ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ನೃತ್ಯ ಸಂಭ್ರಮ ಹಾಗು ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಯಮಿ ಬಿ.ಕೆ ಜಗನ್ನಾಥ, ಎಸ್. ಮಣಿಶೇಖರ್, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ : ಪ್ರತಿಯೊಬ್ಬರು ಕನ್ನಡ ಭಾಷೆ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕು. ಈ ಮೂಲಕ ನೆಲ, ಜಲ, ಭಾಷೆ ಉಳಿವಿಗಾಗಿ ಹೋರಾಡಬೇಕೆಂದು ಉದ್ಯಮಿ ಬಿ.ಕೆ ಜಗನ್ನಾಥ ಹೇಳಿದರು.
ಅವರು ನಗರಸಭೆ ವ್ಯಾಪ್ತಿಯ ಸಿದ್ದರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ನೃತ್ಯ ಸಂಭ್ರಮ ಹಾಗು ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನ್ನಡ ನಾಡಿನಲ್ಲಿರುವ ನಾವೆಲ್ಲರೂ ಒಂದೇ. ನಮ್ಮ ಮಾತೃ ಭಾಷೆ ಕನ್ನಡ. ನಾವೆಲ್ಲರೂ ನೆಲ, ಜಲ, ಭಾಷೆ ಉಳಿವಿಗಾಗಿ ಕಂಕಣ ಬದ್ಧರಾಗಬೇಕೆಂದರು.
ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಯುವ ಮುಖಂಡ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹಾಗು ಭದ್ರಾವತಿ ರಾಮಾಚಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಮಾತನಾಡಿದರು.
ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.
ಪ್ರಮುಖರಾದ ಎಸ್.ಬಿ ಶಿವಲಿಂಗಪ್ಪ, ಅಪೇಕ್ಷ ಮಂಜುನಾಥ್, ಡಿ.ಬಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆ, ಎ.ಎಸ್ ಪದ್ಮಾವತಿ, ಬಸವರಾಜಯ್ಯ, ವೈ.ಕೆ ಹನುಮಂತಯ್ಯ, ಶಶಿಕುಮಾರ್ ಗೌಡ, ಭದ್ರಾವತಿ ಕುಮಾರ್, ಬಿ.ಎನ್ ರಾಜು, ಕೆ.ಆರ್ ಪ್ರಶಾಂತ್, ಎನ್. ರುದ್ರಾರಾಧ್ಯ, ಎಸ್.ಕೆ ಮೋಹನ್, ರಮೇಶ್ ಪಿ. ನಾಯ್ಕ, ನಿರ್ಮಲ ಮೇರಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ರಾಜ್ಯೋತ್ಸವ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗು ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಕೆ.ಎಸ್ ನಾಗರಾಜ್, ಉಪಾಧ್ಯಕ್ಷರಾದ ರುದ್ರಪ್ಪ, ನಾರಾಯಣ ರೆಡ್ಡಿ, ಮುಖ್ಯ ಸಂಚಾಲಕ ಎನ್.ಸಿ ಪ್ರಕಾಶ್, ಸಹ ಕಾರ್ಯದರ್ಶಿ ಆರ್. ಅಶೋಕ ಆರ್. ಕೆಲಗೇರಿ, ಸದಸ್ಯರಾದ ಭಾಗಭೂಷಣ, ಲಕ್ಷ್ಮೀಕಾಂತ, ವಿ. ರಮೇಶ್, ಜಿ.ಸಿ ಸದಾಶಿವ, ಎಸ್. ಪೂರ್ಣಿಮಾ ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.
ಪ್ರಧಾನ ಕಾರ್ಯದರ್ಶಿ ಬಿ.ಎ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಂತೋಷ್ ಸ್ವಾಗತಿಸಿದರು.
No comments:
Post a Comment