Saturday, November 2, 2024

ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

    ಭದ್ರಾವತಿ: ದ್ವಿಚಕ್ರ ವಾಹನ ಸವಾರನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್(ಎಚ್.ಕೆ ಜಂಕ್ಷನ್) ಸಮೀಪನಡೆದಿದೆ. 
    ನಗರಸಭೆ ವ್ಯಾಪ್ತಿಯ ಹೊಸಮನೆ ನಿವಾಸಿ ಮಂಜುನಾಥ್ ಮೃತಪಟ್ಟಿದ್ದು, ಅ.೩೧ರಂದು ಬೆಳಿಗ್ಗೆ ಸುಮಾರು ೧೧.೩೦ರ ಸಮಯದಲ್ಲಿ ಬಿ.ಆರ್.ಪಿ ರಸ್ತೆಯಲ್ಲಿ ಬರುತ್ತಿರುವಾಗ ಎಚ್.ಕೆ ಜಂಕ್ಷನ್ ಸಮೀಪ ಅಪಘಾತ ಸಂಭವಿಸಿದೆ. ಈ ಸಂಬಂಧ ಇವರ ಸಹೋದರ ಎಂ.ಎಸ್ ಉಮೇಶ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಈ ಹಿನ್ನಲೆಯಲ್ಲಿ ಕಾರು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.  . 

No comments:

Post a Comment