Tuesday, October 1, 2024

ಹಿರಿಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ : ಬಿ. ಸಿದ್ದಬಸಪ್ಪ

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಹಿರಿಯ ನಾಗರಿಕರ  ದಿನಾಚರಣೆ


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಬಿ. ಇಡಿ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಿವಮೂರ್ತಿ ಹಾಗೂ ನಿವೃತ್ತ ಅರಣ್ಯ ಅಧಿಕಾರಿ ಕೆಂಪೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ: ಹಿರಿಯರು ಮನೆಗೆ ಆದರ್ಶಪ್ರಾಯ, ಅವರ ಮಾರ್ಗದರ್ಶನ ನಮ್ಮೆಲ್ಲರಿಗೂ ಅತ್ಯಗತ್ಯ ಆದರಿಂದ ಹಿರಿಯ ನಾಗರಿಕರನ್ನು ಮನೆಯ ಹಾಗೂ ಸಮಾಜದಲ್ಲಿರುವ ಹಿರಿಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು. 
  ಅವರು ಮಂಗಳವಾರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಬಿ. ಇಡಿ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. 
    ನಿವೃತ್ತ ಶಿಕ್ಷಕ ಶಿವಮೂರ್ತಿ ಹಾಗೂ ನಿವೃತ್ತ ಅರಣ್ಯ ಅಧಿಕಾರಿ ಕೆಂಪೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಸನ್ಮಾನಿತರು ಮಾತನಾಡಿ, ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಈ ಸಂಪ್ರದಾಯ ಸಮಾಜಕ್ಕೆ ಮಾದರಿ ಮತ್ತು ಆದರ್ಶಪ್ರಾಯ ಎಂದರು. 
    ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಹಾಗೂ ಬಿ. ಇಡಿ  ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಪಿ ರಾಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗಗೌಡ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬಿಇಡಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

2 comments:

  1. ಸರ್ಕಾರಿ ನೌಕರರ ಸಂಘ ಭದ್ರಾವತಿ ಶಾಖೆಯ ಅಧ್ಯಕ್ಷರಾದ ಶ್ರೀ ಸಿದ್ದಬಸಪ್ಪ ಇವರ ಹಾಗೂ ವಿದ್ಯಾಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಹಿರಿಯ ನಾಗರೀಕರಿಗೆ ಗೌರವವನ್ನು ಸಲ್ಲಿಸುವುದು ಉತ್ತಮ ಸಂಪ್ರದಾಯ ಇಂತಹ ಸಂಪ್ರದಾಯವನ್ನು ರೂಡಿಸಿಕೊಂಡು ಸಂಘಟನೆಗೆ ಹಾಗೂ ವಿದ್ಯಾ ಸಂಸ್ಥೆಗೆ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದರೆ ಅತಿಶಯೋಕ್ತಿಯಾಗಲಾರದು ಈ ಕಾರ್ಯವನ್ನು ನಿರ್ವಹಿಸಲು ಕೈಜೋಡಿಸಿದ ವಿದ್ಯಾ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಹಾಗೂ ಅಧ್ಯಕ್ಷರಿಗೆ ನಮ್ಮ ನಮನಗಳು ಪ್ರೀತಿ ಯೊಂದಿಗೆ ಎಂ.ಜಿ.ರಾಜಣ್ಣ ಖಜಾನೆ ಇಲಾಖೆ ನೌಕರರು (ನಿವೃತ್ತ ) ಹೊಸ ಮನೆ ಭದ್ರಾವತಿ.

    ReplyDelete