ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಕೇಂದ್ರ ಜಾಗೃತಾ ಆಯೋಗ ಮತ್ತು ಸೈಲ್ ಕಾರ್ಪೋರೇಟ್ ವಿಜಿಲೆನ್ಸ್ ನಿರ್ದೇಶನದಂತೆ ಈ ಬಾರಿ ಜಾಗೃತಾ ತಿಳುವಳಿಕೆ ಸಪ್ತಾಹ "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಕೇಂದ್ರ ಜಾಗೃತಾ ಆಯೋಗ ಮತ್ತು ಸೈಲ್ ಕಾರ್ಪೋರೇಟ್ ವಿಜಿಲೆನ್ಸ್ ನಿರ್ದೇಶನದಂತೆ ಈ ಬಾರಿ ಜಾಗೃತಾ ತಿಳುವಳಿಕೆ ಸಪ್ತಾಹ "ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ" ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.
ಜಾಗೃತಾ ತಿಳುವಳಿಕೆ ಸಪ್ತಾಹ ಸಮಾರೋಪ ಸಮಾರಂಭ ಶಾರದಾ ಮಂದಿರದಲ್ಲಿ ಆಯೋಜಿಸಲಾಗಿತ್ತು. ಸೈಂಟ್ ಚಾರ್ಲ್ಸ್ ಶಾಲೆ ೩ನೇ ತರಗತಿ ವಿದ್ಯಾರ್ಥಿನಿ ಪಾವನಿ ಎಂ. ನಾಯಕ್ ಭರತನಾಟ್ಯ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು. ವೃತ್ತಿ ಬದುಕು ಮತ್ತು ವೈಯುಕ್ತಿಕ ಬದುಕಿನಲ್ಲಿ ಪ್ರಾಮಾಣಿಕತೆ, ನೀತಿ ಮತ್ತು ಮೌಲ್ಯಗಳ ಮಹತ್ವ ಸಾರುವ "ಸತ್ಯ-ನಿಷ್ಠೆ" ನಾಟಕ ನಗರದ ಅಪ್ಪರ್ ಹುತ್ತಾ ಅನನ್ಯ ಶಾಲೆಯ ಮಕ್ಕಳು ಅದ್ಭುತವಾಗಿ ಪ್ರದರ್ಶಿಸಿದರು.
ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್, ನಮ್ಮ ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕಿರುವ ಹಾಗು ಜೀವನದಲ್ಲಿ ಅತಿಮುಖ್ಯವಾದ ಪ್ರಾಮಾಣಿಕತೆ, ನೀತಿ, ಪಾರದರ್ಶಕತೆ ಮತ್ತು ಮೌಲ್ಯಗಳ ಮಹತ್ವ ಬಗ್ಗೆ ಒತ್ತಿಹೇಳಿದರು.
ಮಹಾಪ್ರಬಂಧಕ(ವಿಜಿಲೆನ್ಸ್ ಮತ್ತು ಎ.ಸಿ.ವಿ.ಓ) ರಘುನಾಥ ಬಿ. ಅಷ್ಟಪುತ್ರೆ, ಜಾಗೃತಾ ತಿಳುವಳಿಕೆ ಸಪ್ತಾಹ ಅಂಗವಾಗಿ ೧೮೨ ಉದ್ಯೋಗಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ, ಮಾರುಕಟ್ಟೆ ಇಲಾಖೆ ಆಯೋಜಿಸಿದ್ದ ಗ್ರಾಹಕರ ಸಭೆ, ನೈತಿಕ ಉದ್ಯಾನವನ ಸ್ವಚ್ಛತೆ ಮುಂತಾದ ಚಟುವಟಿಕೆಗಳ ವಿವರವಾದ ವರದಿ ಮಂಡಿಸಿದರು.
ಎಥಿಕ್ಸ್ ಕ್ಲಬ್ ಚಟುವಟಿಕೆಗಳಲ್ಲಿ ಸಹಕಾರ ನೀಡಿದ ಅನನ್ಯ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್, ಆಡಳಿತಾಧಿಕಾರಿ ವೇಣುಗೋಪಾಲ್, ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್ ಮತ್ತು ಸಿಬ್ಬಂದಿಗಳನ್ನು ಗೌರವಿಸಲಾಯಿತು. ಜಾಗೃತಾ ತಿಳುವಳಿಕೆ ಸಪ್ತಾಹ ಅಂಗವಾಗಿ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಕಾರ್ಮಿಕರ ಸಂಘದ ಉಪಾಧ್ಯಕ್ಷ ಕೆ.ಬಿ ಮಲ್ಲಿಕಾರ್ಜುನ, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ವಿಕಾಸ್ ಬಸೇರ್ ಸೇರಿದಂತೆ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.
ಕಿರಿಯ ಪ್ರಬಂಧಕ(ಮಿಲ್ಸ್ ಮತ್ತು ಆರ್.ಟಿ.ಎಸ್) ಸಿ. ಲಕ್ಷ್ಮೀಕಾಂತ ಪ್ರಾರ್ಥಿಸಿದರು. ವಿಜಿಲೆನ್ಸ್ ಇಲಾಖೆಯ ಕೇದಾರನಾಥ್ ಸ್ವಾಗತಿಸಿ, ಸಹಾಯಕ ಮಹಾಪ್ರಬಂಧಕ ಎಲ್. ಕುತಲನಾಥನ್, ಕಾರ್ಯಕ್ರಮ ನಿರೂಪಿಸಿ, ಚೇತನ್ ತಡ್ಕಲ್ ವಂದಿಸಿದರು.
No comments:
Post a Comment