ಜಿ. ಆನಂದಕುಮಾರ್
ಭದ್ರಾವತಿ : ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಜಿಲ್ಲಾಮಟ್ಟದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಿಶಾ ಸಮಿತಿಗೆ ನಗರದ ಯುವ ಮುಖಂಡ ಜಿ. ಆನಂದಕುಮಾರ್ ನಾಮನಿರ್ದೇಶನಗೊಂಡಿದ್ದಾರೆ.
ಸಮಿತಿ ಅಧ್ಯಕ್ಷರಾದ ಸಂಸದ ಬಿ.ವೈ ರಾಘವೇಂದ್ರರವರ ಕೋರಿಕೆ ಮೇರೆಗೆ ಆನಂದಕುಮಾರ್‌ರವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ. ದಿಶಾ ಸಮಿತಿ ಅಧ್ಯಕ್ಷರು ಹಾಗು ೪೦ ಮಂದಿ ಸದಸ್ಯರನ್ನು ಒಳಗೊಂಡಿದೆ.
ಜಿ. ಆನಂದಕುಮಾರ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಮೂಲಕ ಗುರುತಿಸಿಕೊಂಡಿದ್ದು, ಒಂದು ಬಾರಿ ಬಿಜೆಪಿ ಮಂಡಲ ನಗರ ಅಧ್ಯಕ್ಷರಾಗಿ, ೨ ಬಾರಿ ನಗರಸಭೆ ಸದಸ್ಯರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ದಿಶಾ ಸಮಿತಿಗೆ ನಾಮನಿರ್ದೇಶನಗೊಳ್ಳಲು ಕಾರಣಕರ್ತರಾದ ಸಂಸದ ಬಿ.ವೈ ರಾಘವೇಂದ್ರರವರಿಗೆ ಜಿ. ಆನಂದಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment