ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬಿ.ಇಡಿ ಕಾಲೇಜ್ ಮತ್ತು ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರ ಸಹಯೋಗದಲ್ಲಿ `ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-೨೦೨೪' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ: ಪ್ರಸ್ತುತ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮತ್ತು ಅರಿವು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರ ಸಹಕಾರ ಹೆಚ್ಚಿನದಾಗಿದೆ ಎಂದು ಲೋಕಾಯುಕ್ತ ಜಿಲ್ಲಾ ಪೊಲೀಸ್ ನಿರೀಕ್ಷಕ ವೀರಬಸಪ್ಪ ಎಲ್. ಕುಶಲಾಪುರ ಹೇಳಿದರು.
ಅವರು ಬುಧವಾರ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬಿ.ಇಡಿ ಕಾಲೇಜ್ ಮತ್ತು ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ `ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-೨೦೨೪' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದ ಮುಂದಿನ ಪೀಳಿಗೆಯ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮತ್ತು ಅರಿವಿನ ಜೊತೆಗೆ ಹಗರಣಗಳ ದೂರು ನೀಡುವ ಪ್ರಕ್ರಿಯೆಗಳು ಮತ್ತು ನ್ಯಾಯದ ಪಾರದರ್ಶಕತೆ ಕುರಿತು ತಿಳಿದು ಕೊಳ್ಳಬೇಕೆಂದರು
ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ ಡಾ. ಎಸ್. ಪಿ ರಾಕೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ಬಿ.ಇಡಿ ಪ್ರಶಿಕ್ಷಣಾರ್ಥಿ ಸಂಭ್ರಮ ಪ್ರಾರ್ಥಿಸಿದರು. ಉಪನ್ಯಾಸಕಿ ಎಚ್.ವಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ ಸ್ವಾಗತಿಸಿ ವಂದಿಸಿದರು.
ಬಿ. ಇಡಿ ಕಾಲೇಜಿನ ಉಪನ್ಯಾಸಕ .ವರದರಾಜ ಸೇರಿದಂತೆ ಉಪನ್ಯಾಸಕ ವೃಂದ, ಬಿ. ಇಡಿ ಪ್ರಶಿಕ್ಷಣಾರ್ಥಿಗಳು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿದ್ದರು.
No comments:
Post a Comment