ಎಸ್. ಮಂಜುನಾಥ್
ಭದ್ರಾವತಿ: ನಗರದ ಜನ್ನಾಪುರ ನಿವಾಸಿ, ಕೆಪಿಸಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್. ಮಂಜುನಾಥ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಒ.ಬಿ.ಸಿ, ಅಲ್ಪಸಂಖ್ಯಾತ ಉಸ್ತುವಾರಿ ಕೆ.ರಾಜು ಹಾಗು ಎ.ಐ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿಯರವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿರ್ದೇಶನದಂತೆ ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಧರ್ಮಸೇನ ಮಂಜುನಾಥ್‌ರವರನ್ನು ನೇಮಕಗೊಳಿಸಿದ್ದಾರೆ.
ಪರಿಶಿಷ್ಟಜಾತಿ ಸಮುದಾಯದ ಜನರನ್ನು ಗುರುತಿಸಿ ಅವರನ್ನು ವಿಶ್ವಾಸಕ್ಕೆ ಪಡೆದು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು, ಪಕ್ಷದ ಅಭ್ಯರ್ಥಿಪರ ವ್ಯಾಪಕ ಪ್ರಚಾರ ಕೈಗೊಂಡು ಗೆಲುವಿಗೆ ಶ್ರಮಿಸುವಂತೆ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ಮಂಜುನಾಥ್‌ರವರು ಕರ್ನಾಟಕ ರಾಜ್ಯ ಮಾದಿಗ ಸಮಾಜ(ಕೆಆರ್‌ಎಂಎಸ್)ದ ರಾಜ್ಯಾಧ್ಯಕ್ಷರಾಗಿದ್ದು, ಹಲವಾರು ವರ್ಷಗಳಿಂದ ಪರಿಶಿಷ್ಟರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಂಡಿದ್ದಾರೆ.
No comments:
Post a Comment