ಭದ್ರಾವತಿ ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮಂಗಳವಾರ ಗಣಹೋಮ ಜರುಗಿತು.
ಭದ್ರಾವತಿ: ನಗರದ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೧೪ ವರ್ಷದ ಶ್ರೀ ವಿನಾಯಕ ಮಹೋತ್ಸವ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮಂಗಳವಾರ ಗಣಹೋಮ ಜರುಗಿತು.
ಕಳೆದ ವರ್ಷ ಸಹ ಕಾರ್ಖಾನೆ ಉಳಿವಿಗಾಗಿ ಗಣಹೋಮ ಹಮ್ಮಿಕೊಳ್ಳಲಾಗಿತ್ತು. ಇದೀಗ ೨ನೇ ಬಾರಿ ಗಣಹೋಮ ಜರುಗಿದ್ದು, ಕಾಗದನಗರ ೭ನೇ ವಾರ್ಡ್ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕರಾದ ರಮೇಶ್ ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನ್ಯೂಕಾಲೋನಿ, ನ್ಯೂಟೌನ್, ಆಂಜನೇಯ ಅಗ್ರಹಾರ, ಬಾಲಭಾರತಿ, ಬೆಣ್ಣೆಕೃಷ್ಣ ಸರ್ಕಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು,
ನ.೨ರಂದು ಡೊಳ್ಳು ಕುಣಿತ, ತಮಟೆ ಹಾಗು ಮಂಗಳವಾದ್ಯಗಳೊಂದಿಗೆ ಉತ್ಸವ ಮೆರವಣಿಗೆಯೊಂದಿಗೆ ಸಂಜೆ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ.
No comments:
Post a Comment