ಕರ್ನಾಟಕ ರಾಜ್ಯ ಯೋಗ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಾ. ವಿಷ್ಣುವರ್ಧನ್ ರಸ್ತೆಯ, ಓಂಕಾರಾಶ್ರಮದ ಸತ್ಸಂಗ ಭವನದಲ್ಲಿ ನಡೆದ ೪೩ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭದ್ರಾವತಿ ನಗರದ ವಿವೇಕಾನಂದ ಯೋಗ ಕೇಂದ್ರದ ಡಿ. ನಾಗರಾಜ್ ೬೦ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡು ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಭದ್ರಾವತಿ: ಕರ್ನಾಟಕ ರಾಜ್ಯ ಯೋಗ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಾ. ವಿಷ್ಣುವರ್ಧನ್ ರಸ್ತೆಯ, ಓಂಕಾರಾಶ್ರಮದ ಸತ್ಸಂಗ ಭವನದಲ್ಲಿ ನಡೆದ ೪೩ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಗರದ ವಿವೇಕಾನಂದ ಯೋಗ ಕೇಂದ್ರದ ಡಿ. ನಾಗರಾಜ್ ೬೦ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಡಿ.೨೮, ೨೯ ಮತ್ತು ೩೦ರಂದು ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆಯಲ್ಲಿರುವ ೪೩ನೇ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆ ಕಾರ್ಯದರ್ಶಿ ಡಿ.ಪುಟ್ಟೇಗೌಡರವರು ನಾಗರಾಜ್‌ರವರಿಗೆ ಬೆಳ್ಳಿ ಪದಕ ಹಾಗು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕರ್ನಾಟಕ ರಾಜ್ಯ ಯೋಗ ಸಂಸ್ಥೆ ಖಜಾಂಚಿ ಎಲ್.ಎಸ್ ಈಶ್ವರ್ ಹಾಗೂ ಕಾರ್ಯದರ್ಶಿ ಕೆ. ಗೋವಿಂದ ರಾವ್ ಉಪಸ್ಥಿತರಿದ್ದರು. ನಾಗರಾಜ್‌ರವರಿಗೆ ನಗರದ ಯೋಗಪಟುಗಳು, ಕ್ರೀಡಾಭಿಮಾನಿಗಳು ಹಾಗು ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment