ಬಿ.ಪಿ ಪಾಲಾಕ್ಷಪ್ಪ
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಬಿ.ಪಿ ಪಾಲಾಕ್ಷಪ್ಪ(೭೮) ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ದಾವಣಗೆರೆ ಗ್ರಾಸ್ ಹೌಸ್ ರುದ್ರಭೂಮಿಯಲ್ಲಿ ಅ.೧೫ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ನೆರವೇರಲಿದೆ. ಪಾಲಾಕ್ಷಪ್ಪರವರು ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆಯವರ ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ ಸಂತಾಪ ಸೂಚಿಸಿದೆ.
No comments:
Post a Comment