ಭದ್ರಾವತಿ: ಮನೆಯ ಪಕ್ಕದ ಖಾಲಿ ಸೈಟ್‌ನಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವು ಮಾಡಿರುವ ಘಟನೆ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆಯಲ್ಲಿ ನಡೆದಿದೆ.
ಸ್ಪ್ಲೆಂಡರ್ ದ್ವಿಚಕ್ರ ವಾಹನ ಮನೆಯ ಪಕ್ಕದ ಖಾಲಿ ಸೈಟ್‌ನಲ್ಲಿ ರಾತ್ರಿ ೧೦.೩೦ ಸಮಯದಲ್ಲಿ ನಿಲ್ಲಿಸಿದ್ದು, ಬೆಳಿಗ್ಗೆ ೪ ಗಂಟೆ ಸಮಯದಲ್ಲಿ ನೋಡಿದಾಗ ಸ್ಥಳದಲ್ಲಿ ಇಲ್ಲದಿರುವುದು ಕಂಡು ಬಂದಿದೆ. ಈ ಸಂಬಂಧ ಸಿ.ಎಲ್ ಶಿವಲಿಂಗಪ್ಪ ಎಂಬುವರು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
No comments:
Post a Comment