ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದ ಹೊಸ ಸೇತುವೆ ಮೇಲೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ತಕ್ಷಣ ಗಾಯಾಳುಗಳನ್ನು ಸಮೀಪದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿ : ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದ ಹೊಸ ಸೇತುವೆ ಮೇಲೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ತಕ್ಷಣ ಗಾಯಾಳುಗಳನ್ನು ಸಮೀಪದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಅಪಘಾತಗೊಂಡಿರುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಇಆರ್‌ವಿ ಅಧಿಕಾರಿಗಳು ಸಾರ್ವಜನಿಕರ ಸಹಾಯದೊಂದಿಗೆ ಗಾಯಾಳುಗಳನ್ನು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಲ್ಲಿ ಶ್ರಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಆರ್‌ವಿ ಅಧಿಕಾರಿಗಳನ್ನು ಅಭಿನಂದಿಸಿದೆ.
ಹೆಚ್ಚುತ್ತಿರುವ ಅಪಘಾತ :
ಹೊಸಸೇತುವೆಯ ಎರಡು ಬದಿ ತಡೆ ಗೋಡೆ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ಪ್ರವಾಹ ಉಂಟಾಗಿ ತಡೆಗೋಡೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದುವರೆಗೂ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಅಲ್ಲದೆ ಸೇತುವೆ ವಿದ್ಯುತ್ ದೀಪಗಳು ಇಲ್ಲದೆ ಇರುವುದರಿಂದ ವಾಹನಗಳು ಹಾಗು ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗಿದೆ.
ಇತ್ತೀಚೆಗೆ ಸೇತುವೆ ಮೇಲೆ ಅಪಘಾತಗಳು ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕಾಗಿದೆ.
No comments:
Post a Comment