮ ಶತಮಾನೋತ್ಸವ ಅಂಗವಾಗಿ ಹೊನ್ನಾಳಿ ಕೋಟೆಮಲ್ಲೂರು ನಿವೃತ್ತ ಮುಖ್ಯೋಪಾಧ್ಯಾಯ ವಿ.ಎಂ ಶಿವಲಿಂಗಾರಾಧ್ಯ ಶಾಸ್ತ್ರಿಗಳಿಗೆ `ಸೌಜನ್ಯ ಸುಧಾಕರ ರತ್ನ' ವಿಶೇಷ ಪ್ರಶಸ್ತಿ ಪ್ರದಾನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಭದ್ರಾವತಿ ಜನಸಂಘ ಕಾಲದ ೭೫ ವರ್ಷದ ಹಿರಿಯ ಕಾರ್ಯಕರ್ತರಾದ ನಂಜಪ್ಪನವರು ಗುರುವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷದ ಸಕ್ರಿಯ ಸದಸ್ಯತ್ವ ಪಡೆಯುವ ಮೂಲಕ ತಾಲೂಕು ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸಕ್ರಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. 

ಭದ್ರಾವತಿ: ಜನಸಂಘ ಕಾಲದ ೭೫ ವರ್ಷದ ಹಿರಿಯ ಕಾರ್ಯಕರ್ತರಾದ ನಂಜಪ್ಪನವರು ಗುರುವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷದ ಸಕ್ರಿಯ ಸದಸ್ಯತ್ವ ಪಡೆಯುವ ಮೂಲಕ ತಾಲೂಕು ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸಕ್ರಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. 
ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ಮೊದಲ ಸಕ್ರಿಯ ಸದಸ್ಯತ್ವ ನಂಜಪ್ಪನವರು ಪಡೆದುಕೊಳ್ಳುತ್ತಿರುವುದು ಕಾರ್ಯಕರ್ತರ ಹೆಮ್ಮೆಯ ವಿಚಾರವಾಗಿದೆ. ನಂಜಪ್ಪನವರು ಕೀಪ್ಯಾಡ್ ಮೊಬೈಲನ್ನು ಹೊಂದಿದ್ದರೂ ಮತ್ತೊಬ್ಬರ ಮೊಬೈಲ್ ಸಹಾಯದಿಂದ ಇಳಿ ವಯಸ್ಸಿನಲ್ಲೂ ಕೂಡ ಒಟ್ಟು ೧೨೭ ಸಾಮಾನ್ಯ ಸದಸ್ಯರನ್ನು ನೊಂದಾಯಿಸಿ ಇಂದಿನ ಯುವ ಪೀಳಿಗೆ ಕಾರ್ಯಕರ್ತರಿಗೆ ಪ್ರೇರಣೆ ನೀಡಿದ್ದಾರೆ ಎಂದರು. 
ಮಂಡಲ ಪ್ರಧಾನ ಕಾರ್ಯದರ್ಶಿ ಮೊಸರಳ್ಳಿ ಅಣ್ಣಪ್ಪ, ಜನ್ನಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಘು ರಾವ್, ಪ್ರಧಾನ ಕಾರ್ಯದರ್ಶಿ ರವಿ ಹಾಗೂ  ಪ್ರಮುಖ ಕಾರ್ಯಕರ್ತರಾದ  ಆಶಾ ಪುಟ್ಟಸ್ವಾಮಿ, ಮೋಹನ್, ಧರ್ಮರಾಜ್ ಬೂತ್ ಅಧ್ಯಕ್ಷೆ ರೂಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾನೂನು ಉಲ್ಲಂಘಿಸಿ ಶಾಲಾ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನ ಮಾರಾಟ

ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ : ೧,೬೫೩ ರು. ಮೌಲ್ಯದ ತಂಬಾಕು ಉತ್ಪನ್ನ ವಶ 



    ಭದ್ರಾವತಿ : ಕಾನೂನು ಉಲ್ಲಂಘಿಸಿ ಶಾಲಾ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ನಗರದ ನ್ಯೂಟೌನ್ ಉಂಬ್ಳೆಬೈಲು ರಸ್ತೆಯ ಶಾಲೆಯೊಂದರ ಬಳಿ ಸುಮಾರು ೧೦೦ ಗಜ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಪೊಲೀಸ್ ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜುರವರ ನೇತೃತ್ವದಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಟಿ. ರಮೇಶ್ ಹಾಗು ಸಿಬ್ಬಂದಿ ದಾಳಿ ನಡೆಸಿ ಸುಮಾರು ೧,೬೫೩ ರು. ಮೌಲ್ಯದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಮೋಹನ್

ಭದ್ರಾವತಿ ಹಳೇನಗರದ ವೀರಶೈವ ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ `ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೇಸನ್ ಮತ್ತು ವೆಲ್ಡಿಂಗ್ ಕಿಟ್‌ಗಳ ವಿತರಣೆ ಮತ್ತು ಅರಿವು ಕಾರ್ಯಕ್ರಮ' ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಇನ್ನೂ ಹೆಚ್ಚು ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಬೇಕೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮನವಿ ಮಾಡಿದರು. 
    ಅವರು ಹಳೇನಗರದ ವೀರಶೈವ ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ `ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೇಸನ್ ಮತ್ತು ವೆಲ್ಡಿಂಗ್ ಕಿಟ್‌ಗಳ ವಿತರಣೆ ಮತ್ತು ಅರಿವು ಕಾರ್ಯಕ್ರಮ'ದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಸಮಾಜದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿ ಹೆಚ್ಚಿದ್ದಾಗಿದೆ. ಶಾಸಕರಿಗೆ ಮತ್ತು ನಮ್ಮ ಕುಟುಂಬದವರಿಗೆ ಅವರ ಶ್ರಮದ ಅರಿವಿದೆ. ಈ ಹಿನ್ನಲೆಯಲ್ಲಿ ಪ್ರಾಮಾಣಿಕವಾಗಿ ಅವರ ನೋವು-ನಲಿವುಗಳಿಗೆ ಸ್ಪಂದಿಸುತ್ತಿದ್ದೇವೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುಂದಾಗಿದ್ದೇವೆ. ಇದಕ್ಕೆ ಪೂರಕವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸಹ ಒಗ್ಗಟ್ಟಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕೆಂದರು. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಶಿಮುಲ್ ನಿರ್ದೇಶಕ ಎಸ್. ಕುಮಾರ್, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಸೂಡ ಸದಸ್ಯ ಎಚ್. ರವಿಕುಮಾರ್, ಕಾರ್ಮಿಕ ಮುಖಂಡ ವಿ. ವಿನೋದ್, ಸಿ.ಎಂ ಖಾದರ್ ಸೇರಿದಂತೆ ಇನ್ನಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. 
    ಬಗರ್ ಹುಕುಂ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಉದ್ಯಮಿ ಬಿ.ಕೆ ಜಗನ್ನಾಥ, ನಗರಸಭೆ ಸದಸ್ಯರಾದ ಬಸವರಾಜ ಬಿ. ಆನೆಕೊಪ್ಪ, ಬಷೀರ್ ಅಹಮದ್, ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ, ಕೆ. ಸುದೀಪ್ ಕುಮಾರ್, ಸೈಯದ್ ರಿಯಾಜ್, ಸರ್ವಮಂಗಳ ಭೈರಪ್ಪ, ಕಾರ್ಮಿಕ ಮುಖಂಡರಾದ ಚಂದ್ರಶೇಖರ್, ಸುಂದರ್ ಬಾಬು, ಅಭಿಲಾಷ್, ಬಗರ್ ಹುಕುಂ ತಾಲೂಕು ಸಮಿತಿ ಸದಸ್ಯೆ ಎಂ.ಎಸ್ ಸುಧಾಮಣಿ, ಕಸಾಪ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷೆ ಡಾ. ವಿಜಯದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ಭದ್ರಾವತಿ ಹಳೇನಗರದ ವೀರಶೈವ ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ `ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೇಸನ್ ಮತ್ತು ವೆಲ್ಡಿಂಗ್ ಕಿಟ್‌ಗಳ ವಿತರಣೆ ಮತ್ತು ಅರಿವು ಕಾರ್ಯಕ್ರಮ'ದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕಿಟ್‌ಗಳನ್ನು ವಿತರಿಸಿದರು. 

Wednesday, October 23, 2024

ಒಂದೇ ದಿನ ಓ.ಸಿ ಮಟ್ಕಾ ೩ ಪ್ರತ್ಯೇಕ ಪ್ರಕರಣ ದಾಖಲು

    ಭದ್ರಾವತಿ : ನಗರದ ವಿವಿಧ ಠಾಣೆಗಳಲ್ಲಿ ಒಂದೇ ದಿನ ಓ.ಸಿ ಮಟ್ಕಾ ಜೂಜಾಟ ೩ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ನಗರದ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ. 
    ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿ ಹಣಮಂತ ಅಮಾತಿ ಅ.೨೧ರ ಮಧ್ಯಾಹ್ನ ೩.೩೦ರ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಹೊಸಮನೆ ಮುಖ್ಯ ರಸ್ತೆಯಲ್ಲಿರುವ ಸಂತೆ ಮೈದಾನದಲ್ಲಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯೋರ್ವ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
    ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಗುಳ್ಯಪ್ಪ ಅ.೨೧ರ ರಾತ್ರಿ ೯ ಗಂಟೆ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ರಣಧೀರ ಪಡೆ ಸರ್ಕಲ್ ಹತ್ತಿರದ ಬಸ್ ನಿಲ್ದಾಣದ ಬಳಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯೋರ್ವ ಓ.ಸಿ ಮಟ್ಕಾ ಜೂಜಾಟದಲಲಿ ತೊಡಗಿರುವುದು ಕಂಡು ಬಂದಿದೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
    ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಜಿ.ಎಂ ಈರಯ್ಯ ಅ.೨೧ರ ಸಂಜೆ ೪ ಗಂಟೆ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವೀರಾಪುರ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಭವನ್ ಹೋಟೆಲ್ ಹತ್ತಿರ ಪರಿಶೀಲನೆ ನಡೆಸಿದಾಗ ಓರ್ವ ವ್ಯಕ್ತಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ಜಾಗೃತಿ, ಅರಿವು ಅತ್ಯಗತ್ಯ : ವೀರಬಸಪ್ಪ ಎಲ್. ಕುಶಲಾಪುರ

ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬಿ.ಇಡಿ ಕಾಲೇಜ್ ಮತ್ತು ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರ ಸಹಯೋಗದಲ್ಲಿ  `ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-೨೦೨೪' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ: ಪ್ರಸ್ತುತ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮತ್ತು ಅರಿವು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರ ಸಹಕಾರ ಹೆಚ್ಚಿನದಾಗಿದೆ ಎಂದು ಲೋಕಾಯುಕ್ತ ಜಿಲ್ಲಾ ಪೊಲೀಸ್ ನಿರೀಕ್ಷಕ ವೀರಬಸಪ್ಪ ಎಲ್. ಕುಶಲಾಪುರ ಹೇಳಿದರು. 
     ಅವರು ಬುಧವಾರ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬಿ.ಇಡಿ ಕಾಲೇಜ್ ಮತ್ತು ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ `ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-೨೦೨೪' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
     ಸಮಾಜದ ಮುಂದಿನ ಪೀಳಿಗೆಯ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮತ್ತು ಅರಿವಿನ ಜೊತೆಗೆ ಹಗರಣಗಳ ದೂರು ನೀಡುವ ಪ್ರಕ್ರಿಯೆಗಳು ಮತ್ತು ನ್ಯಾಯದ ಪಾರದರ್ಶಕತೆ ಕುರಿತು ತಿಳಿದು ಕೊಳ್ಳಬೇಕೆಂದರು
ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ ಡಾ. ಎಸ್. ಪಿ ರಾಕೇಶ್ ಅಧ್ಯಕ್ಷತೆ ವಹಿಸಿದ್ದರು.  ಪ್ರಥಮ ಬಿ.ಇಡಿ ಪ್ರಶಿಕ್ಷಣಾರ್ಥಿ ಸಂಭ್ರಮ ಪ್ರಾರ್ಥಿಸಿದರು. ಉಪನ್ಯಾಸಕಿ ಎಚ್.ವಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ ಸ್ವಾಗತಿಸಿ ವಂದಿಸಿದರು. 
         ಬಿ. ಇಡಿ ಕಾಲೇಜಿನ ಉಪನ್ಯಾಸಕ .ವರದರಾಜ ಸೇರಿದಂತೆ ಉಪನ್ಯಾಸಕ ವೃಂದ, ಬಿ. ಇಡಿ ಪ್ರಶಿಕ್ಷಣಾರ್ಥಿಗಳು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿದ್ದರು.  

ಕಾಗೇಕೊಡಮಗ್ಗಿ ನೀರು ಬಳಕೆದಾರರ ಸಹಕಾರ ಸಂಘಕ್ಕೆ ರಾಷ್ಟ್ರೀಯ ಜಲ ಪುರಸ್ಕಾರ

ಭದ್ರಾವತಿ ತಾಲೂಕಿನ ಕಾಗೇಕೊಡಮಗ್ಗಿ ನೀರು ಬಳಕೆದಾರರ ಸಹಕಾರ ಸಂಘ ಈ ಬಾರಿ ೨ನೇ ಸ್ಥಾನದೊಂದಿಗೆ ೨೦೨೩ನೇ ಸಾಲಿನ ರಾಷ್ಟ್ರೀಯ ಜಲ ಪುರಸ್ಕಾರಕ್ಕೆ ಪಾತ್ರವಾಗಿದ್ದು, ಸಂಘದ ಅಧ್ಯಕ್ಷ ಸೈಯದ್ ಅಬಿದ್ ಮತ್ತು ಕಾರ್ಯದರ್ಶಿ ರವಿಕುಮಾರ್ ಪ್ರಶಸ್ತಿ ಸ್ವೀಕರಿಸಿರುವುದು. 
    ಭದ್ರಾವತಿ: ತಾಲೂಕಿನ ಕಾಗೇಕೊಡಮಗ್ಗಿ ನೀರು ಬಳಕೆದಾರರ ಸಹಕಾರ ಸಂಘ ಈ ಬಾರಿ ೨ನೇ ಸ್ಥಾನದೊಂದಿಗೆ ೨೦೨೩ನೇ ಸಾಲಿನ ರಾಷ್ಟ್ರೀಯ ಜಲ ಪುರಸ್ಕಾರಕ್ಕೆ ಪಾತ್ರವಾಗಿದ್ದು, ಈ ಹಿನ್ನಲೆಯಲ್ಲಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. 
    ನೀರು ಬಳಕೆದಾರರ ಸಹಕಾರ ಸಂಘ ಉತ್ತಮ ಕಾರ್ಯನಿರ್ವಹಣೆಯೊಂದಿಗೆ ನೀರು ಸಂರಕ್ಷಣೆ ಕುರಿತು ರೈತರು, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ ಮಾದರಿಯಾಗಿದೆ. ಸಂಘದ ಕಾರ್ಯ ವೈಖರಿ ಕುರಿತು ಹಲವು ಬಾರಿ ಪ್ರಶಂಸೆಗಳು ವ್ಯಕ್ತವಾಗಿದ್ದವು. ಇದೀಗ ೨ನೇ ಸ್ಥಾನದೊಂದಿಗೆ ಪುರಸ್ಕಾರಕ್ಕೆ ಪಾತ್ರವಾಗಿದೆ. 


    ರಾಷ್ಟ್ರಪತಿಯವರಿಂದ ಸಂಘದ ಅಧ್ಯಕ್ಷ ಸೈಯದ್ ಅಬಿದ್ ಹಾಗು ಕಾರ್ಯದರ್ಶಿ ರವಿಕುಮಾರ್ ಪ್ರಶಸ್ತಿ ಸ್ವೀಕರಿಸಿದ್ದಾರೆ. ಬುಧವಾರ ಪ್ರಶಸ್ತಿಯೊಂದಿಗೆ ನಗರಕ್ಕೆ ಆಗಮಿಸಿದ ಇಬ್ಬರನ್ನು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಗ್ರಾಮಸ್ಥರು, ಸ್ಥಳೀಯ ಮುಖಂಡರು ಸನ್ಮಾನಿಸಿ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.  ಫೀರ್ ಷರೀಫ್, ಅಯುಬ್ ಖಾನ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು. 

ಕಮೀಷನ್, ಪಾರ್ಟ್ ಟೈಮ್ ಕೆಲಸ ನಂಬಿ ೨೧.೯೦ ಲಕ್ಷ ಕಳೆದುಕೊಂಡ ವ್ಯಕ್ತಿ

    ಭದ್ರಾವತಿ : ಟೆಲಿಗ್ರಾಂ ಆಪ್ ಮೂಲಕ ವ್ಯಕ್ತಿಯೊಬ್ಬರಿಗೆ ತೊಡಗಿಸಿದ ಬಂಡವಾಳಕ್ಕೆ ಶೇ.೩೦ ಕಮಿಷನ್ ಹಾಗು ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ಸುಮಾರು ೨೧.೯೦ ಲಕ್ಷಾಂತರ ರು. ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
    ಹಳೇನಗರ ಪೊಲೀಸ್ ಠಾಣೆಯಲ್ಲಿ ಅ.೧೫ರಂದು ಪ್ರಕರಣ ದಾಖಲಾಗಿದೆ.  ಮುಸ್ಲಿಂ ಸಮುದಾಯಕ್ಕೆ ಸೇರಿರುವ, ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಯೊಬ್ಬರು ಐಸಿಐಸಿಐ ಬ್ಯಾಂಕ್‌ನಲ್ಲಿ ಹೊಂದಿರುವ ತಮ್ಮ ಸ್ವಂತ ಬ್ಯಾಂಕ್ ಖಾತೆ ಮತ್ತು ಇದೆ ಬ್ಯಾಂಕ್‌ನಲ್ಲಿ ಮಗಳ ಹೆಸರಿನಲ್ಲಿ ಹೊಂದಿರುವ ಜಂಟಿ ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡಿದ್ದಾರೆ. 
    ಪ್ರಕರಣದ ವಿವರ: 
    ಆ.೨೮ರಂದು ವಾಟ್ಸಪ್‌ನಲ್ಲಿ ಸಾರಿಕಾ ಎಂಬ ಹೆಸರಿನಿಂದ ವ್ಯಕ್ತಿಯೊಬ್ಬರಿಗೆ ಮೆಸೇಜ್ ಬಂದಿದ್ದು, `ನೀವು ಟೆಲಿಗ್ರಾಂ ಆಪ್‌ನಲ್ಲಿನ ಟ್ರಾವೆಲ್ಸ್ ಪಾರ್ಟರ್ನರ್ ಇಂಡಿಯಾ ೭೨೯೨ ಮತ್ತು ೯೧ ಕ್ಲಬ್ ಸರ್ವಿಸ್ ೧೬೯ ಎಂಬ ಗ್ರೂಪ್ ಜಾಯಿನ್ ಆಗಿ ಹಾಗು ನೀವು ಟ್ರಾವೆಲ್ಸ್ ಗ್ರೂಪ್ ಬಂಡವಾಳ ತೊಡಗಿಸಿದರೆ ನಿಮ್ಮ ಬಂಡವಾಳಕ್ಕೆ ಶೇ.೩೦ರಷ್ಟು ಕಮಿಷನ್ ಮತ್ತು ನಿಮಗೆ ಪಾರ್ಟ್ ಟೈಮ್ ಕೆಲಸ' ಎಂದು ಮೆಸೇಜ್‌ನಲ್ಲಿ ತಿಳಿಸಲಾಗಿದೆ. 
    ಈ ಟೆಲಿಗ್ರಾಂ ಗ್ರೂಪ್‌ನಲ್ಲಿ ೪೭ ಜನರಿದ್ದು, ಇದರಲ್ಲಿ ಸಾರಿಕಾ ಏಜೆಂಟ್ ಮತ್ತು ದಿವ್ಯ ದರ್ಶನಿ ಎಂಬುವವರು ಮತ್ತು ಗ್ರೂಪ್‌ನ ಆಡ್ಮಿನ್ ಅಮ್ರಿತ್ ಪಾಟೀಲ್ ಎಂಬುವವರು ಟೆಲಿಗ್ರಾಂನಲ್ಲಿ ಮೆಸೇಜ್ ಮಾಡಿ ನೀವು ಬಂಡವಾಳ ತೊಡಗಿಸಿ ಎಂದು ತಿಳಿಸಿದ್ದಾರೆ. 
ಕಮಿಷನ್ ಹಾಗು ಪಾರ್ಟ್ ಟೈಮ್ ಕೆಲಸದ ಆಸೆಗೆ ಬಿದ್ದು,  ತಮ್ಮ ಸ್ವಂತ ಬ್ಯಾಂಕ್ ಖಾತೆ ಮತ್ತು ಇದೆ ಮಗಳ ಹೆಸರಿನಲ್ಲಿ ಹೊಂದಿರುವ ಜಂಟಿ ಬ್ಯಾಂಕ್ ಖಾತೆಯಲ್ಲಿನ ಹಣ ಪೋನ್ ಪೇ, ನೆಟ್ ಬ್ಯಾಂಕ್ ಹಾಗು ಚೆಕ್ ಮೂಲಕ ಒಟ್ಟು ೨೧,೯೦,೫೯೫ ರು. ವರ್ಗಾಯಿಸಿ ವಂಚನೆಗೆ ಒಳಗಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹಳೇನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Tuesday, October 22, 2024

ಕಾಡುಕೋಣ ಹತ್ಯೆ ಪ್ರಕರಣ : ತಲೆಮರೆಸಿಕೊಂಡಿದ್ದ ಇಬ್ಬರ ಸೆರೆ

ಭದ್ರಾವತಿ ಅರಣ್ಯ ವಿಭಾಗದ ತಂಡ ಯಶಸ್ವಿ ಕಾರ್ಯಾಚರಣೆ 

ಕಾಡುಕೋಣ ಹತ್ಯೆ ಮಾಡಿ ಹೊಲದಲ್ಲಿ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಭದ್ರಾವತಿ ಅರಣ್ಯ ವಿಭಾಗದ ತಂಡ ಯಶಸ್ವಿಯಾಗಿದೆ. 
    ಭದ್ರಾವತಿ : ಕಾಡುಕೋಣ ಹತ್ಯೆ ಮಾಡಿ ಹೊಲದಲ್ಲಿ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಇಲ್ಲಿನ ಅರಣ್ಯ ವಿಭಾಗದ ತಂಡ ಯಶಸ್ವಿಯಾಗಿದೆ. 
    ಕಾಡುಕೋಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಶ್ರೀನಿವಾಸಪುರ ನಿವಾಸಿ ಶಿವರಾಮ(೬೫) ಮತ್ತು ಉಕ್ಕುಂದ ಗ್ರಾಮದ ನಿವಾಸಿ ರಂಗಸ್ವಾಮಿ(೩೮) ಸೇರಿದಂತೆ ೩ ಜನರ ವಿರುದ್ಧ ಅ.೧೭ರಂದು ಪ್ರಕರಣ ದಾಖಲಾಗಿತ್ತು. ಈ ಪೈಕಿ ಶಿವರಾಮ ಮತ್ತು ರಂಗಸ್ವಾಮಿ ತಲೆ ಮರೆಸಿಕೊಂಡಿದ್ದರು. 
    ಇವರ ಪತ್ತೆಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ ರತ್ನಪ್ರಭಾ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಬಿ.ಎಚ್ ದುಗ್ಗಪ್ಪರವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಉಪವಲಯ ಅರಣ್ಯ ಅಧಿಕಾರಿಗಳಾದ, ಪಿ. ಅಣ್ಣ ನಾಯ್ಕ್, ಕೃಷ್ಣಾರೆಡ್ಡಿ, ಶೇಖರ್ ಚೌಗುಲೆ, ಹನುಮಂತ ನಾಯ್ಕ್, ಕೋರ್ಟ್ ಅಂಡ್ ಸರ್ವೆ ಸಿಬ್ಬಂದಿ ಹನುಮಂತರಾಯ ಗಸ್ತು ಅರಣ್ಯ ಪಾಲಕರಾದ ಎಸ್. ಕಾಂತೇಶ್ ನಾಯ್ಕ್, ವಿನೋದ್ ಬಿರಾದರ್, ಬಾಲರಾಜ್, ಪಿ. ನಾಗೇಂದ್ರ, ಸಿ. ಚಂದ್ರಶೇಖರ್, ಪ್ರಥಮ ದರ್ಜೆ ಸಹಾಯಕ ಎಸ್. ಎಲ್ ಸಂತೋಷ್ ಕುಮಾರ್ ಹಾಗೂ ಅರಣ್ಯ ವೀಕ್ಷಕರು ತಂಡದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  ತಂಡ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಅರಣ್ಯ ವಿಭಾಗದ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

೪೩ನೇ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಡಿ. ನಾಗರಾಜ್ ಆಯ್ಕೆ.

ಕರ್ನಾಟಕ ರಾಜ್ಯ ಯೋಗ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಾ. ವಿಷ್ಣುವರ್ಧನ್ ರಸ್ತೆಯ, ಓಂಕಾರಾಶ್ರಮದ ಸತ್ಸಂಗ ಭವನದಲ್ಲಿ ನಡೆದ ೪೩ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭದ್ರಾವತಿ ನಗರದ ವಿವೇಕಾನಂದ ಯೋಗ ಕೇಂದ್ರದ ಡಿ. ನಾಗರಾಜ್ ೬೦ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡು ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ಕರ್ನಾಟಕ ರಾಜ್ಯ ಯೋಗ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಾ. ವಿಷ್ಣುವರ್ಧನ್ ರಸ್ತೆಯ, ಓಂಕಾರಾಶ್ರಮದ ಸತ್ಸಂಗ ಭವನದಲ್ಲಿ ನಡೆದ ೪೩ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಗರದ ವಿವೇಕಾನಂದ ಯೋಗ ಕೇಂದ್ರದ ಡಿ. ನಾಗರಾಜ್ ೬೦ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದಾರೆ.  
    ಡಿ.೨೮, ೨೯ ಮತ್ತು ೩೦ರಂದು ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆಯಲ್ಲಿರುವ ೪೩ನೇ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆ ಕಾರ್ಯದರ್ಶಿ ಡಿ.ಪುಟ್ಟೇಗೌಡರವರು ನಾಗರಾಜ್‌ರವರಿಗೆ ಬೆಳ್ಳಿ ಪದಕ ಹಾಗು ನೆನಪಿನ ಕಾಣಿಕೆ ನೀಡಿ ಗೌರವಿಸಿದರು.  ಕರ್ನಾಟಕ ರಾಜ್ಯ ಯೋಗ ಸಂಸ್ಥೆ ಖಜಾಂಚಿ ಎಲ್.ಎಸ್ ಈಶ್ವರ್ ಹಾಗೂ ಕಾರ್ಯದರ್ಶಿ ಕೆ. ಗೋವಿಂದ ರಾವ್ ಉಪಸ್ಥಿತರಿದ್ದರು. ನಾಗರಾಜ್‌ರವರಿಗೆ ನಗರದ ಯೋಗಪಟುಗಳು, ಕ್ರೀಡಾಭಿಮಾನಿಗಳು ಹಾಗು ಗಣ್ಯರು ಅಭಿನಂದಿಸಿದ್ದಾರೆ. 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಬಹುತೇಕ ಕ್ಷೇತ್ರಗಳಿಂದ ಅವಿರೋಧ ಆಯ್ಕೆ

ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ನಡುವೆ ಪೈಪೋಟಿ : ಅ.೨೮ರಂದು ಮತದಾನ 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಛೇರಿ. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಬಹುತೇಕ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಕೆಲವು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
    ಕೃಷಿ ಇಲಾಖೆ ಮತಕ್ಷೇತ್ರದಿಂದ ದೇವೇಂದ್ರಪ್ಪ ಕಡ್ಲೇರ, ಪಶುಪಾಲನಾ ಮತ್ತು ವೈದ್ಯ ಸೇವಾ ಇಲಾಖೆ ಮತಕ್ಷೇತ್ರದಿಂದ ಡಾ.ಸಿ.ಬಿ ರಮೇಶ್, ಕಂದಾಯ ಇಲಾಖೆ ಮತಕ್ಷೇತ್ರದಿಂದ ಕೆ.ಆರ್ ಪ್ರಶಾಂತ್ ಮತ್ತು ರವಿಕುಮಾರ್, ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಹಾಗು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮತಕ್ಷೇತ್ರದಿಂದ ಎ. ಲಲಿತಾ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಪಿಎಂಜಿಎಸ್.ವೈ ಯೋಜನೆ ಹಾಗು ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲೀಕರಣ ಇಲಾಖೆ ಮತಕ್ಷೇತ್ರದಿಂದ ಜಾನ್ ನಿರ್ಮಲ್ ಮತ್ತು ಬಿ.ಎಚ್ ಕೃಷ್ಣಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಕಛೇರಿ ಮತಕ್ಷೇತ್ರದಿಂದ ಸಿ.ಎ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗು ಅಲ್ಪಸಂಖ್ಯಾತರ ಇಲಾಖೆ ಮತಕ್ಷೇತ್ರದಿಂದ ಆರ್. ಅಶೋಕ್‌ರಾವ್, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಮತಕ್ಷೇತ್ರದಿಂದ ಎಚ್.ಎಸ್ ರಾಮಕೃಷ್ಣ, ಖಜಾನೆ ಇಲಾಖೆ ಮತಕ್ಷೇತ್ರದಿಂದ ಎ.ಸಿ ಮಮತ, ನ್ಯಾಯಾಂಗ ಇಲಾಖೆಯಿಂದ ಕೆ. ಮುರಳಿಧರ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಜಿ. ಲಕ್ಷ್ಮೀಕಾಂತ ಮತ್ತು ಸಿ. ವೆಂಕಟೇಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತಕ್ಷೇತ್ರದಿಂದ ಡಿ. ನಾಗರತ್ನ, ಮೀನುಗಾರಿಕೆ, ತೂಕ ಮತ್ತು ಅಳತೆ ಇಲಾಖೆ ಹಾಗು ಸಾರಿಗೆ ಇಲಾಖೆ ಮತಕ್ಷೇತ್ರದಿಂದ ಬಿ.ಕೆ ನಾರಾಯಣ ಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಮತಕ್ಷೇತ್ರದಿಂದ ಆರ್. ಜನಾರ್ಧನ, ಅಬಕಾರಿ ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಮತಕ್ಷೇತ್ರದಿಂದ ಸುನಿಲ್ ಕಲ್ಲೂರ, ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಹಾಗು ಸಾಂಖ್ಯಿಕ ಇಲಾಖೆ ಮತಕ್ಷೇತ್ರದಿಂದ ಎಂ. ಮಾಲತಿ ಹಾಗು ಗ್ರಂಥಾಲಯ ಇಲಾಖೆ ಹಾಗು ಕಾರ್ಮಿಕ ಇಲಾಖೆ ಮತಕ್ಷೇತ್ರದಿಂದ ರಾಜ್‌ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಉಳಿದಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತಕ್ಷೇತ್ರದ ಒಟ್ಟು ೩ ಸ್ಥಾನಗಳಿಗೆ ಜೇನಮ್ಮ, ಎಸ್. ನಾಗರತ್ನಮ್ಮ, ಯು. ಮಹಾದೇವಪ್ಪ, ಮುಕ್ತಿಯಾರ್ ಅಹಮದ್, ಎಸ್.ಕೆ ಮೋಹನ್, ರಮೇಶ್ ನಾಯ್ಕ, ಎ. ರಂಗನಾಥ, ವೈ.ಎನ್ ಶಶಿಧರಗೌಡ ಮತ್ತು ಎಚ್.ಎಸ್ ಸುಮಾ, ಸರ್ಕಾರಿ ಪ್ರೌಢಶಾಲೆ ಮತ ಕ್ಷೇತ್ರದ ೧ ಸ್ಥಾನಕ್ಕೆ ವಿ. ಮೋತಿನಾಯ್ಕ, ಜಿ. ಶಿವಾನಾಯ್ಕ ಮತ್ತು ಬಿ. ಸಿದ್ದಬಸಪ್ಪ, ಸರ್ಕಾರಿ ಪದವಿಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳು ಮತಕ್ಷೇತ್ರದ ೧ ಸ್ಥಾನಕ್ಕೆ ಬಿ. ಚನ್ನಯ್ಯ, ಎಸ್. ಚಂದ್ರಶೇಖರಪ್ಪ, ಎಂ.ಆರ್ ತಿಪ್ಪೇಸ್ವಾಮಿ ಮತ್ತು ಎಂ. ವೆಂಕಟೇಶ್, ಅರಣ್ಯ ಇಲಾಖೆ ಮತಕ್ಷೇತ್ರದ ೧ ಸ್ಥಾನ ಸ್ಥಾನಕ್ಕೆ ಕಾಂತೇಶ್ ನಾಯ್ಕ ಮತ್ತು ಡಿ. ವೆಂಕಟೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದ ಒಟ್ಟು ೪ ಸ್ಥಾನಗಳಿಗೆ ಉಮೇಶಪ್ಪ, ಡಾ.ಎಚ್.ಎಸ್ ಗಿರೀಶ್, ಎಚ್.ಎಂ ನಾಗರಾಜಪ್ಪ, ಪದ್ಮರಾಜ ಶೆಟ್ಟಿ, ಕೆ. ರಮೇಶ್, ಆರ್. ರೀನಾ ಮತ್ತು ಶ್ರೀನಿವಾಸ್ ಎಚ್. ಬಾಗೋಡಿ, ಎಂ.ಎಚ್ ಹರೀಶ್, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗು ಸಬಲೀಕರಣ ಮತ್ತು ಮುದ್ರಾಂಕಗಳ ಇಲಾಖೆ  ಮತಕ್ಷೇತ್ರದ ೧ ಸ್ಥಾನಕ್ಕೆ ಸಿ.ಎನ್ ಮಮತ, ಎಚ್.ಎಲ್ ಮಂಜಾನಾಯ್ಕ ಮತ್ತು ಎನ್. ವಿನಯ್, ತಾಂತ್ರಿಕ ಶಿಕ್ಷಣ ಇಲಾಖೆ(ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಕಿರಿಯ ತಾಂತ್ರಿಕ ಶಾಲೆ) ಮತಕ್ಷೇತ್ರದ ೧ ಸ್ಥಾನಕ್ಕೆ ತಮ್ಮಣ್ಣ, ಟಿ. ತಿಮ್ಮಪ್ಪ ಮತ್ತು ಎಂ.ಎನ್ ಬಸವರಾಜು ಹಾಗೂ ಉದ್ಯೋಗ ಮತ್ತು ತರಬೇತಿ ಇಲಾಖೆ ಮತಕ್ಷೇತ್ರದ ೧ ಸ್ಥಾನಕ್ಕೆ ಎಸ್.ಎನ್ ಚಂದ್ರಶೇಖರ್ ಮತ್ತು ಎಂ. ಪುಟ್ಟಲಿಂಗಮೂರ್ತಿ ಸ್ಪರ್ಧಿಸಿದ್ದಾರೆ. ಅ.೨೮ರಂದು ಮತದಾನ ನಡೆಯಲಿದ್ದು, ಇದೆ ದಿನ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾಧಿಕಾರಿಯಾಗಿರುವ ನಿವೃತ್ತ ಉಪತಹಸೀಲ್ದಾರ್ ಎಸ್. ಮೈಲಾರಯ್ಯ ತಿಳಿಸಿದ್ದಾರೆ.