ಭದ್ರಾವತಿ : ರಸ್ತೆ ಪಕ್ಕದಲ್ಲಿ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿ ಪ್ರವೀಣ್‌ರವರು ಅ.೧೯ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಸಂಜೆ ಖಚಿತ ಮಾಹಿತಿ ಮೇರೆಗೆ ನಗರದ ಗುಂಡಪ್ಪ ಶೆಡ್ ರಸ್ತೆ ಪಕ್ಕದಲ್ಲಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯೋರ್ವ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment