ಭದ್ರಾವತಿ : ಮನೆಯ ಮೇಲ್ಛಾವಣಿ ಶೀಟ್ ತೆಗೆದು ಒಳಗೆ ಪ್ರವೇಶಿಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಆನವೇರಿ ಗ್ರಾಮದಲ್ಲಿ ನಡೆದಿದೆ.
ಶೇಖರಪ್ಪ ಎಂಬುವರರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅ.೨೪ರಂದು ಮಧ್ಯಾಹ್ನ ೧.೩೦ರ ಸಮಯದಲ್ಲಿ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗಕ್ಕೆ ಹೋಗಿದ್ದು, ಸಂಜೆ ೬.೩೦ರ ಸಮಯಕ್ಕೆ ಮನೆಗೆ ಬಂದಾಗ ಕಳ್ಳತನ ಮಾಡಿರುವುದು ಕಂಡು ಬಂದಿದೆ. ಸುಮಾರು ೩೫ ಸಾವಿರ ರು. ಮೌಲ್ಯದ ಚಿನ್ನ ಹಾಗು ಸುಮಾರು ೧೫ ಸಾವಿರ ರು. ಮೌಲ್ಯದ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment