ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಕೂಟ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟದಲ್ಲಿ ಮೊದಲ ದಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಮೊದಲ ಪಂದ್ಯ ನಗರಸಭೆ ನೀರು ಸರಬರಾಜು ವಿಭಾಗ ಹಾಗು ಸರ್. ಮಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡಗಳ ನಡುವೆ ನಡೆಯಿತು.
ಭದ್ರಾವತಿ: ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟಕ್ಕೆ ಶುಕ್ರವಾರ ಬೆಳಿಗ್ಗೆ ಅಂತರಾಷ್ಟ್ರೀಯ ಕ್ರೀಡಾಪಟು ಸಿ.ಪಿ.ಆರ್ ಸುಧೀರ್ ಕುಮಾರ್ ಕ್ರೀಡಾ ಜ್ಯೋತಿ ತರುವ ಮೂಲಕ ಉದ್ಘಾಟಿಸಿದರು.
ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಕ್ರೀಡಾಪಟುಗಳು ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು. ತೀರ್ಪುಗಾರರು ನೀಡುವ ತೀರ್ಪಿಗೆ ತಲೆಬಾಗಬೇಕು ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್ ಮಾತನಾಡಿ, ನಾಡಹಬ್ಬ ದಸರಾ ಆಚರಣೆಯಲ್ಲಿ ಕ್ರೀಡಾ ಕೂಟವೇ ಒಂದು ವಿಶೇಷತೆಯಾಗಿದೆ. ಪ್ರತಿ ವರ್ಷ ಕ್ರೀಡಾಕೂಟದ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್ ಸೇರಿದಂತೆ ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ನಗರಸಭೆ ಸದಸ್ಯರು ಮತ್ತು ವ್ಯವಸ್ಥಾಪಕಿ ಸುನಿತಾ ಕುಮಾರಿ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಹಾಗು ತಾಲೂಕು ಅಧ್ಯಕ್ಷ ಚೇತನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೊದಲ ದಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಮೊದಲ ಪಂದ್ಯ ನಗರಸಭೆ ನೀರು ಸರಬರಾಜು ವಿಭಾಗ ಹಾಗು ಸರ್. ಮಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡಗಳ ನಡುವೆ ನಡೆಯಿತು.
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಕೂಟ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟಕ್ಕೆ ಶುಕ್ರವಾರ ಬೆಳಿಗ್ಗೆ ಅಂತರಾಷ್ಟ್ರೀಯ ಕ್ರೀಡಾಪಟು ಸಿ.ಪಿ.ಆರ್ ಸುಧೀರ್ ಕುಮಾರ್ ಕ್ರೀಡಾ ಜ್ಯೋತಿ ತರುವ ಮೂಲಕ ಉದ್ಘಾಟಿಸಿದರು.
No comments:
Post a Comment