ಶುಕ್ರವಾರ, ನವೆಂಬರ್ 8, 2024

ಅಪ್ರಾಪ್ತ ಬಾಲಿಕಯ ಮೇಲೆ ಲೈಂಗಿಕ ದೌರ್ಜನ್ಯ : ೪ ವರ್ಷ ಕಠಿಣ ಜೈಲು ಶಿಕ್ಷೆ

ಭದ್ರಾವತಿ :  ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-೧) ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ವ್ಯಕ್ತಿಯೋರ್ವನಿಗೆ ೪ ವರ್ಷ ಕಠಿಣ ಜೈಲು ಶಿಕ್ಷೆ ಹಾಗು ೫೧ ಸಾವಿರ ರು. ದಂಡ ವಿಧಿಸಿರುವ ಘಟನೆ ನಡೆದಿದೆ. 
        ಸಾಲಿನಲ್ಲಿ ಭದ್ರಾವತಿ ತಾಲೂಕಿನ ೪೩ ವರ್ಷದ ವ್ಯಕ್ತಿಯೊಬ್ಬರು ೯ ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ೨೦೨೩ರಲ್ಲಿ ಲೈಂಗಿಕ ದೌರ್ಜನ್ಯ ವೆಸಗಿದ್ದು, ಈ ಸಂಬಂಧ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕಲಂ ೩೭೬(ಎ)(ಬಿ) ಐಪಿಸಿ ಮತ್ತು ಕಲಂ ೦೮ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. 
    ಅಂದಿನ ತನಿಖಾಧಿಕಾರಿಯಾಗಿದ್ದ ನಗರವೃತ್ತ ನಿರೀಕ್ಷಕ ಶಾಂತಿನಾಥ್‌ರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪಿಯ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ,   ನ್ಯಾಯಾಧೀಶರಾದ ಜೆ.ಎಸ್ ಮೋಹನ್ ರವರು ನ.೭ ರಂದು ೪  ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ೫೧ ಸಾವಿರ  ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೩ ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿದ್ದು, ಪರಿಹಾರ ರೂಪವಾಗಿ  ದಂಡದ ಮೊತ್ತದಲ್ಲಿ  ೫೦ ಸಾವಿರ ಮತ್ತು ಸರ್ಕಾರದಿಂದ ೨ ಲಕ್ಷ ರು. ಗಳನ್ನು  ನೊಂದ ಬಾಲಕಿಗೆ ನೀಡಲು ಆದೇಶಿಸಿರುತ್ತಾರೆ. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ  ಸರ್ಕಾರಿ ಅಭಿಯೋಜಕ ಎಚ್.ಆರ್ ಶ್ರೀಧರ್‌ರವರು ವಾದ ಮಂಡಿಸಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ