ಭದ್ರಾವತಿ: ತಾಲೂಕಿನ ಸಿರಿಯೂರು ವೀರಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಲಯನ್ಸ್ ಕ್ಲಬ್ ಶುಗರ್ ಟೌನ್ ಹಾಗು ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಅ.೨೦ರಂದು ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಸಿರಿಯೂರು ವೀರಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಶಿಬಿರ ನಡೆಯಲಿದ್ದು, ಹೃದಯ ರೋಗ, ಸ್ತ್ರೀರೋಗ, ಕಿವಿ, ಮೂಗು, ಕಣ್ಣಿನ ತಜ್ಞರು, ಕೀಲು ಮತ್ತು ಮೂಳೆ ತಜ್ಞರು, ಮಕ್ಕಳ ತಜ್ಞರು, ಜನರಲ್ ಮೆಡಿಸನ್, ಜನರಲ್ ಸರ್ಜರಿ, ದಂತ ತಪಾಸಣೆ ಜೊತೆ ಬಿ.ಪಿ, ಡಯಾಬಿಟಿಸ್, ಇ.ಸಿ.ಜಿ ಆರೋಗ್ಯ ತಪಾಸಣೆ ಮಾಡಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಉಮೇಶ್ ಮೊ:೯೪೪೮೨೧೮೭೦೬ ಅಥವಾ ಜೀವನ್ ಮೊ: ೭೮೪೮೮೫೮೫೪೬ ಅಥವಾ ದರ್ಶನ್ ಮೊ:೭೮೯೨೯೫೨೧೭೫ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment