ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ೮ ದಿನಗಳ ಕಾಲ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೯ನೇ ಜನ್ಮದಿನೋತ್ಸವ ಸಾಮಾಜಿಕ ಸೇವಾ ಕಾರ್ಯಗಳು ಹಾಗು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಶನಿವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಡಾ. ಕೊಟೇಶ್ ಶರ್ಮ ಶಿಬಿರ ಉದ್ಘಾಟಿಸುವ ಜೊತೆಗೆ ರಕ್ತದಾನ ಮಾಡಿದರು.
ಭದ್ರಾವತಿ: ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ೮ ದಿನಗಳ ಕಾಲ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೯ನೇ ಜನ್ಮದಿನೋತ್ಸವ ಸಾಮಾಜಿಕ ಸೇವಾ ಕಾರ್ಯಗಳು ಹಾಗು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಶನಿವಾರ ಬೆಳಿಗ್ಗೆ ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರಸಂಕೀರ್ತನೆ, ಪ್ರಶಾಂತಿ ಧ್ವಜಾರೋಹಣ, ಶಿವಮೊಗ್ಗ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರ, ಸಾಮೂಹಿಕ ಶ್ರೀ ಸಾಯಿ ಸತ್ಯನಾರಾಯಣ ಪೂಜೆ, ಶ್ರೀ ಸತ್ಯ ಸಾಯಿ ಬಾಬಾರವರ ಪಲ್ಲಕ್ಕಿ ಉತ್ಸವ, ಶ್ರೀ ಸತ್ಯ ಸಾಯಿ ಸಹಸ್ರನಾಮಾರ್ಚನೆ, ಮಧ್ಯಾಹ್ನ ಮಹಾಮಂಗಳಾರತಿ, ನಾರಾಯಣರಿಗೆ ವಸ್ತ್ರದಾನ ಮತ್ತು ನಾರಾಯಣ ಸೇವೆ ಹಾಗು ಶಾಲಾ ಮಕ್ಕಳಿಗೆ, ಪೋಷಕರಿಗೆ ಮತ್ತು ಭಕ್ತಾಧಿಗಳಿಗೆ ಮಹಾಪ್ರಸಾದ ವಿನಿಯೋಗ, ಸಂಜೆ ವೇದ ಪಠಣ ಹಾಗು ಭಜನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಪ್ರಶಾಂತಿ ದ್ವಜಾರೋಹಣ ಹಿರಿಯ ಸಾಯಿ ಭಕ್ತರಾದ ಶಿವಾಜಿರಾವ್ ನೆರವೇರಿಸಿದರು. ಉಚಿತ ರಕ್ತದಾನ ಶಿಬಿರ ಡಾ. ಕೊಟ್ರೇಶ್ ಶರ್ಮ ಉದ್ಘಾಟಿಸಿದರು. ಶಿವಮೊಗ್ಗ ರಾಮಕೃಷ್ಣ ಆಶ್ರಮದ ಶ್ರೀ ವಿಜಯಾನಂದ ಸರಸ್ವತಿ ಸ್ವಾಮೀಜಿ ಪಾಲ್ಗೊಂಡು ಭಕ್ತರನ್ನು ಆಶೀರ್ವದಿಸಿದರು. ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಶ್ಯಾಮರಾಯ ಆಚಾರ್, ಮೃತ್ಯುಂಜಯ ಕಾನಿಟ್ಕರ್ ಸೇರಿದಂತೆ ಬೋಧಕ ಹಾಗು ಬೋಧಕೇತರ ವರ್ಗದವರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶಿವಮೊಗ್ಗ ಶಾಖೆಯ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಭಕ್ತರು, ಸೇವಾಕರ್ತರು, ಶಾಲಾ ಮಕ್ಕಳು, ಪೋಷಕರು ಪಾಲ್ಗೊಂಡಿದ್ದರು.
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ೮ ದಿನಗಳ ಕಾಲ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೯ನೇ ಜನ್ಮದಿನೋತ್ಸವ ಸಾಮಾಜಿಕ ಸೇವಾ ಕಾರ್ಯಗಳು ಹಾಗು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಶನಿವಾರ ಮಧ್ಯಾಹ್ನ ಸಾವಿರಾರು ಮಂದಿಗೆ ಮಹಾಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗಿತ್ತು.
No comments:
Post a Comment