ಭದ್ರಾವತಿ: ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ನ.೨ರಂದು ನಡೆಯಲಿದೆ.
ಕಳೆದ ವರ್ಷ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮೂಲಕ ಸಮಿತಿ ವತಿಯಿಂದ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ವಿನೂತನ ಪ್ರಯತ್ನ ಕೈಗೊಳ್ಳಲಾಗಿತ್ತು. ವೇದಿಕೆಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಚಿತ್ರಣವನ್ನು ತೆರೆದಿಡುವ ಮೂಲಕ ಗಮನ ಸೆಳೆಯಲಾಗಿತ್ತು. ಅಲ್ಲದೆ ಕಾರ್ಖಾನೆ ಉಳಿವಿಗಾಗಿ ಗಣಹೋಮ ಸಹ ಏರ್ಪಡಿಸಲಾಗಿತ್ತು. ಈ ಬಾರಿ ಸಹ ಅ.೨೯ರ ಮಂಗಳವಾರ ಗಣಹೋಮ ಹಮ್ಮಿಕೊಳ್ಳಲಾಗಿದೆ.
ನ.೨ರಂದು ಡೊಳ್ಳು ಕುಣಿತ, ತಮಟೆ ಹಾಗು ಮಂಗಳವಾದ್ಯಗಳೊಂದಿಗೆ ವಿಸರ್ಜನಾ ಪೂರ್ವ ಉತ್ಸವ ಮೆರವಣಿಗೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment