ದೇವಸ್ಥಾನದ ಮೇಲ್ಛಾವಣಿಯಲ್ಲಿ ಮಳೆ ನೀರು ಸೋರಿಕೆ : ಶೀಘ್ರ ಕಾಮಗಾರಿ ಆರಂಭ
ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಸಂರಕ್ಷಣಾ ವಿಭಾಗದ ಅಭಿಯಂತರ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭದ್ರಾವತಿ: ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಸಂರಕ್ಷಣಾ ವಿಭಾಗದ ಅಭಿಯಂತರ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಸ್ಥಾನದ ಮೇಲ್ಛಾವಣಿ ಶಿಥಿಲಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುವ ಕುರಿತು ದೇವಸ್ಥಾನದ ಅರ್ಚಕರು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಶಾಸಕರು ಪುರತತ್ವ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೀಘ್ರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದು, ಈ ಸಂಬಂಧ ಕಾಮಗಾರಿ ವೆಚ್ಚದ ಅಂದಾಜು ಪಟ್ಟಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಕಂದಾಯ ನಿರೀಕ್ಷಕ ಪ್ರಶಾಂತ್, ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸ್, ಮುಖಂಡರಾದ ನರಸಿಂಹಚಾರ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment