ಭದ್ರಾವತಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಅ.೧೭ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಶೈವ ಸಭಾಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಚಳ್ಳಕೆರೆ, ತಳುಕು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಫೈಜ್ ನಟರಾಜ್ ಉಪನ್ಯಾಸ ನೀಡಲಿದ್ದಾರೆ.
ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ್ ಬಿ. ಆನೇಕೊಪ್ಪ, ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸವಿತ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment