ಭದ್ರಾವತಿ ನಗರದ ನ್ಯೂಟೌನ್ ಶ್ರೀ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ದೀಪಾವಳಿ ಹಬ್ಬ ವಿಶೇಷವಾಗಿ ಆಚರಿಸಲಾಯಿತು.
ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ದೀಪಾವಳಿ ಹಬ್ಬ ವಿಶೇಷವಾಗಿ ಆಚರಿಸಲಾಯಿತು.
ವಿಶ್ವವಿದ್ಯಾಲಯದ ಮಾಲಾ ಅಕ್ಕ ದೀಪಾವಳಿ ಹಬ್ಬದ ಧಾರ್ಮಿಕ ಪರಂಪರೆ, ಮಹತ್ವ ಕುರಿತು ವಿವರಿಸಿದರು. ನಮ್ಮೆಲ್ಲರ ಬದುಕಿನಲ್ಲಿ ದೀಪಾವಳಿ ಕತ್ತಲೆಯಿಂದ ಬೆಳಕಿನೆಡೆಗೆ ಸಾಗುವ ವಿಶೇಷತೆಯಾಗಬೇಕು ಎಂದರು.
ದೀಪಾವಳಿ ಅಂಗವಾಗಿ ವಿಶ್ವವಿದ್ಯಾಲಯದಲ್ಲಿ ವಿಶೇಷ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತರಿಗೆ ಮಾಲಾ ಅಕ್ಕ ಹಬ್ಬದ ಶುಭಾಶಯ ಕೋರಿ ಅಶೀರ್ವದಿಸಿದರು. ನಂತರ ಮಹಾ ಪ್ರಸಾದ ವಿತರಣೆ ನಡೆಯಿತು.
ವಿಶ್ವವಿದ್ಯಾಲಯದಲ್ಲಿ ಪ್ರತಿಯೊಂದು ಹಬ್ಬ ವಿಶೇಷತೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ಭಕ್ತರ ಸಂಖ್ಯೆ ಸಹ ಏರಿಕೆಯಾಗುತ್ತಿದೆ.ಪ್ರತಿದಿನ ಬಾಬಾರವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
No comments:
Post a Comment