ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಅ.೨ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಗುತ್ತಿದೆ.
ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿಜೀಯವರ ಭಾವಚಿತ್ರ ಪುಷ್ಪನಮನ, ನಂತರ ಧರ್ಮ ಗ್ರಂಥಗಳಾದ ಭಗವದ್ಗೀತೆ, ಕುರಾನ್ ಮತ್ತು ಬೈಬಲ್ ಸಂದೇಶ ವಾಚನ ನಡೆಯಲಿದೆ. ಅಲ್ಲದೆ ದೇಶ ಭಕ್ತಿ ಗೀತೆ ಗಾಯನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕ ಇಲಾಖೆ ವ್ಯವಸ್ಥಾಪಕ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ.
No comments:
Post a Comment